Connect with us

ಸ್ಥಳೀಯ

T20 World Cup-ಸಂಜು ಸ್ಯಾಮ್ಸನ್‌ರ ಅದ್ಭುತ 97 ರನ್‌ಗಳೊಂದಿಗೆ ವಿಂಡೀಸ್‌ನ್ನು ಸೋಲಿಸಿ ಸೆಮಿಫೈನಲ್‌ಗೇರಿದ ಭಾರತ..!

Published

on

Ad Widget

Ad Widget

Ad Widget

Ad Widget

ಟಿ20 ವಿಶ್ವಕಪ್ 2026ರಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸೂಪರ್-8 ಹಂತದಲ್ಲಿ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ್ನು 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಅದ್ಭುತ ಅರ್ಧಶತಕದ (ಔಟಾಗದೆ 97 ರನ್, 50 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್) ನೆರವಿನಿಂದ ಭಾರತ ಈ ಗೆಲುವು ಸಾಧಿಸಿತು.

Ad Widget

Ad Widget

Ad Widget

Ad Widget

ಕೋಲ್ಕತಾ: ಟಿ20 ವಿಶ್ವಕಪ್ 2026ರಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸೂಪರ್-8 ಹಂತದಲ್ಲಿ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ್ನು 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಅದ್ಭುತ ಅರ್ಧಶತಕದ (ಔಟಾಗದೆ 97 ರನ್, 50 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್) ನೆರವಿನಿಂದ ಭಾರತ ಈ ಗೆಲುವು ಸಾಧಿಸಿತು.

Ad Widget

Ad Widget alt="Ad Widget"/>

Ad Widget

ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್‌ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 195 ರನ್ ಗಳಿಸಿತು. ಗೆಲ್ಲಲು 196 ರನ್ ಗುರಿ ಬೆನ್ನಟ್ಟಿದ ಭಾರತ 19.2 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 199 ರನ್ ಗಳಿಸಿ 4 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು. ಇದು ಟಿ20 ವಿಶ್ವಕಪ್‌ನಲ್ಲಿ ಭಾರತದ ಅತಿ ದೊಡ್ಡ ಚೇಸ್ ದಾಖಲೆಯಾಗಿದೆ.

Ad Widget

Ad Widget <> Ad Widget

ಸಂಜು ಸ್ಯಾಮ್ಸನ್ ಅವರು ಆಕ್ರಮಣಕಾರಿ ಮತ್ತು ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ಮ್ಯಾಚ್‌ನ ಪುರುಷೋತ್ತಮ ಆಟಗಾರರಾದರು. ಇತರ ಕೊಡುಗೆಗಳು: ತಿಲಕ್ ವರ್ಮಾ 27 (15 ಎಸೆತ), ಸೂರ್ಯಕುಮಾರ್ ಯಾದವ್ 18, ಹಾರ್ದಿಕ್ ಪಾಂಡ್ಯ 17 ರನ್. ವಿಂಡೀಸ್ ಪರ ಜೇಸನ್ ಹೋಲ್ಡರ್ (2-38) ಮತ್ತು ಶಮರ್ ಜೋಸೆಫ್ (2-42) ತಲಾ ಎರಡು ವಿಕೆಟ್ ಪಡೆದರು.

ವೆಸ್ಟ್‌ಇಂಡೀಸ್ ಇನಿಂಗ್ಸ್‌ನಲ್ಲಿ ನಾಯಕ ಶಾಯ್ ಹೋಪ್ 32, ರೋಸ್ಟನ್ ಚೇಸ್ 40 ರನ್ ನೀಡಿದರು. ನಂತರ ರೋವ್‌ಮನ್ ಪೊವೆಲ್ (ಔಟಾಗದೆ 34) ಮತ್ತು ಜೇಸನ್ ಹೋಲ್ಡರ್ (ಔಟಾಗದೆ 37) ಅವರ ಅಜೇಯ ಜೊತೆಯಾಟದಿಂದ 76 ರನ್ ಬಂದವು. ಪೊವೆಲ್ ಟಿ20 ಕ್ರಿಕೆಟ್‌ನಲ್ಲಿ ವಿಂಡೀಸ್‌ಗೆ 150 ಸಿಕ್ಸರ್ ಸಿಡಿಸಿದ ಮೊದಲ ಆಟಗಾರರಾದರು.

Ad Widget

Ad Widget

ಭಾರತದ ಬೌಲಿಂಗ್‌ನಲ್ಲಿ ಜಸ್‌ಪ್ರಿತ್ ಬುಮ್ರಾ 2-36ರೊಂದಿಗೆ ಮಿಂಚಿದರು. ಹಾರ್ದಿಕ್ ಪಾಂಡ್ಯ ಮತ್ತು ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದು, ಮಾರ್ಚ್ 5ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೆಣಸಲಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!