ಅಪರಾಧ
Bengaluru-ಬೆಂಗಳೂರು: ವಿಲ್ಲಾದಲ್ಲಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ರಾಜಕಾರಣಿ ಪುತ್ರ ಸೇರಿ ಐವರ ಬಂಧನ
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಲಾವೊಂದರಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜಕಾರಣಿಯೊಬ್ಬರ ಮಗ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಲ್ಲಾವೊಂದರಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜಕಾರಣಿಯೊಬ್ಬರ ಮಗ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣದ ವಿವರ:
ಪಶ್ಚಿಮ ಬಂಗಾಳ ಮೂಲದ ಡಿಕ್ಷನ್ ಸ್ಯಾಂಡ್ರೋ (21) ಮತ್ತು ಸಕಲೇಶಪುರ ಮೂಲದ ನಿಖಿಲ್ (34) ಎಂಬುವವರು ಪ್ರಮುಖ ಆರೋಪಿಗಳಾಗಿದ್ದು, ಇವರನ್ನು ಈಗಾಗಲೇ ಬಂಧಿಸಲಾಗಿತ್ತು. ಇವರು ನೀಡಿದ ಮಾಹಿತಿ ಆಧರಿಸಿ, ಕೃತ್ಯಕ್ಕೆ ಪರೋಕ್ಷವಾಗಿ ಸಹಕರಿಸಿದ ಆರೋಪದ ಮೇಲೆ ಶಿವಮೊಗ್ಗದ ಶ್ರವಣ್ (21), ದಾವಣಗೆರೆಯ ಅನಿರುದ್ಧ್ (33) ಮತ್ತು ಗುಜರಾತ್ ಮೂಲದ ಮೋಹಿತ್ ಜೈನ್ (23) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜಕಾರಣಿ ಪುತ್ರನ ಬಂಧನವೇಕೆ?
ಬಂಧಿತರ ಪೈಕಿ ಅನಿರುದ್ಧ್, ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯರೊಬ್ಬರ ಪುತ್ರ ಎಂದು ತಿಳಿದುಬಂದಿದೆ. ಪ್ರಮುಖ ಆರೋಪಿ ನಿಖಿಲ್ನ ಸ್ನೇಹಿತನಾಗಿರುವ ಈತ, ತನ್ನ ಹೆಸರಿನಲ್ಲಿಯೇ ಕೃತ್ಯ ನಡೆದ ವಿಲ್ಲಾವನ್ನು ಬುಕ್ ಮಾಡಿದ್ದನು. ಅಲ್ಲದೆ, ಕೃತ್ಯದ ನಂತರ ಸಂತ್ರಸ್ತೆಯನ್ನು ಲುಲೂ ಮಾಲ್ ಬಳಿ ಬಿಡಲು ಬಳಸಲಾದ ಕಾರು ಆರೋಪಿ ಮೋಹಿತ್ಗೆ ಸೇರಿದ್ದಾಗಿದೆ. ವಿಲ್ಲಾ ಬುಕಿಂಗ್ ಕುರಿತು ವಿಚಾರಣೆಗೆ ಕರೆಸಿದ್ದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಅನಿರುದ್ಧ್ನನ್ನು ಬಂಧಿಸಿದ್ದಾರೆ.
ಜಾಲತಾಣದ ಮೂಲಕ ಬಲೆ:
ಆರೋಪಿಗಳು ಇನ್ಸ್ಟಾಗ್ರಾಮ್ ಮೂಲಕ ಯುವತಿಯರಿಗೆ ಗಾಳ ಹಾಕುತ್ತಿದ್ದರು. ಫೋಟೊಶೂಟ್, ಮಾಡೆಲಿಂಗ್ ಅವಕಾಶ ಹಾಗೂ ಪಾರ್ಟಿ ನೆಪದಲ್ಲಿ ಸ್ನೇಹ ಬೆಳೆಸುತ್ತಿದ್ದರು. ಆರಂಭದಲ್ಲಿ ಪಬ್ ಮತ್ತು ಕೆಫೆಗಳಲ್ಲಿ ಸಭ್ಯರಂತೆ ವರ್ತಿಸಿ ನಂಬಿಕೆ ಗಳಿಸುತ್ತಿದ್ದ ಇವರು, ನಂತರ ಪಾರ್ಟಿ ನೆಪದಲ್ಲಿ ವಿಲ್ಲಾಗಳಿಗೆ ಕರೆದೊಯ್ದು ಕೃತ್ಯ ಎಸಗುತ್ತಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಸಾಕ್ಷ್ಯ ನಾಶದ ಶಂಕೆ:
ಆರೋಪಿ ನಿಖಿಲ್ ಬಳಸುತ್ತಿದ್ದ ಐಫೋನ್ನಲ್ಲಿ ಇದೇ ರೀತಿ ವಂಚನೆಗೊಳಗಾದ ಹಲವು ಯುವತಿಯರ ಮಾಹಿತಿ ಮತ್ತು ಸಾಕ್ಷ್ಯಗಳಿವೆ ಎನ್ನಲಾಗಿದೆ. ಆದರೆ, ಮೊಬೈಲ್ ಕಳೆದುಹೋಗಿದೆ ಎಂದು ಆರೋಪಿ ನಾಟಕವಾಡುತ್ತಿದ್ದಾನೆ. ಇನ್ನು ಈ ವಿಲ್ಲಾ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ. ಶ್ರವಣ್ ಎಂಬ ಆರೋಪಿ ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಹಿನ್ನೆಲೆಯನ್ನೂ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ22 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್6 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















