Connect with us

ಬಿಗ್ ನ್ಯೂಸ್

Budget 2026-27-ಕರ್ನಾಟಕ ಬಜೆಟ್ 2026-27: ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಮನ್ನಣೆ…ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ

Published

on



Ad Widget

Ad Widget

Ad Widget

Ad Widget

ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಒತ್ತು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಜೆಟ್‌ನಲ್ಲಿ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಲೋಕಾರ್ಪಣೆ ಸೇರಿದಂತೆ ಹಲವು ಪ್ರಮುಖ ಘೋಷಣೆಗಳಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಒತ್ತು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಜೆಟ್‌ನಲ್ಲಿ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಲೋಕಾರ್ಪಣೆ ಸೇರಿದಂತೆ ಹಲವು ಪ್ರಮುಖ ಘೋಷಣೆಗಳಿವೆ. ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಬಲಪಡಿಸಲು ಕೆಲವು ಮುಖ್ಯ ಉಪಕ್ರಮಗಳು ಇಲ್ಲಿವೆ:

Ad Widget

Ad Widget

Ad Widget alt="Ad Widget"/>

Ad Widget

*ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

Ad Widget

Ad Widget <> Ad Widget

*236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು.



Ad Widget

*ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.

Ad Widget

Ad Widget

*2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.

*ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.

*ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

*ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತ್ರತ ಯೋಜನಾ ವರದಿ ತಯಾರಿಸಲಾಗುವುದು.

*ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

*ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.

*ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

*ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.

*ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ‘ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

Ad Widget

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading