Connect with us

ರಾಜಕೀಯ

Women’s Congress-ಶಾಸಕರ ಕಚೇರಿಯಲ್ಲಿ ಮಹಿಳೆಯರಿಗೆ ಪ್ರಥಮ ಆದ್ಯತೆ; ಶಾಸಕ ಅಶೋಕ್ ರೈ ಪರ ವಹಿಸಿ ಬಹಿರಂಗ ಚರ್ಚೆಗೆ ಮಹಿಳಾ ಕಾಂಗ್ರೆಸ್ ಆಹ್ವಾನ

Published

on



Ad Widget

Ad Widget

Ad Widget

Ad Widget

“ಶಾಸಕ ಅಶೋಕ್ ಕುಮಾರ್ ರೈ ಅವರು ಮಹಿಳೆಯರಿಗೆ ಅಪಾರ ಗೌರವ ನೀಡುವ ನಾಯಕರಾಗಿದ್ದು, ತಮ್ಮ ಕಚೇರಿಗೆ ಬರುವ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡುತ್ತಾರೆ. ಅವರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಮಾಡುತ್ತಿರುವ ಆರೋಪಗಳು ಆಧಾರರಹಿತ. ಧೈರ್ಯವಿದ್ದರೆ ಪುತ್ತೂರಿನ ಅಭಿವೃದ್ಧಿಯ ಬಗ್ಗೆ ಬಹಿರಂಗ ವೇದಿಕೆಯಲ್ಲಿ ಚರ್ಚೆಗೆ ಬನ್ನಿ” ಎಂದು ಮಹಿಳಾ ಕಾಂಗ್ರೆಸ್ ನಾಯಕಿಯರು ಬಿಜೆಪಿಗೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: “ಶಾಸಕ ಅಶೋಕ್ ಕುಮಾರ್ ರೈ ಅವರು ಮಹಿಳೆಯರಿಗೆ ಅಪಾರ ಗೌರವ ನೀಡುವ ನಾಯಕರಾಗಿದ್ದು, ತಮ್ಮ ಕಚೇರಿಗೆ ಬರುವ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡುತ್ತಾರೆ. ಅವರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಮಾಡುತ್ತಿರುವ ಆರೋಪಗಳು ಆಧಾರರಹಿತ. ಧೈರ್ಯವಿದ್ದರೆ ಪುತ್ತೂರಿನ ಅಭಿವೃದ್ಧಿಯ ಬಗ್ಗೆ ಬಹಿರಂಗ ವೇದಿಕೆಯಲ್ಲಿ ಚರ್ಚೆಗೆ ಬನ್ನಿ” ಎಂದು ಮಹಿಳಾ ಕಾಂಗ್ರೆಸ್ ನಾಯಕಿಯರು ಬಿಜೆಪಿಗೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ವಲಯ ಉಸ್ತುವಾರಿ ಹಾಗೂ ಜಿ.ಪಂ. ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, “ಕಳೆದ 1 ಸಾವಿರ ದಿನಗಳಲ್ಲಿ ಪುತ್ತೂರಿಗೆ 2,200 ಕೋಟಿ ರೂ. ಅನುದಾನ ತರುವ ಮೂಲಕ ಶಾಸಕರು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಆದರೆ, ಬಿಜೆಪಿ ಮಹಿಳಾ ಮೋರ್ಚಾದವರು ಹೊರಗಿನಿಂದ ಜನ ಕರೆತಂದು ಶಾಸಕರ ವಿರುದ್ಧ ಪ್ರತಿಭಟಿಸುವ ನಾಟಕವಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

Ad Widget

Ad Widget <> Ad Widget

ಪ್ರಾಂಶುಪಾಲರ ಅಮಾನತು ಮಾಡಿದ್ದು ಇಲಾಖೆ, ಶಾಸಕರಲ್ಲ:
ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪ್ರಾಂಶುಪಾಲರ ಅಮಾನತು ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಮಹಿಳಾ ಕಾಂಗ್ರೆಸ್ ನಾಯಕಿಯರು, “ಕಾಲೇಜು ಕಟ್ಟಡದಲ್ಲಿ ಡಯಾಲಿಸಿಸ್‌ ಕೇಂದ್ರದ ಕಾಮಗಾರಿ ನಡೆಯುತ್ತಿರುವುದರಿಂದ ಧೂಳಿನ ಸಮಸ್ಯೆಯಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತರಬೇಕಿತ್ತು. ಆದರೆ ಏಕಾಏಕಿ ಮಕ್ಕಳಿಗೆ ರಸ್ತೆಯಲ್ಲಿ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ 15 ನಿಮಿಷದಲ್ಲೇ ಬಿಜೆಪಿ ನಾಯಕರು ಅಲ್ಲಿಗೆ ಬಂದಿರುವುದನ್ನು ನೋಡಿದರೆ, ಇದು ಬಿಜೆಪಿಯ ಕುಮ್ಮಕ್ಕಿನಿಂದಲೇ ನಡೆದಿದೆ ಎಂಬುದು ಸ್ಪಷ್ಟ. ಇನ್ನು, ಪ್ರಾಂಶುಪಾಲರನ್ನು ಅಮಾನತು ಮಾಡಿದ್ದು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳೇ ಹೊರತು, ಶಾಸಕರಲ್ಲ” ಎಂದು ಪುತ್ತೂರು ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಸ್ಪಷ್ಟಪಡಿಸಿದರು.



Ad Widget

ಗ್ಯಾರಂಟಿ ಫಲಾನುಭವಿಗಳಿಂದಲೇ ಪ್ರತಿಭಟನೆ!
ಬಿಜೆಪಿ ಪ್ರತಿಭಟನೆಯನ್ನು ಲೇವಡಿ ಮಾಡಿದ ಅನಿತಾ ಹೇಮನಾಥ ಶೆಟ್ಟಿ, “ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆಯಲ್ಲಿ ಧಿಕ್ಕಾರ ಕೂಗಿದ್ದಕ್ಕಿಂತ ಚಪ್ಪಾಳೆ ಹೊಡೆದಿದ್ದೇ ಹೆಚ್ಚು. ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರಲ್ಲಿ ಬಹುತೇಕರು ರಾಜ್ಯ ಸರ್ಕಾರದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆಯ ಫಲಾನುಭವಿಗಳೇ ಆಗಿದ್ದಾರೆ! ಇಷ್ಟೊಂದು ಸ್ವಾಭಿಮಾನ ಮಾತನಾಡುವವರು ಗ್ಯಾರಂಟಿ ಯೋಜನೆಗಳನ್ನು ಏಕೆ ಪಡೆಯುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

Ad Widget

Ad Widget

“ಇಲ್ಲಿನವರೇ ಮುಖ್ಯಮಂತ್ರಿಯಾಗಿದ್ದರೂ ಪುತ್ತೂರಿಗೆ ಮೆಡಿಕಲ್ ಕಾಲೇಜು ತರಲು ಸಾಧ್ಯವಾಗಿರಲಿಲ್ಲ. ಆದರೆ ನಮ್ಮ ಶಾಸಕರು ಅದನ್ನು ಸಾಧಿಸಿದ್ದಾರೆ. ಕುಡಿಯುವ ನೀರು, ಕ್ರೀಡಾಂಗಣ, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳ ಮೂಲಕ ರಾಜ್ಯದಲ್ಲೇ ನಂ.1 ಸ್ಥಾನದಲ್ಲಿದ್ದಾರೆ” ಎಂದು ಶಾಸಕರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಬಹಿರಂಗ ಚರ್ಚೆಗೆ ಬನ್ನಿ:
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಮಾತನಾಡಿ, “ಎಲ್ಲಿಂದಲೋ ಬಂದು ಪುತ್ತೂರು ಶಾಸಕರ ಬಗ್ಗೆ ಮಾತನಾಡುವವರು ಮೊದಲು ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿದುಕೊಳ್ಳಬೇಕು. ನಾವು ಕೈಕಟ್ಟಿ ಕೂತಿಲ್ಲ, ನಮ್ಮ ಬಳಿ ಅಂಕಿ-ಅಂಶಗಳಿವೆ. ಬೇಕಾದರೆ ವೇದಿಕೆ ಸಿದ್ಧಪಡಿಸಿ, ಜಿಲ್ಲೆಯ ಎಲ್ಲಾ ಶಾಸಕರನ್ನು ಕರೆದು ಮುಕ್ತವಾಗಿ ಚರ್ಚಿಸೋಣ” ಎಂದು ಸವಾಲೆಸೆದರು. ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪುತ್ತೂರು ಶಾಸಕರ ಬಳಿಯೇ ಬರುತ್ತಾರೆ ಎಂದರೆ, ಶಾಸಕರ ಮೇಲಿರುವ ನಂಬಿಕೆ ಎಂಥದ್ದು ಎಂಬುದು ಅರ್ಥವಾಗುತ್ತದೆ ಎಂದರು.

ಮಾಜಿ ಶಾಸಕ ಮಠಂದೂರು ವಿರುದ್ಧ ವಾಗ್ದಾಳಿ:
“ಮಾಜಿ ಶಾಸಕ ಸಂಜೀವ ಮಠಂದೂರು ಅವರು ತಮ್ಮ ಅಧಿಕಾರಾವಧಿಯಲ್ಲಿ ಬರೀ ತೆಂಗಿನಕಾಯಿ ಒಡೆದದ್ದು ಮಾತ್ರ, ಯಾವುದೇ ಕೆಲಸ ಮಾಡಿಲ್ಲ. ಅವರು ಬಂಟ್ವಾಳದ ಸಬ್ ರಿಜಿಸ್ಟ್ರಾರ್ ಮಹಿಳೆಗೆ ಬೈದು ವರ್ಗಾವಣೆ ಮಾಡಿಸಿದ್ದು, ಹಾಗೂ ಪಾಪಮಜಲಿನಲ್ಲಿ ಕ್ರಿಶ್ಚಿಯನ್ ಮಹಿಳೆ ಎಂಬ ಕಾರಣಕ್ಕೆ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಅವಮಾನ ಮಾಡಿದ್ದು ಮಹಿಳೆಯರಿಗೆ ಮಾಡಿದ ಅನ್ಯಾಯವಲ್ಲವೇ? ಆಗ ಬಿಜೆಪಿ ಮಹಿಳಾ ಮೋರ್ಚಾ ಎಲ್ಲೋಗಿತ್ತು?” ಎಂದು ನಾಯಕಿಯರು ತರಾಟೆಗೆ ತೆಗೆದುಕೊಂಡರು.

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಮಿನೇಜಸ್ ಮಾತನಾಡಿ, “ಶಾಸಕರು ತಮ್ಮ ಕಚೇರಿಗೆ ಬರುವ ಯಾವುದೇ ಪಕ್ಷದವರನ್ನೂ ತಾರತಮ್ಯ ಮಾಡದೆ ಒಂದೇ ರೀತಿಯಲ್ಲಿ ಕಂಡು ಸ್ಪಂದಿಸುತ್ತಾರೆ. ಇದನ್ನು ಬಿಜೆಪಿಯವರು ಮೊದಲು ಕಲಿಯಬೇಕು” ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಹಾಗೂ ಜಯಂತಿ ಬಟ್ಯಮೂಲೆ ಉಪಸ್ಥಿತರಿದ್ದರು.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading