ಅಪರಾಧ
Raid-ಅಕ್ರಮ ಕೋಳಿ ಅಂಕದ ಮೇಲೆ ಖಾಕಿ ಘರ್ಜನೆ: ಎರಡು ಪ್ರತ್ಯೇಕ ದಾಳಿ, 10 ಜೂಜುಕೋರರು ಅಂದರ್..!
ಮೂಕ ಪ್ರಾಣಿಗಳನ್ನು ಹಿಂಸಿಸಿ, ರಕ್ತಪಾತದ ಮೂಲಕ ಹಣದ ಜೂಜಾಟವಾಡುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಭರ್ಜರಿ ಕಾರ್ಯಾಚರಣೆಗಳಲ್ಲಿ ಒಟ್ಟು ಹತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಹುಂಜಗಳು, ಮಾರಕಾಸ್ತ್ರ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ಮೂಕ ಪ್ರಾಣಿಗಳನ್ನು ಹಿಂಸಿಸಿ, ರಕ್ತಪಾತದ ಮೂಲಕ ಹಣದ ಜೂಜಾಟವಾಡುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಭರ್ಜರಿ ಕಾರ್ಯಾಚರಣೆಗಳಲ್ಲಿ ಒಟ್ಟು ಹತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಹುಂಜಗಳು, ಮಾರಕಾಸ್ತ್ರ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ.
ಮಾರ್ಚ್ 03 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪ-ನಿರೀಕ್ಷಕ (ಕಾ&ಸು) ಸುತೇಶ್ ಕೆ.ಪಿ. ಅವರು ಸಿಬ್ಬಂದಿಯೊಂದಿಗೆ ಬಜತ್ತೂರು ಗ್ರಾಮದ ಮಣಿಕ್ಕಳ ಬಳಿ ಗಸ್ತು ತಿರುಗುತ್ತಿದ್ದಾಗ, ರಸ್ತೆ ಬದಿಯಲ್ಲಿ ಕೇಳಿಬಂದ ಭಾರೀ ಶಬ್ದವನ್ನು ಆಧರಿಸಿ ದಾಳಿ ನಡೆಸಿದಾಗ ಕೋಳಿ ಅಂಕದ ಜೂಜಾಟ ನಡೆಯುತ್ತಿರುವುದು ಪತ್ತೆಯಾಗಿದೆ. ಪೊಲೀಸರನ್ನು ಕಂಡೊಡನೆ ಜೂಜುಕೋರರು ಕಾಲ್ಕಿತ್ತಿದ್ದಾರೆ. ಈ ವೇಳೆ ಬೆನ್ನಟ್ಟಿ ಹಿಡಿದ ಪೊಲೀಸರು ಕಡಬದ ಸತೀಶ್ (38), ಬಂಟ್ವಾಳದ ಮುರಳಿ (30) ಹಾಗೂ ಪುತ್ತೂರಿನ ಮೋನಪ್ಪ ಕೆ (36) ಎಂಬವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ದೇರಣ್ಣ ಮತ್ತು ಉಮೇಶ್ ಎಂಬವರು ಈ ಜೂಜಾಟ ಆಯೋಜಿಸಿರುವುದು ಬೆಳಕಿಗೆ ಬಂದಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಘಟನಾ ಸ್ಥಳದಿಂದ ಐದು ಹುಂಜಗಳು, ಕೋಳಿ ಕಾಲಿಗೆ ಕಟ್ಟುವ ಎರಡು ಬಾಲುಗಳು (ಸಣ್ಣಕತ್ತಿ), 2,300 ರೂ. ನಗದು ಹಾಗೂ ಒಂದು ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಪಿ. ಆಕ್ಟ್ ಹಾಗೂ ಪ್ರಾಣಿ ಹಿಂಸೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ, ಮಾರ್ಚ್ 04 ರಂದು ಬೆಳಿಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರ್ಕಾರಿ ಜಾಗದಲ್ಲೇ ರಾಜಾರೋಷವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಪಿಎಸ್ಐ ಸಮರ್ಥ ಆರ್ ಗಾಣಿಗೇರ್ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದಾಗ ಹಣವನ್ನು ಪಣಕ್ಕಿಟ್ಟು ಕೋಳಿಗಳನ್ನು ಹಿಂಸಾತ್ಮಕವಾಗಿ ಕಾದಾಡಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಮುತ್ತಿಗೆ ಹಾಕಿದಾಗ ಪರಾರಿಯಾಗಲು ಯತ್ನಿಸಿದವರ ಪೈಕಿ ಏಳು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಹರಿಶ್ಚಂದ್ರ (32), ರಮೇಶ ಕುಲಾಲ್ (46), ಸುಧಾಕರ (30), ಅಶೋಕ ಮಲೆಕುಡಿಯ (40), ಪುಷ್ಪರಾಜ್ (25), ಶ್ರೀಧರ ಕುಂಬಾರ (48) ಮತ್ತು 70 ವರ್ಷದ ವೃದ್ಧ ಚೆನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಐದು ಕೋಳಿಗಳು, ಎರಡು ಬಾಲುಗಳು ಹಾಗೂ 970 ರೂ. ನಗದನ್ನು ಜಪ್ತಿ ಮಾಡಿ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಎರಡೂ ಪ್ರಕರಣಗಳಲ್ಲಿ ಕೇವಲ ಜೂಜಾಟದ ಕಾಯ್ದೆಯಡಿ (ಕೆ.ಪಿ. ಆಕ್ಟ್ 87, 93) ಮಾತ್ರವಲ್ಲದೆ, ಮೂಕ ಪ್ರಾಣಿಗಳನ್ನು ಹಿಂಸಿಸುವ ‘ಪ್ರಾಣಿ ಹಿಂಸೆ ನಿಷೇಧ ಕಾಯ್ದೆ-1960’ರ ಕಲಂ 11(1)(m)(ii), 11(1)(n) ಅಡಿಯಲ್ಲೂ ಕಠಿಣ ಪ್ರಕರಣಗಳನ್ನು ದಾಖಲಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಅಥವಾ ಖಾಸಗಿ ಜಾಗಗಳಲ್ಲಿ ಅಕ್ರಮವಾಗಿ ಜೂಜಾಟ ಹಾಗೂ ಪ್ರಾಣಿ ಹಿಂಸೆ ನಡೆಸುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ರವಾನಿಸಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್ನ 30 ಕ್ಯಾನ್ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್ಗಳು.
- ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















