ಉದ್ಯೋಗ
Recruitment-ಗೃಹ ಇಲಾಖೆಯ 8,176 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ
ಪೊಲೀಸ್ ಇಲಾಖೆಗೆ ಸೇರಬೇಕೆಂಬ ಕನಸು ಕಾಣುತ್ತಿರುವ ರಾಜ್ಯದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಗೃಹ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ, ಮೊದಲ ಹಂತದಲ್ಲಿ 8,176 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಬೇಕೆಂಬ ಕನಸು ಕಾಣುತ್ತಿರುವ ರಾಜ್ಯದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಗೃಹ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ, ಮೊದಲ ಹಂತದಲ್ಲಿ 8,176 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ನೇರ ನೇಮಕಾತಿ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿದೆ. ಇದರ ಬೆನ್ನಲ್ಲೇ, ಯಾವ ಘಟಕಗಳಿಗೆ ಎಷ್ಟು ಹುದ್ದೆಗಳು ಎಂಬ ಹಂಚಿಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿಯು ನೇಮಕಾತಿ ವಿಭಾಗಕ್ಕೆ ರವಾನಿಸಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ (Notification) ಹೊರಬೀಳುವ ನಿರೀಕ್ಷೆಯಿದೆ.
ಪ್ರತಿಭಟನೆಗೆ ಮಣಿದ ಸರ್ಕಾರ:
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಷಾ) ನೇತೃತ್ವದಲ್ಲಿ ಫೆಬ್ರವರಿ 24ರಂದು ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಈ ಕೂಗಿಗೆ ಸ್ಪಂದಿಸಿರುವ ಸರ್ಕಾರ, ಒಟ್ಟಾರೆಯಾಗಿ 56 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಇದರ ಮೊದಲ ಹೆಜ್ಜೆಯಾಗಿ ಗೃಹ ಇಲಾಖೆಯ ನೇಮಕಾತಿಗೆ ಚಾಲನೆ ನೀಡಲಾಗಿದೆ.
ಮೀಸಲಾತಿ ಮತ್ತು ಹೈಕೋರ್ಟ್ ಆದೇಶದ ಅನ್ವಯ ಪ್ರಕ್ರಿಯೆ:
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ (ST) ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಿತ್ತು. ಈ ನಿರ್ಧಾರವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶವನ್ನು ಪರಿಗಣಿಸಿ, ಚಾಲ್ತಿಯಲ್ಲಿರುವ ರೋಸ್ಟರ್ ನಿಯಮಗಳ (Roster Rules) ಅನ್ವಯವೇ ಸಿವಿಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಸರ್ಕಾರ ನಿರ್ದೇಶನ ನೀಡಿದೆ. ಅದರಂತೆ ನಗರ, ಜಿಲ್ಲೆ ಹಾಗೂ ವಿವಿಧ ಘಟಕಗಳಿಗೆ ಹುದ್ದೆಗಳ ವರ್ಗೀಕರಣದ ವಿವರವನ್ನು ಪೊಲೀಸ್ ನೇಮಕಾತಿ ವಿಭಾಗಕ್ಕೆ ಕಳುಹಿಸಲಾಗಿದೆ.
ಶೀಘ್ರದಲ್ಲೇ ಪ್ರಕ್ರಿಯೆ ಪೂರ್ಣ – ಡಿಜಿಪಿ ಸ್ಪಷ್ಟನೆ:
“ಗೃಹ ಇಲಾಖೆಯಲ್ಲಿ ಪ್ರಸ್ತುತ ಶೇಕಡಾ 15ರಷ್ಟು ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಅಧಿಸೂಚನೆ ಪ್ರಕಟವಾದ ಕೆಲವೇ ತಿಂಗಳುಗಳಲ್ಲಿ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು” ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಭರ್ತಿಯಾಗಲಿರುವ ಹುದ್ದೆಗಳ ವಿವರ:
ನಾಗರಿಕ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) – 4,110
ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೆಬಲ್ (ಕೆಎಸ್ಆರ್ಪಿ) – 2,032
ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ (ಎಪಿಸಿ) – 1,650
ಪೊಲೀಸ್ ಕಾನ್ಸ್ಟೆಬಲ್ (ಕೆಎಸ್ಐಎಸ್ಎಫ್) – 364
ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (ಡಿಎಸ್ಐ) – 20
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
Uncategorized15 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ24 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು















