Connect with us

ಉದ್ಯೋಗ

Recruitment-8176 ಪೊಲೀಸ್ ಹುದ್ದೆಗೆ ನೇರ ನೇಮಕಾತಿ – ಯಾವ ಜಿಲ್ಲೆಗೆ ಎಷ್ಟು ಹುದ್ದೆ..?

Published

on



Ad Widget

Ad Widget

Ad Widget

Ad Widget

ಪೊಲೀಸ್ ಇಲಾಖೆಗೆ ಸೇರಿ ಸೇವೆ ಸಲ್ಲಿಸಲು ಬಯಸುವ ರಾಜ್ಯದ ಯುವಜನತೆಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 8,176 ವಿವಿಧ ಪೊಲೀಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅಧಿಕೃತ ಮಂಜೂರಾತಿ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಿ ಸೇವೆ ಸಲ್ಲಿಸಲು ಬಯಸುವ ರಾಜ್ಯದ ಯುವಜನತೆಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 8,176 ವಿವಿಧ ಪೊಲೀಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅಧಿಕೃತ ಮಂಜೂರಾತಿ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲಾವಾರು ಖಾಲಿ ಹುದ್ದೆಗಳ ಹಂಚಿಕೆ ಪ್ರಕ್ರಿಯೆ ಕೂಡ ನಡೆದಿದ್ದು, ರಾಜಧಾನಿ ಬೆಂಗಳೂರು ನಗರವೊಂದರಲ್ಲೇ 3,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಡಿಟೆಕ್ಟಿವ್‌ ಸಬ್‌ ಇನ್‌ಸ್ಪೆಕ್ಟರ್‌, ಸಶಸ್ತ್ರ ಪೊಲೀಸ್‌ ಕಾನ್‌ಸ್ಟೇಬಲ್, ನಾಗರಿಕ ಕಾನ್‌ಸ್ಟೇಬಲ್ ಸೇರಿದಂತೆ ವಿವಿಧ ವಿಭಾಗಗಳಲ್ಲಿನ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ.

Ad Widget

Ad Widget <> Ad Widget

ನೇರ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದ ಬೆನ್ನಲ್ಲೇ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರ (DG&IGP) ಕಚೇರಿಯು ವಿವಿಧ ಘಟಕಗಳಿಗೆ ಹಂಚಿಕೆಯಾಗಿರುವ ಹುದ್ದೆಗಳ ಮಾಹಿತಿಯನ್ನು ನೇಮಕಾತಿ ವಿಭಾಗಕ್ಕೆ ರವಾನಿಸಿದೆ. ನಗರ, ಜಿಲ್ಲಾ ಹಾಗೂ ಘಟಕಗಳಿಗೆ ಮರು ಹಂಚಿಕೆ ಮಾಡಿ, ರೋಸ್ಟರ್ ನಿಯಮದಂತೆ ವರ್ಗೀಕರಣದ ವಿವರವನ್ನು ಒದಗಿಸುವಂತೆ ಪೊಲೀಸ್‌ ನೇಮಕಾತಿ ವಿಭಾಗಕ್ಕೆ ಈ ಹಿಂದೆಯೇ ನಿರ್ದೇಶನ ನೀಡಲಾಗಿತ್ತು.



Ad Widget

ಯಾವ ವಿಭಾಗದಲ್ಲಿ ಎಷ್ಟು ಹುದ್ದೆಗಳ ಭರ್ತಿ? (ವಿವರ):
ಡಿಟೆಕ್ಟಿವ್‌ ಸಬ್‌ ಇನ್‌ಸ್ಪೆಕ್ಟರ್‌ (DSI): 20
ಸಶಸ್ತ್ರ ಪೊಲೀಸ್‌ ಕಾನ್‌ಸ್ಟೇಬಲ್ (APC): 1,650
ನಾಗರಿಕ ಪೊಲೀಸ್‌ ಕಾನ್‌ಸ್ಟೇಬಲ್ (Civil): 4,110
ವಿಶೇಷ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (KSRP): 2,032
ಪೊಲೀಸ್‌ ಕಾನ್‌ಸ್ಟೇಬಲ್ (KSISF): 364
ಒಟ್ಟು ಹುದ್ದೆಗಳು: 8,176

Ad Widget

Ad Widget

ಮೀಸಲಾತಿ ಅನ್ವಯ ಹೇಗೆ?
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ (SC) ಮೀಸಲಾತಿ ಪ್ರಮಾಣವನ್ನು ಶೇ. 15ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ (ST) ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಿ ಆದೇಶಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಈ ಅರ್ಜಿಗಳ ಸಂಬಂಧ ಮಾನ್ಯ ನ್ಯಾಯಾಲಯವು ನವೆಂಬರ್‌ 27ರಂದು ನೀಡಿರುವ ಮಧ್ಯಂತರ ಆದೇಶವನ್ನು ಪರಿಗಣಿಸಿ, ವಿವಿಧ ಘಟಕಗಳಿಗೆ ಚಾಲ್ತಿಯಲ್ಲಿರುವ ಮೀಸಲು/ರೋಸ್ಟರ್‌ ನಿಯಮಗಳ ಅನ್ವಯ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ.

ಯಾವ ಜಿಲ್ಲೆಗೆ ಎಷ್ಟು ಹುದ್ದೆ ನೇಮಕಾತಿ?
ಪೋಲಿಸ್‌ ಕಾನ್ಸ್‌ಟೆಬಲ್‌ ಸಿವಿಲ್‌
ಘಟಕದ ಹೆಸರು ಹುದ್ದೆಗಳ ಸಂಖ್ಯೆ
ಬೆಂಗಳೂರು ನಗರ 2130
ಮೈಸೂರು ನಗರ 70
ಹುಬ್ಬಳ್ಳಿ-ಧಾರವಾಡ ನಗರ 75
ಮಂಗಳೂರು ನಗರ 125
ಬೆಂಗಳೂರು ಜಿಲ್ಲೆ 50
ತುಮಕೂರು ಜಿಲ್ಲೆ 50
ಕೋಲಾರ ಜಿಲ್ಲೆ 50
ಚಿಕ್ಕಬಳ್ಳಾಪುರ ಜಿಲ್ಲೆ 50
ಮೈಸೂರು ಜಿಲ್ಲೆ 60
ಚಾಮರಾಜನಗರ ಜಿಲ್ಲೆ 50
ಹಾಸನ ಜಿಲ್ಲೆ 50
ಕೊಡಗು ಜಿಲ್ಲೆ 50
ಮಂಡ್ಯ ಜಿಲ್ಲೆ 50
ದಾವಣಗೆರೆ ಜಿಲ್ಲೆ 50
ಶಿವಮೊಗ್ಗ ಜಿಲ್ಲೆ 80
ಚಿತ್ರದುರ್ಗ ಜಿಲ್ಲೆ 50
ಹಾವೇರಿ ಜಿಲ್ಲೆ 50
ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು 70
ಉಡುಪಿ ಜಿಲ್ಲೆ 100
ಉತ್ತರ ಕನ್ನಡ ಜಿಲ್ಲೆ, ಕಾರವಾರ 50
ಚಿಕ್ಕಮಗಳೂರು ಜಿಲ್ಲೆ 50
ಗದಗ ಜಿಲ್ಲೆ 35
ಒಟ್ಟು 3395

ಪೋಲಿಸ್‌ ಕಾನ್ಸ್‌ಟೆಬಲ್‌ ಸಿವಿಲ್‌ (ಕಲ್ಯಾಣ ಕರ್ನಾಟಕ)
ಘಟಕದ ಹೆಸರು ಹುದ್ದೆಗಳ ಸಂಖ್ಯೆ

ಬೆಂಗಳೂರು ನಗರ 126
ಕಲಬುರಗಿ ನಗರ 49
ಕಲಬುರಗಿ ಜಿಲ್ಲೆ 110
ರಾಯಚೂರು ಜಿಲ್ಲೆ 61
ಬೀದರ್ ಜಿಲ್ಲೆ 82
ಕೊಪ್ಪಳ ಜಿಲ್ಲೆ 35
ಯಾದಗಿರಿ ಜಿಲ್ಲೆ 27
ಬಳ್ಳಾರಿ ಜಿಲ್ಲೆ 40
ವಿಜಯನಗರ ಜಿಲ್ಲೆ 63
ಒಟ್ಟು 593

ಸಶಸ್ತ್ರ ಮೀಸಲು ಪೊಲೀಸ್‌ ಕಾನ್ಸ್‌ಟೆಬಲ್‌ (ಕೆಎಸ್‌ಆರ್‌ಪಿ)
ಘಟಕದ ಹೆಸರು ಹುದ್ದೆಗಳ ಸಂಖ್ಯೆ

ಬೆಂಗಳೂರು ನಗರ 918
ಮೈಸೂರು ನಗರ 50
ಮಂಗಳೂರು ನಗರ 15
ಬೆಂಗಳೂರು ಜಿಲ್ಲೆ 20
ಚಿಕ್ಕಬಳ್ಳಾಪುರ ಜಿಲ್ಲೆ 45
ಮೈಸೂರು ಜಿಲ್ಲೆ 40
ಕೊಡಗು ಜಿಲ್ಲೆ 35
ಮಂಡ್ಯ ಜಿಲ್ಲೆ 45
ಶಿವಮೊಗ್ಗ ಜಿಲ್ಲೆ 45
ಚಿತ್ರದುರ್ಗ ಜಿಲ್ಲೆ 25
ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು 10
ಉಡುಪಿ ಜಿಲ್ಲೆ 40
ಉ.ಕ. ಕಾರವಾರ ಜಿಲ್ಲೆ 50
ಚಿಕ್ಕಮಗಳೂರು ಜಿಲ್ಲೆ 20
ಧಾರವಾಡ ಜಿಲ್ಲೆ 15
ವಿಜಯನಗರ ಜಿಲ್ಲೆ 16
ಕಮಾಂಡೆಂಟ್, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು 32
ಒಟ್ಟು 1421

ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್‌ (ಕಲ್ಯಾಣ ಕರ್ನಾಟಕ)
ಘಟಕದ ಹೆಸರು ಹುದ್ದೆಗಳ ಸಂಖ್ಯೆ

ಬೆಂಗಳೂರು ನಗರ 83
ಕಲಬುರಗಿ ಜಿಲ್ಲೆ 15
ಬಳ್ಳಾರಿ ಜಿಲ್ಲೆ 22
ವಿಜಯನಗರ ಜಿಲ್ಲೆ 59
ಒಟ್ಟು 179

Ad Widget
Click to comment

Leave a Reply

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on



Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ



Ad Widget

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on



Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.



Ad Widget

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್

Published

on



Ad Widget

Ad Widget

Ad Widget

Ad Widget

ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.

Ad Widget

Ad Widget <> Ad Widget

ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.



Ad Widget

AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Ad Widget

Ad Widget

ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.

ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading