ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಪಣಂಬೂರಿನ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPT) ಗೆ ಭೇಟಿ […]" /> ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಪಣಂಬೂರಿನ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPT) ಗೆ ಭೇಟಿ […]"> Philomena-ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ NMPT ಮತ್ತು ನಂದಿನಿ ಡೈರಿಗೆ ಕೈಗಾರಿಕಾ ಭೇಟಿ - Nikhara News | Kannada News Website
Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ NMPT ಮತ್ತು ನಂದಿನಿ ಡೈರಿಗೆ ಕೈಗಾರಿಕಾ ಭೇಟಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗ (BBA) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಭೇಟಿಯನ್ನು ಆಯೋಜಿಸಿತು. ಎರಡು ವಿಭಿನ್ನ ಬ್ಯಾಚ್‌ಗಳಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಮಂಗಳೂರು, ಫೆ.25: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗ (BBA) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಭೇಟಿಯನ್ನು ಆಯೋಜಿಸಿತು. ಎರಡು ವಿಭಿನ್ನ ಬ್ಯಾಚ್‌ಗಳಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಪಣಂಬೂರಿನ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPT) ಗೆ ಭೇಟಿ ನೀಡಿ ಬಂದರಿನ ವಿವಿಧ ವಿಭಾಗಗಳ ಕಾರ್ಯವೈಖರಿ, ಕಾರ್ಗೋ ನಿರ್ವಹಣೆ, ರಫ್ತು-ಆಮದು ಪ್ರಕ್ರಿಯೆಗಳು ಹಾಗೂ ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದರ ಮೂಲಕ ವಿದ್ಯಾರ್ಥಿಗಳಿಗೆ ಸಾಗಾಣಿಕೆ ಕಾರ್ಯಾಚರಣೆಗಳು ಮತ್ತು ಅಂತರಾಷ್ಟ್ರೀಯ ವ್ಯಾಪಾರದ ಪ್ರಾಯೋಗಿಕ ಅಂಶಗಳ ಕುರಿತು ತಿಳಿದುಕೊಳ್ಳುವ ಅವಕಾಶ ದೊರೆಯಿತು.

Ad Widget

Ad Widget <> Ad Widget

ಇದೇ ವೇಳೆ ಪ್ರಥಮ ಬಿಬಿಎ ಮತ್ತು ಬಿಬಿಎ ಅನಾಲಿಟಿಕ್ಸ್ ವಿದ್ಯಾರ್ಥಿಗಳು ಕುಲಶೇಖರದಲ್ಲಿರುವ ನಂದಿನಿ ಡೈರಿಗೆ ಭೇಟಿ ನೀಡಿದರು. ಅಲ್ಲಿ ಹಾಲಿನ ಸಂಗ್ರಹಣೆ, ಸಂಸ್ಕರಣೆ, ಗುಣಮಟ್ಟ ಪರಿಶೀಲನೆ, ಪ್ಯಾಕೇಜಿಂಗ್ ಮತ್ತು ವಿತರಣೆ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ಡೈರಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿ ಉತ್ಪಾದನಾ ನಿರ್ವಹಣೆ ಮತ್ತು ತಂತ್ರಜ್ಞಾನ ಬಳಕೆಯ ಬಗ್ಗೆ ತಿಳಿದುಕೊಂಡರು.

ಈ ಕೈಗಾರಿಕಾ ಭೇಟಿ ವಿದ್ಯಾರ್ಥಿಗಳಿಗೆ ಸೈದ್ಧಾಂತಿಕ ಜ್ಞಾನವನ್ನು ಪ್ರಾಯೋಗಿಕ ಅನುಭವದೊಂದಿಗೆ ಸಂಪರ್ಕಿಸುವಲ್ಲಿ ಸಹಾಯಕವಾಗಿದ್ದು, ಎಲ್ಲರಿಗೂ ಉಪಯುಕ್ತ ಹಾಗೂ ಮಾಹಿತಿಪೂರ್ಣವಾಗಿತ್ತು.

Click to comment

Leave a Reply

ಶಿಕ್ಷಣ

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

Ad Widget

Ad Widget <> Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!