Connect with us

ಕ್ರೀಡೆ

New Zealand-ಕಿವೀಸ್ ಅಬ್ಬರಕ್ಕೆ ಬೆಚ್ಚಿದ ಹರಿಣಗಳು: 9 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಫೈನಲ್‌ಗೆ ಲಗ್ಗೆಯಿಟ್ಟ ನ್ಯೂಜಿಲೆಂಡ್

Published

on

Ad Widget

Ad Widget

Ad Widget

Ad Widget

ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಎಡವಿದೆ. ಬುಧವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದ ನ್ಯೂಜಿಲೆಂಡ್ ಫೈನಲ್‌ಗೆ ಲಗ್ಗೆಯಿಟ್ಟಿದೆ.

Ad Widget

Ad Widget

Ad Widget

Ad Widget

ಕೋಲ್ಕತ್ತ: ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಎಡವಿದೆ. ಬುಧವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದ ನ್ಯೂಜಿಲೆಂಡ್ ಫೈನಲ್‌ಗೆ ಲಗ್ಗೆಯಿಟ್ಟಿದೆ.

Ad Widget

Ad Widget alt="Ad Widget"/>

Ad Widget

ಕಿವೀಸ್ ಬೌಲರ್‌ಗಳ ಕರಾರುವಾಕ್ ದಾಳಿಗೆ ನಲುಗಿ ದಕ್ಷಿಣ ಆಫ್ರಿಕಾ ಸಾಧಾರಣ ಮೊತ್ತಕ್ಕೆ ನಿಯಂತ್ರಣಗೊಂಡರೆ, ಗುರಿ ಬೆನ್ನತ್ತಿದ ಕಿವೀಸ್ ಬ್ಯಾಟರ್‌ಗಳು ಎದುರಾಳಿ ಬೌಲರ್‌ಗಳನ್ನು ಅಕ್ಷರಶಃ ದಂಡಿಸಿ ಸುಲಭ ಜಯ ತಂದುಕೊಟ್ಟರು.

Ad Widget

Ad Widget <> Ad Widget

ಫಿನ್ ಅಲೆನ್ ಅಬ್ಬರ, ಕಿವೀಸ್ ವಿಜಯೋತ್ಸವ:
ದಕ್ಷಿಣ ಆಫ್ರಿಕಾ ನೀಡಿದ 170 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್, ಫಿನ್ ಅಲೆನ್ ಅವರ (ಅಜೇಯ 100) ಸ್ಪೋಟಕ ಆಟದ ನೆರವಿನಿಂದ ಕೇವಲ 12.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ವಿಜಯೋತ್ಸವ ಆಚರಿಸಿತು. ಆರಂಭಿಕರಾದ ಟಿಮ್ ಸೀಫರ್ಟ್ (33 ಎಸೆತಗಳಲ್ಲಿ 58 ರನ್, 4×7, 6×2) ಹಾಗೂ ಅಲೆನ್ ಜೋಡಿ ಮೊದಲ ವಿಕೆಟ್‌ಗೆ ಕೇವಲ 9 ಓವರ್‌ಗಳಲ್ಲಿ 117 ರನ್ ಸೇರಿಸಿ ಹರಿಣಗಳ ಬೌಲರ್‌ಗಳನ್ನು ಬೆಂಡೆತ್ತಿತು. ಪವರ್ ಪ್ಲೇನಲ್ಲೇ 84 ರನ್ ಕಲೆಹಾಕಿದ ಈ ಜೋಡಿ ಗೆಲುವನ್ನು ಸುಲಭಗೊಳಿಸಿತು. ಸೀಫರ್ಟ್ ಔಟಾದ ಬಳಿಕ ರಚಿನ್ ರವೀಂದ್ರ ಜೊತೆಗೂಡಿದ ಅಲೆನ್, ಗೆಲುವಿನ ರನ್ ಬಾರಿಸುವ ಜೊತೆಯಲ್ಲೇ ತಮ್ಮ ಶತಕವನ್ನೂ ಪೂರೈಸಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಅಲೆನ್ ಬ್ಯಾಟ್‌ನಿಂದ 10 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಸಿಡಿಯಲ್ಪಟ್ಟವು.

ಯಾನ್ಸೆನ್ ಹೋರಾಟ, ಸಾಧಾರಣ ಮೊತ್ತಕ್ಕೆ ತೃಪ್ತಿ:
ಇದಕ್ಕೂ ಮುನ್ನ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಯಿತು. ಕಿವೀಸ್ ಬೌಲರ್‌ಗಳ ಶಿಸ್ತಿನ ದಾಳಿಗೆ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ತಂಡಕ್ಕೆ ಮಾರ್ಕೊ ಯಾನ್ಸೆನ್ ಆಸರೆಯಾದರು. ಕೇವಲ 30 ಎಸೆತಗಳಲ್ಲಿ ಅಜೇಯ 55 ರನ್ ಚಚ್ಚಿದ ಯಾನ್ಸೆನ್ ನಿಸ್ತೇಜವಾಗಿದ್ದ ಇನ್ನಿಂಗ್ಸ್‌ಗೆ ಜೀವ ತುಂಬಿದರು. ಅವರಿಗೆ ಟ್ರಿಸ್ಟನ್ ಸ್ಟಬ್ಸ್ (29 ರನ್) ಸಾಥ್ ನೀಡಿದರು. ಈ ಜೋಡಿ 73 ರನ್‌ಗಳ ಜೊತೆಯಾಟವಾಡಿದ್ದರಿಂದ ತಂಡ 160ರ ಗಡಿ ದಾಟಲು ಸಾಧ್ಯವಾಯಿತು.

Ad Widget

Ad Widget

ನ್ಯೂಜಿಲೆಂಡ್ ಪರ ಸ್ಪಿನ್ನರ್ ಕೊಲಿ ಮೆಕ್‌ಕಾನ್ಚಿ (2/9) ಇನ್ನಿಂಗ್ಸ್‌ನ 2ನೇ ಓವರ್‌ನಲ್ಲೇ ಕ್ವಿಂಟನ್ ಡಿಕಾಕ್ (10) ಮತ್ತು ರಿಯಾನ್ ರಿಕೆಲ್ಟನ್ ಅವರನ್ನು ಸತತ ಎಸೆತಗಳಲ್ಲಿ ಪೆವಿಲಿಯನ್‌ಗಟ್ಟಿ ಆಘಾತ ನೀಡಿದರು. ಎಡಗೈ ಸ್ಪಿನ್ನರ್ ರಚಿನ್ ರವೀಂದ್ರ (2/29) ಕೂಡ ಏಡನ್ ಮಾರ್ಕ್ರಮ್ (18) ಹಾಗೂ ಡೇವಿಡ್ ಮಿಲ್ಲರ್ (6) ವಿಕೆಟ್ ಪಡೆದು ಮಿಂಚಿದರು.

ಫಿನ್ ಅಲೆನ್ ವಿಶ್ವದಾಖಲೆಯ ಶತಕ!
ಈ ಪಂದ್ಯದಲ್ಲಿ ಕಿವೀಸ್ ಆರಂಭಿಕ ಆಟಗಾರ ಫಿನ್ ಅಲೆನ್ ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿ ವಿಶ್ವದಾಖಲೆ ನಿರ್ಮಿಸಿದರು. ಇದು ಐಸಿಸಿ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರಗಳ ನಡುವಿನ ಟಿ20 ಪಂದ್ಯದಲ್ಲಿ ದಾಖಲಾದ ‘ಅತಿ ವೇಗದ ಶತಕ’ವಾಗಿದೆ. ವಿಶೇಷವೆಂದರೆ, ಈ ಹಿಂದೆ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ದಾಖಲೆ ಹೊಂದಿದ್ದ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಎದುರಲ್ಲೇ ಅಲೆನ್ ಈ ಹೊಸ ಇತಿಹಾಸ ಬರೆದರು.

ಗುರುವಾರ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು, ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್ ತಂಡವು ಫೈನಲ್ ಕದನದಲ್ಲಿ ಎದುರಿಸಲಿದೆ.

Ad Widget

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಸ್ಥಳೀಯ

Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.

Ad Widget

Ad Widget <> Ad Widget

ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!