ಬಿಗ್ ನ್ಯೂಸ್
ವಾಜಪೇಯಿ ಮತ್ತು ಅಡ್ವಾಣಿ ಪರಮಾಪ್ತ ಮಾಜಿ ಬಿಜೆಪಿಗ ಯಶವಂತ್ ಸಿನ್ಹಾ ವಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ | ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ನೀಲಿಕಣ್ಣಿನ ಹುಡುಗನಿಗೆ ಒಲಿಯುವುದೇ ದೇಶದ ಅತ್ಯುನ್ನತ ಹುದ್ದೆ ?
ನವದೆಹಲಿ: ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ವಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷಗಳು ಈ ವಿಷಯವನ್ನು ಪ್ರಕಟಿಸಿವೆ.
ಸಂಸತ್ ಭವನದಲ್ಲಿ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಕರೆದಿದ್ದ ವಿಪಕ್ಷಗಳ ಸಭೆಯಲ್ಲಿ ಅವಿರೋಧವಾಗಿ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿ ಎಂದು ಒಪ್ಪಿಕೊಳ್ಳಲಾಯಿತು
‘ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರನ್ನು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದನ್ನು ಘೋಷಿಸಲು ಸಂತಸವಾಗುತ್ತಿದೆ’ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಹೇಳಿದರು.
‘ ಅವರ ಸುದೀರ್ಘ ಸಾರ್ವಜನಿಕ ಜೀವನ ಮತ್ತು ವಿಶಿಷ್ಟ ವೃತ್ತಿಜೀವನದಲ್ಲಿ ಯಶವಂತ್ ಸಿನ್ಹಾ ಅವರು ವಿವಿಧ ರೀತಿಯಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದೀಯ ಮತ್ತು ಕೇಂದ್ರದ ಹಣಕಾಸು ಹಾಗೂ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು ಭಾರತೀಯ ಗಣರಾಜ್ಯ ಮತ್ತು ಸಂವಿಧಾನದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಲು ಅರ್ಹರಾಗಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ದೇಶಕ್ಕೆ ಸಮರ್ಥ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವಂತೆ ಎಲ್ಲ ಪಕ್ಷಗಳಿಗೂ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.‘ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಮೋದಿ ಸರ್ಕಾರವು ಯಾವುದೇ ಗಂಭೀರ ಪ್ರಯತ್ನ ಮಾಡದಿರುವ ಬಗ್ಗೆ ವಿಷಾದವಿದೆ’ ಎಂದು ಜೈರಾಂ ರಮೇಶ್ ಹೇಳಿದ್ದಾರೆ.
ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರು ಪ್ರತಿಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ ಬಳಿಕ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಬಿಹಾರ ರಾಜ್ಯಕ್ಕೆ ಸೇರಿದವರಾದ ಯಶವಂತ ಸಿನ್ಹಾ ಅವರು ರಾಜಕೀಯಕ್ಕೆ ಬರುವ ಮೊದಲು ಐಎಎಸ್ ಅಧಿಕಾರಿಯಾಗಿದ್ದರು. ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ನಿಕಟವರ್ತಿಯಾಗಿದ್ದ ಅವರು ಸಿವಿಲ್ ಸರ್ವಿಸ್ ಗೆ ರಾಜೀನಾಮೆ ನೀಡಿದ ಬಳಿಕ ಜನಾತ ಪಕ್ಷದ ಮೂಲಕ ತನ್ನ ರಾಜಕೀಯ ಜೀವನ ಆರಂಭಿಸಿದರು. ಅವರು ಅಂದಿನ ಪ್ರಧಾನಿ ಚಂದ್ರ ಶೇಖರ್ ಮಂತ್ರಿ ಮಂಡಲದಲ್ಲಿ 1990-91 ರವರೆಗೆ ಕೇಂದ್ರ ಅರ್ಥ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು . ಅವರು ಚಂದ್ರಶೇಖರ್ ಅವರ ನೀಲಿ ಕಣ್ಣಿನ ಹುಡುಗ ಎಂದೇ ರಾಜಕೀಯ ವಲಯದಲ್ಲಿ ಖ್ಯಾತರಾಗಿದ್ದರು
1996 ರಲ್ಲಿ ಅಡ್ವಾಣಿಯವರ ಮೂಲಕ ಬಿಜೆಪಿ ಸೇರ್ಪಡೆಗೊಂಡ ಅವರು 1998 ರಿಂದ 2002ರವರೆಗೆ ಅಟಲ್ ಬಿಹಾರಿ ವಾಜಪೇಯಿ ನೇತ್ರತ್ವದ ಎನ್ ಡಿಎ ಸರಕಾರದಲ್ಲಿ ಅರ್ಥ ಸಚಿವರಾಗಿ ಹಾಗೂ 2002 ರಿಂದ 2004 ರವರೆಗೆ ವಾಜಪೇಯಿ ಸರಕಾರದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ಅವರು ವಾಜಪೇಯಿಯವರ ಅತ್ಯಂತ ನಂಬುಗೆಯ ಸಚಿವರಲ್ಲಿ ಒಬ್ಬರಾಗಿದ್ದರು.
2013 ರಲ್ಲಿ ಅಡ್ವಾಣಿಯವರನ್ನು ಬಿಟ್ಟು ಮೋದಿಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಆಯ್ಕೆ ಮಾಡಲು ಗೋವಾದಲ್ಲಿ ಬಿಜೆಪಿಯು ತನ್ನ ಕಾರ್ಯಕಾರಣಿ ಸಭೆ ಕರೆದಿದ್ದಾಗ ಅದಕ್ಕೆ ತೆರಳದೇ ಯಶವಂತ್ ಸಿನ್ಹಾ ಅಡ್ವಾಣಿ ಪರ ನಿಷ್ಟೆ ತೋರಿದ್ದರು. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರಗೆ ಟಿಕೆಟ್ ನಿರಾಕರಿಸಿತ್ತು. ಅವರ ಬದಲು ಅವರ ಪುತ್ರ ಜಯಂತ್ ಸಿನ್ಹಾ ಅವರಿಗೆ ಟಿಕೆಟ್ ನೀಡಿತ್ತು.
ಬಳಿಕ ಮೋದಿ ಸರಕಾರದ ಕಟು ಟೀಕಕಾರರಾಗಿ ಬದಲಾದ ಅವರು ಕೆಲ ವರ್ಷಗಳ ಹಿಂದೆ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಸೇರ್ಪಡೆಗೊಂಡಿದ್ದರು . ಚುನಾವಣಾ ರಾಜಕೀಯ ಚಾಣಕ್ಯ ಪ್ರಶಾಂತ್ ಕಿಶೋರ್ ಅವರನ್ನು ಟಿಎಂಸಿ ಪಕ್ಷಕ್ಕೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
ಅಪರಾಧ19 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ19 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್18 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ನಿಧನ ವಾರ್ತೆ17 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ16 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ17 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಆರೋಗ್ಯ24 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















