ಬಿಗ್ ನ್ಯೂಸ್
Iran’s fierce attack-ಅಮೆರಿಕ ಸೇನಾನೆಲೆ, ರಾಯಭಾರ ಕಚೇರಿಗಳ ಮೇಲೆ ಇರಾನ್ ಭೀಕರ ದಾಳಿ
ಇರಾನ್‌ನ ಸರ್ವೋಚ್ಚ ನಾಯಕನನ್ನು ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಸೇಡಿನ ಜ್ವಾಲೆಯಲ್ಲಿರುವ ಇರಾನ್, ಇಸ್ರೇಲ್ ಹಾಗೂ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾನೆಲೆಗಳು ಮತ್ತು ರಾಯಭಾರ ಕಚೇರಿಗಳನ್ನು ಗುರಿಯಾಗಿಸಿಕೊಂಡು ಸರಣಿ ದಾಳಿಗಳನ್ನು ಆರಂಭಿಸಿದೆ.
ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕನನ್ನು ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಸೇಡಿನ ಜ್ವಾಲೆಯಲ್ಲಿರುವ ಇರಾನ್, ಇಸ್ರೇಲ್ ಹಾಗೂ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾನೆಲೆಗಳು ಮತ್ತು ರಾಯಭಾರ ಕಚೇರಿಗಳನ್ನು ಗುರಿಯಾಗಿಸಿಕೊಂಡು ಸರಣಿ ದಾಳಿಗಳನ್ನು ಆರಂಭಿಸಿದೆ.
ಇಸ್ರೇಲ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ:
ಗುರುವಾರ ಬೆಳ್ಳಂಬೆಳಗ್ಗೆ ಇಸ್ರೇಲ್‌ನ ಪ್ರಮುಖ ‘ಬೆನ್ ಗುರಿಯನ್ ವಿಮಾನ ನಿಲ್ದಾಣ’ ಹಾಗೂ ಸಮೀಪದ ವಾಯುನೆಲೆ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಒಂದು ಟನ್‌ಗೂ ಅಧಿಕ ತೂಕದ ಸಿಡಿತಲೆಗಳನ್ನು ಹೊತ್ತ ಕ್ಷಿಪಣಿಗಳನ್ನು ಇಸ್ರೇಲ್‌ನತ್ತ ಉಡಾವಣೆ ಮಾಡಲಾಗಿದೆ.
ಕತಾರ್, ಯುಎಇಯಲ್ಲೂ ನಡುಕ:
ಕತಾರ್‌ನ ದೋಹಾದಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾರೀ ಸ್ಫೋಟ ಸಂಭವಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಇತ್ತ ಯುಎಇಯತ್ತ ನುಗ್ಗಿ ಬಂದ ಇರಾನ್‌ನ ಹಲವು ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ. ಆದರೆ, ಅಬುಧಾಬಿಯಲ್ಲಿ ಹೊಡೆದುರುಳಿಸಿದ ಡ್ರೋನ್ ಅವಶೇಷಗಳು ಬಿದ್ದು 6 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ, ದುಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಹಾಗೂ ಫುಜೈರಾಹ್ ಬಂದರಿನ ಮೇಲೂ ಇರಾನ್ ದಾಳಿ ನಡೆಸಿರುವ ವರದಿಯಾಗಿದೆ.
ಅಜರ್‌ಬೈಜಾನ್ ವಾಯುಪ್ರದೇಶ ಬಂದ್:
ಅಜರ್‌ಬೈಜಾನ್‌ನ ನಾಕ್‌ಚಿವಾನ್ ವಿಮಾನ ನಿಲ್ದಾಣ ಹಾಗೂ ಶಾಲೆಯೊಂದರ ಬಳಿ ಇರಾನ್ ಡ್ರೋನ್ ಬಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇದರಿಂದ ಎಚ್ಚೆತ್ತ ಅಜರ್‌ಬೈಜಾನ್ ಸರ್ಕಾರ, ಇರಾನ್ ಗಡಿಯುದ್ದಕ್ಕೂ ತನ್ನ ವಾಯುಪ್ರದೇಶವನ್ನು 12 ಗಂಟೆಗಳ ಕಾಲ ಬಂದ್ ಮಾಡಿದೆ.
‘ಟ್ರಂಪ್ ರಕ್ತ ಹರಿಸಿ’: ಇರಾನ್ ಧಾರ್ಮಿಕ ನಾಯಕನ ಕರೆ
ಅಮೆರಿಕದ ಈ ಕಾರ್ಯಾಚರಣೆ ವಿರುದ್ಧ ಇರಾನ್‌ನ ಶಿಯಾ ಉನ್ನತ ಧಾರ್ಮಿಕ ನಾಯಕ ಆಯತೊಲ್ಲಾ ಅಬ್ದುಲ್ಲಾ ಜಾವೇದಿ ಅಮೋಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ನಾವೀಗ ಅಗ್ನಿಪರೀಕ್ಷೆಯ ಅಂಚಿನಲ್ಲಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಅಮೆರಿಕ ಹಾಗೂ ಇಸ್ರೇಲಿಗರ ಆಕ್ರಮಣವನ್ನು ಎದುರಿಸಬೇಕು, ಟ್ರಂಪ್ ಮತ್ತು ಯಹೂದಿಗಳ ರಕ್ತ ಹರಿಸಬೇಕು” ಎಂದು ಅವರು ಕರೆ ನೀಡಿರುವ ವಿಡಿಯೋವನ್ನು ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡಿವೆ.
ಭಾರತದ ಅತಿಥಿ ಮೇಲೆಯೇ ದಾಳಿ, ತಕ್ಕ ಬೆಲೆ ತೆರುತ್ತೀರಿ!
ಹಿಂದೂ ಮಹಾಸಾಗರದಲ್ಲಿ ಭಾರತೀಯ ನೌಕಾಪಡೆಯ ಅತಿಥಿಯಾಗಿದ್ದ ಇರಾನ್‌ನ ಯುದ್ಧನೌಕೆಯನ್ನು ಅಮೆರಿಕ ನಾಶಪಡಿಸಿರುವುದಕ್ಕೆ ಇರಾನ್ ಕೆಂಡಾಮಂಡಲವಾಗಿದೆ. “ಅಮೆರಿಕ ತನ್ನ ಗಡಿಯಿಂದ 2,000 ಮೈಲಿ ದೂರದ ಸಮುದ್ರದಲ್ಲಿ ಈ ದೌರ್ಜನ್ಯವೆಸಗಿದ್ದು, ನಮ್ಮ ನೌಕೆಯ ಮೇಲಿನ ದಾಳಿಗೆ ಅಮೆರಿಕ ತಕ್ಕ ಬೆಲೆ ತೆರಬೇಕಾಗುತ್ತದೆ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಎಚ್ಚರಿಸಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಕೊಲ್ಲಿಯಲ್ಲಿದ್ದ ಅಮೆರಿಕದ ತೈಲ ಟ್ಯಾಂಕರ್ ಅನ್ನು ಹೊಡೆದುರುಳಿಸಿ, ಬೆಂಕಿ ಹಚ್ಚಿದ್ದಾಗಿ ಇರಾನ್ ಘೋಷಿಸಿಕೊಂಡಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Uncategorized13 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized16 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized15 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized17 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized16 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized15 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಶಿಕ್ಷಣ13 minutes agoVidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
-
ಸ್ಥಳೀಯ8 minutes agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ


















