ಬಿಗ್ ನ್ಯೂಸ್
Puttur-ಪುತ್ತೂರು: ನೆಲಕ್ಕೆ ತೀರಾ ಸಮೀಪದಲ್ಲಿ ರೌಂಡ್ಸ್ ಹೊಡೆದ ಜೆಟ್ ವಿಮಾನ; ಅಸಲಿ ಕಾರಣ ಇಲ್ಲಿದೆ..!
ಪುತ್ತೂರು ಪೇಟೆಯಲ್ಲಿ ಮಂಗಳವಾರ (ಮಾ.03) ಮಧ್ಯಾಹ್ನ ಜೆಟ್ ವಿಮಾನವೊಂದು ಭೂಮಿಗೆ ತೀರಾ ಸಮೀಪದಲ್ಲಿ ಹಾರಾಟ ನಡೆಸಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ತೀವ್ರ ಆತಂಕ, ಕುತೂಹಲ ಸೃಷ್ಟಿಸಿದ ಘಟನೆ ನಡೆದಿದೆ. ಬಳಿಕ ಇದೊಂದು ‘ಭೂವೈಜ್ಞಾನಿಕ ಸಮೀಕ್ಷೆ’ (Geological Survey) ಎಂದು ತಿಳಿದುಬಂದಿದ್ದು, ಆತಂಕಗೊಂಡಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಪುತ್ತೂರು: ಪುತ್ತೂರು ಪೇಟೆಯಲ್ಲಿ ಮಂಗಳವಾರ (ಮಾ.03) ಮಧ್ಯಾಹ್ನ ಜೆಟ್ ವಿಮಾನವೊಂದು ಭೂಮಿಗೆ ತೀರಾ ಸಮೀಪದಲ್ಲಿ ಹಾರಾಟ ನಡೆಸಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ತೀವ್ರ ಆತಂಕ, ಕುತೂಹಲ ಸೃಷ್ಟಿಸಿದ ಘಟನೆ ನಡೆದಿದೆ. ಬಳಿಕ ಇದೊಂದು ‘ಭೂವೈಜ್ಞಾನಿಕ ಸಮೀಕ್ಷೆ’ (Geological Survey) ಎಂದು ತಿಳಿದುಬಂದಿದ್ದು, ಆತಂಕಗೊಂಡಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಆಗಿದ್ದೇನು?
ಮಂಗಳವಾರ ಮಧ್ಯಾಹ್ನದ ವೇಳೆಗೆ ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆಯ ಮೇಲ್ಭಾಗದಲ್ಲಿ ಹಾಗೂ ಆಸುಪಾಸಿನಲ್ಲಿ ದಿಢೀರನೆ ವಿಮಾನವೊಂದು ಪ್ರತ್ಯಕ್ಷವಾಗಿದೆ. ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಹಾರಾಡುತ್ತಿದ್ದ ಈ ಜೆಟ್ ವಿಮಾನ, ನಗರದ ವಿವಿಧ ಭಾಗಗಳಲ್ಲೂ ಪದೇ ಪದೇ ಕಾಣಿಸಿಕೊಂಡಿದೆ. ಒಂದೆರಡು ಬಾರಿಯಲ್ಲ, ಬರೋಬ್ಬರಿ 10 ರಿಂದ 15 ಸುತ್ತು ಆಕಾಶದಲ್ಲಿ ಪ್ರದಕ್ಷಿಣೆ ಹಾಕಿದ್ದು ನೋಡುಗರ ಅಚ್ಚರಿ ಹಾಗೂ ಭಯಕ್ಕೆ ಕಾರಣವಾಗಿತ್ತು. ಪುತ್ತೂರು ಪೇಟೆ, ಬಲ್ನಾಡ್, ನೆಹರುನಗರ, ದರ್ಬೆ, ನರಿಮೊಗರು ಆಸುಪಾಸಿನಲ್ಲಿ ವಿಮಾನ ರೌಂಡ್ಸ್ ಹಾಕಿದೆ.
ಆತಂಕಕ್ಕೆ ಕಾರಣವೇನು?
ವಿಮಾನವೊಂದು ಏಕಾಏಕಿ ಇಷ್ಟು ಕೆಳಮಟ್ಟದಲ್ಲಿ, ಅದೂ ಪದೇ ಪದೇ ಸುತ್ತು ಹೊಡೆಯುತ್ತಿದ್ದನ್ನು ಕಂಡ ಜನರಿಗೆ ಇದು ಯಾರ ವಿಮಾನ? ತುರ್ತು ಭೂಸ್ಪರ್ಶಕ್ಕೆ ಯತ್ನಿಸುತ್ತಿದೆಯೇ? ಅಥವಾ ಯಾವುದಾದರೂ ತಾಂತ್ರಿಕ ದೋಷದಿಂದ ಹೀಗೆ ಹಾರಾಟ ನಡೆಸುತ್ತಿದೆಯೇ? ಎಂಬ ಗೊಂದಲ ಮೂಡಿತ್ತು. ವಿಮಾನದ ಹಾರಾಟದ ಹಿಂದಿನ ನಿಖರ ಮಾಹಿತಿ ಲಭ್ಯವಾಗದ ಕಾರಣ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಕೊನೆಗೆ ಸಿಕ್ಕ ಸ್ಪಷ್ಟನೆ:
ಊಹಾಪೋಹಗಳ ನಡುವೆ ಕೊನೆಗೂ ಅಸಲಿ ವಿಚಾರ ಬಹಿರಂಗವಾಗಿದೆ. ಈ ವಿಮಾನದ ಹಾರಾಟಕ್ಕೂ ಯಾವುದೇ ಅಪಾಯಕ್ಕೂ ಸಂಬಂಧವಿಲ್ಲ, ಬದಲಾಗಿ ಇದು ‘ಭೂಮಿಯ ರಚನೆ ಹಾಗೂ ಅಧ್ಯಯನಕ್ಕಾಗಿ ನಡೆಸಲಾದ ವೈಜ್ಞಾನಿಕ ಸರ್ವೇ ಕಾರ್ಯ’ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಈ ಸ್ಪಷ್ಟನೆ ಸಿಕ್ಕ ಬಳಿಕವೇ ಪುತ್ತೂರಿನ ಜನರು ನಿರಾಳರಾಗಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.
ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಂತರ ರಾಜ್ಯ
Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.
ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.
ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.
ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.
ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.
ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.
ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.
ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.
ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.
ಅಂತರ ರಾಜ್ಯ
Ramleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ ಉದ್ದೇಶದಿಂದ ಈ ವಿಶೇಷ ಪ್ರಯೋಗಕ್ಕೆ ಮುಂದಾಗಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ ಉದ್ದೇಶದಿಂದ ಈ ವಿಶೇಷ ಪ್ರಯೋಗಕ್ಕೆ ಮುಂದಾಗಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ದೆಹಲಿಯ ಪೀತಂಪುರದಲ್ಲಿ ಶ್ರೀ ಕೇಶವ್ ರಾಮಲೀಲಾ ಸಮಿತಿ ರಾಮಲೀಲಾ ಆಯೋಜಿಸುತ್ತಿದೆ. ಜಿರಳೆಯ ಪ್ರತಿಕೃತಿ ದಹನದ ನಿರ್ಧಾರವನ್ನು ಸಮಿತಿಯ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕ ಅಶೋಕ್ ಗೋಯಲ್ ಸಮರ್ಥಿಸಿಕೊಂಡಿದ್ದಾರೆ.
“ಜಿರಳೆ ಅಸಹ್ಯ ಮತ್ತು ಕೊಳಕಿನ ಸಂಕೇತವಾಗಿದೆ. ಅದರ ಪ್ರತಿಕೃತಿ ದಹನವು ಸ್ವಚ್ಛ ಭಾರತ ಮತ್ತು ಸ್ವಚ್ಛ ದೆಹಲಿ ಅಭಿಯಾನಗಳ ಭಾಗವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಅವರು ಹೇಳಿದ್ದಾರೆ.
ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯದ ಸಂಕೇತವಾಗಿ ನಡೆಯುವ ರಾವಣ ದಹನದ ಸಂದರ್ಭದಲ್ಲಿ ಜಿರಳೆಯನ್ನೂ ಸೇರಿಸುವ ಮೂಲಕ ಸ್ವಚ್ಛತೆಯ ಮಹತ್ವವನ್ನು ಜನರಿಗೆ ತಿಳಿಸುವುದು ಉದ್ದೇಶವಾಗಿದೆ. ಈ ಬಾರಿ ರಾವಣನ ಸೈನ್ಯದಲ್ಲಿರುವ ಅಸುರರ ಸಾಲಿನಲ್ಲಿ ಜಿರಳೆಯ ಪ್ರತಿಕೃತಿಯೂ ಇರಲಿದೆ ಎಂದು ಗೋಯಲ್ ತಿಳಿಸಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗಳ ಹಿನ್ನೆಲೆ?
ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಿರಳೆಯ ಪ್ರತಿಕೃತಿ ದಹನದ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಚರ್ಚೆಯೂ ನಡೆಯುತ್ತಿದೆ.
ಈ ಸಂಘಟನೆ ಈ ಹಿಂದೆ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು. ಇದೀಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ.
ಜೂನ್ ಮತ್ತು ಜುಲೈ ತಿಂಗಳಲ್ಲಿ ಜಂತರ್ ಮಂತರ್ನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದ ಸಂಘಟನೆ, ಜುಲೈ 20ರಂದು ಸಂಸತ್ತಿನತ್ತ ಪಾದಯಾತ್ರೆಯನ್ನೂ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
SIR ವಿಚಾರವಾಗಿ ಪ್ರತಿಭಟನೆ ಮುಂದುವರಿಕೆ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸೇರಿ CJP ಪ್ರತಿಭಟನೆ ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ವಿರೋಧ ಪಕ್ಷಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪತ್ರಕರ್ತರನ್ನು ಬಂಧಿಸಿರುವ ಘಟನೆಗಳೂ ವರದಿಯಾಗಿವೆ.
ಒಟ್ಟಿನಲ್ಲಿ, ದೆಹಲಿಯ ರಾಮಲೀಲಾದಲ್ಲಿ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿ ದಹನದ ನಿರ್ಧಾರವು ಸ್ವಚ್ಛತೆಯ ಸಂದೇಶದ ಜತೆಗೆ ರಾಜಕೀಯ ಚರ್ಚೆಗೂ ಕಾರಣವಾಗಿದೆ.
-
ರಾಜಕೀಯ22 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ23 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಮಂಗಳೂರು23 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಕಾರ್ಯಕ್ರಮಗಳು22 hours agoPiligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
-
ಅಪರಾಧ23 hours agoBantwal-ಬಂಟ್ವಾಳ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ
-
ನಿಧನ ವಾರ್ತೆ4 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಅಂತರ ರಾಜ್ಯ5 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಪರಾಧ3 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ


















