Connect with us

ಅಂತರ ರಾಜ್ಯ

Bunker explosion-50 ಇಸ್ರೇಲಿ ವಿಮಾನಗಳ ದಾಳಿ; ಖಮೇನಿ ಭೂಗತ ಬಂಕರ್ ಸ್ಫೋಟ

Published

on



Ad Widget

Ad Widget

Ad Widget

Ad Widget

ಹತ್ಯೆಯಾದ ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿಗೆ ನಿರ್ಮಿಸಲಾಗಿದ್ದ ಭೂಗತ ಬಂಕರ್ ನಾಶಪಡಿಸುವಲ್ಲಿ ಇಸ್ರೇಲ್ ಯಶಸ್ವಿಯಾಗಿದೆ. ನಿಖರ ಗುಪ್ತಚರ ಮಾಹಿತಿಯಾಧರಿಸಿ 50 ವಿಮಾನಗಳು ಶುಕ್ರವಾರ ಖಮೇನಿ ಕಚೇರಿಯ ಕೆಳಭಾಗದ ಬಂಕರನ್ನು ನಾಶಪಡಿಸಿವೆ.

Ad Widget

Ad Widget

Ad Widget

Ad Widget

ನವದೆಹಲಿ: ಹತ್ಯೆಯಾದ ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿಗೆ ನಿರ್ಮಿಸಲಾಗಿದ್ದ ಭೂಗತ ಬಂಕರ್ ನಾಶಪಡಿಸುವಲ್ಲಿ ಇಸ್ರೇಲ್ ಯಶಸ್ವಿಯಾಗಿದೆ. ನಿಖರ ಗುಪ್ತಚರ ಮಾಹಿತಿಯಾಧರಿಸಿ 50 ವಿಮಾನಗಳು ಶುಕ್ರವಾರ ಖಮೇನಿ ಕಚೇರಿಯ ಕೆಳಭಾಗದ ಬಂಕರನ್ನು ನಾಶಪಡಿಸಿವೆ. ಬಂಕರ್‌ನಲ್ಲಿ ಇದ್ದುಕೊಂಡೇ ಖಮೇನಿ ಯುದ್ಧವನ್ನು ಮುನ್ನಡೆಸಲು ಇದನ್ನು ನಿರ್ಮಿಸ ಲಾಗಿತ್ತು. ಆದರೆ, ಬಂಕರ್ ಒಳಗೆ ಸ್ಥಳಾಂತರಗೊಳ್ಳುವ ಮೊದಲೇ ಇಸ್ರೇಲ್ ಹಾಗೂ ಅಮೆರಿಕ ಪಡೆಗಳ ಜಂಟಿ ಕಾರ್ಯಚರಣೆಯಲ್ಲಿ ಖಮೇನಿ ಹತ್ಯೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಖಮೇನಿ ಹತ್ಯೆ ಬಳಿಕ ಬಂಕರನ್ನು ಇರಾನ್‌ ಇತರ ಉನ್ನತ ಮುಖಂಡರು ಬಳಸುತ್ತಿದ್ದರು. ಟೆಹ್ರಾನ್‌ನ ಹೃದಯ ಭಾಗದಲ್ಲಿದ್ದ ಈ ಬಂಕರ್, ಹಿರಿಯ ಅಧಿಕಾರಿಗಳಿಗೆ ಸಭೆಗಳನ್ನು ನಡೆಸಲು ಹಲವು ಕಡೆ ಪ್ರವೇಶ ದ್ವಾರಗಳು ಹಾಗೂ ಅತ್ಯಾಧುನಿಕ ಕೊಠಡಿಗಳನ್ನು ಒಳಗೊಂಡಿತ್ತು. ಕರಾರುವಕ್ಕಾದ ದಾಳಿ ನಡೆಸಿ ಬಂಕರ್ ಅನ್ನು ನಾಶಪಡಿಸಲಾಗಿದೆ ಎಂದು ಇಸ್ರೇಲ್ ಸೇನೆ ಮಾಹಿತಿ ನೀಡಿದೆ.

Ad Widget

Ad Widget <> Ad Widget

ಲೆಬನಾನ್ ಮೇಲೆ ಇಸ್ರೇಲ್ ದಾಳಿ
ಹೆಬ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ, ಲೆಬನಾನ್ ರಾಜಧಾನಿ ಬೈರೂತ್ ನಗರದ ಮೇಲೆ ಸರಣಿ ವೈಮಾ ನಿಕ ದಾಳಿಗಳನ್ನು ಇಸ್ರೇಲ್ ಪಡೆಯು ಗುರುವಾರ ನಡೆಸಿದೆ. “ನಿಮ್ಮ ಜೀವಗಳನ್ನು ಉಳಿಸಿಕೊಳ್ಳಿ ಮತ್ತು ತಕ್ಷಣವೇ ನಿಮ್ಮ ಮನೆಗಳನ್ನು ಖಾಲಿ ಮಾಡಿ’ ಎಂದು ದಾಳಿಗೂ ಮುನ್ನ ಇಲ್ಲಿನ ನಿವಾಸಿಗಳಿಗೆ ನೋಟಿಸನ್ನು ಇಸ್ರೇಲ್ ಜಾರಿ ಮಾಡಿತ್ತು. ಜನರು ತಪ್ಪಿಸಿಕೊಳ್ಳಲು ಯಾವ ಮಾರ್ಗಗಳನ್ನು ಬಳಸಬಹುದು ಎಂದು ಇಸ್ರೇಲ್ ಸೇನೆಯು ಮೊದಲೇ ನಿರ್ದೇಶಿಸಿತ್ತಾದರೂ, ಕಡೇ ಕ್ಷಣದ ಆತಂಕಗಳಿಂದಾಗಿ ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂದಿತು. ಸಂಘರ್ಷಕ್ಕೂ ಮುನ್ನವೇ ಲೆಬನಾನ್‌ನಲ್ಲಿ 83,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದರು ಎನ್ನಲಾಗಿದೆ.



Ad Widget

ಇರಾನ್ ಯುದ್ಧ ನೌಕೆ ಧ್ವಂಸ!
ಇರಾನ್ ಮೇಲೆ ದಾಳಿಯನ್ನು ಮುಂದುವರಿಸಿರುವ ಅಮೆರಿಕ ಇರಾನ್‌ನ ನೌಕಾಪಡೆಯ ಡೋನ್ ಕ್ಯಾರಿಯರ್ ನೌಕೆಯ ಮೇಲೆ ದಾಳಿ ನಡೆಸಿ, ನಾಶ ಪಡೆಸಿದೆ. ದ್ವಿತೀಯ ಮಹಾಯುದ್ಧದ ಕಾಲದ ವಿಮಾನವಾಹಕ ಹಡಗಿನಷ್ಟು ದೊಡ್ಡದಾದ ಇರಾನ್ ಡೋನ್ ಕ್ಯಾರಿಯರ್‌ನೌಕೆಯನ್ನು ಹೊಡೆದುರುಳಿಸಲಾಗಿದೆ. ದಾಳಿಯ ಬಳಿಕ ನೌಕೆ ಬೆಂಕಿಗಾಹುತಿ ಯಾಗಿದೆ. ಇರಾನ್ ನೌಕಾಪಡೆಯ ಸಂಪೂರ್ಣ ಸಾಮರ್ಥಯವನ್ನು ಕುಗ್ಗಿಸುವವರೆಗೆ ಅಮೆರಿಕದ ಪಡೆಗಳು ಹಿಂದೆ ಸರಿಯುವುದಿಲ್ಲ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಈಗಾಗಲೇ 30ಕ್ಕೂ ಹೆಚ್ಚು ಇರಾನ್ ಯುದ್ಧ ನೌಕೆಗಳನ್ನು ಅಮೆರಿಕದ ಪಡೆಗಳು ನಾಶಪಡಿಸಿವೆ.

Ad Widget

Ad Widget

ಮಿತ್ರ ರಾಷ್ಟ್ರಗಳ ಮುನಿಸು
ಇರಾನ್ ಮೇಲೆ ಅಮೆರಿಕ ಸೇನೆಯು ನಡೆಸಿದ ಏಕಾಏಕಿ ದಾಳಿಗೆ ಅಮೆರಿಕದ ಕೊಲ್ಲಿ ಮಿತ್ರ ರಾಷ್ಟ್ರಗಳು ಅಸಮಾಧಾನಗೊಂಡಿವೆ. ಇರಾನ್ ಮೇಲೆ ದಾಳಿ ಮಾಡುವ ಬಗ್ಗೆ ಸೂಚನೆಯನ್ನು ನೀಡಲಾಗಿಲ್ಲ. ಇದರಿಂದ ಸಂಭಾವ್ಯ ಇರಾನ್ ದಾಳಿ ಯನ್ನು ಎದುರಿಸಲು ನಮಗೆ ಯಾವುದೇ ಸಮಯ ಸಿಗಲಿಲ್ಲ ಎಂದು ಅಮೆರಿಕದ ವಿರುದ್ಧ ಈ ಮಿತ್ರರಾಷ್ಟ್ರಗಳು ಮುನಿಸಿಕೊಂಡಿವೆ.

2 ಕೊಲ್ಲಿ ರಾಷ್ಟ್ರಗಳ ಅಧಿಕಾರಿಗಳು ತಮ್ಮ ಸರ್ಕಾರಗಳು ಅಮೆರಿಕ ಯುದ್ಧವನ್ನು ನಿಭಾಯಿಸಿದ ರೀತಿ, ಅದರಲ್ಲೂ ಕಳೆದ ಶನಿವಾರ ಇರಾನ್ ಮೇಲಿನ ಆರಂಭಿಕ ದಾಳಿಯ ಬಗ್ಗೆ ಅಸಮಾಧಾನಗೊಂಡಿವೆ ಎಂದು ತಿಳಿಸಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್‌ನ ಜಂಟಿ ದಾಳಿಯ ಬಗ್ಗೆ ತಮ್ಮ ದೇಶಗಳಿಗೆ ಮುಂಚಿತವಾಗಿ ಸೂಚನೆ ನೀಡಲಾಗಿಲ್ಲ ಮತ್ತು ಈ ದಾಳಿಯಿಂದ ಇರಾನ್ ಸುತ್ತಮಿತ್ತಲಿನ ಇಡೀ ಪ್ರದೇಶಕ್ಕೆ ಪರಿಣಾಮಗಳನ್ನು ಬೀರುತ್ತದೆ ಎಂಬ ಎಚ್ಚರಿಕೆಗಳನ್ನು ಅಮೆರಿಕ ನಿರ್ಲಕ್ಷಿಸಿದೆ ಎಂದೂ ದೂರಿದ್ದಾರೆ. ನಮ್ಮ ರಾಷ್ಟ್ರಗಳಲ್ಲಿರುವ ಅಮೆರಿಕ ನೆಲೆಗಳನ್ನು ರಕ್ಷಿಸುವಲ್ಲಿ ನಾವು ಹೆಚ್ಚು ಒತ್ತು ನೀಡುತ್ತಾ, ನಮ್ಮ ನಾಗರಿಕರನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂದೂ ಹೇಳಿದ್ದಾರೆ.

ಇಸ್ರೇಲ್, ಇರಾಕ್, ಸೌದಿ ಮೇಲೆ ಇರಾನ್‌ ದಾಳಿ
ಇಸ್ರೇಲ್ ಮೇಲೆ ಇರಾನ್ ಹಲವು ಕ್ಷಿಪಣಿ ಉಡಾಯಿಸಿದೆ. ದುಬೈನಲ್ಲೂ ದಾಳಿ ಭೀತಿ ಹೆಚ್ಚಾಗಿದೆ. ಸೌದಿ ಅರೇಬಿಯಾ ರಿಯಾದ್‌ನೆಡೆಗೆ ನುಗ್ಗಿ ಬರುತ್ತಿದ್ದ 3 ಡೋನ್, 3 ಕ್ಷಿಪಣಿಗಳನ್ನು ನಾಶ ಪಡಿಸಲಾಗಿದೆ. ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ದೊಡ್ಡ ವಾಯುನೆಲೆ ಅಲ್-ಉದೈದ್ ಗುರಿಯಾಗಿಸಿ ನಡೆಸಲಾದ ಡೋನ್ ದಾಳಿಯನ್ನು ವಿಫಲಗೊಳಿಸಲಾಗಿದೆ. ಬಹರೇನ್ ರಾಜಧಾನಿ ಮನಾಮದಲ್ಲಿನ 1 ಹೋಟೆಲ್ ಮತ್ತು 2 ವಸತಿ ಕಟ್ಟಡಗಳ ಮೇಲೆ ಇರಾನ್‌ನಿಂದ ದಾಳಿ ನಡೆದಿದೆ ಎಂದು ಬಹ್ಮನ್ ಸರ್ಕಾರ ಹೇಳಿದೆ.

Ad Widget
Click to comment

Leave a Reply

ಅಂತರ ರಾಜ್ಯ

March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ

Published

on



Ad Widget

Ad Widget

Ad Widget

Ad Widget

ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.



Ad Widget

ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.

Continue Reading

ನಿಧನ ವಾರ್ತೆ

Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ

Published

on



Ad Widget

Ad Widget

Ad Widget

Ad Widget

ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.

Ad Widget

Ad Widget <> Ad Widget

ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.



Ad Widget

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

Continue Reading

ಅಂತರ ರಾಜ್ಯ

Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್

Published

on



Ad Widget

Ad Widget

Ad Widget

Ad Widget

ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.



Ad Widget

ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading