ರಾಜಕೀಯ
Puttur-ಪುತ್ತೂರು : 300 ಬೆಡ್ ಸರಕಾರಿ ಆಸ್ಪತ್ರೆ ಸ್ಥಳಾಂತರ ಬೇಡ – ಪುತ್ತೂರಿನಲ್ಲೇ ಇರಲಿ: ಬಿಜೆಪಿ ಆಗ್ರಹ
ಬಹುನಿರೀಕ್ಷಿತ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಇದೀಗ ಭಾರೀ ಚರ್ಚೆಯೊಂದು ಶುರುವಾಗಿದೆ. ಉದ್ದೇಶಿತ ಸರ್ಕಾರಿ ಮೆಡಿಕಲ್ ಕಾಲೇಜನ್ನು ನಗರದ ಹೊರವಲಯದ ಸೇಡಿಯಾಪಿನಲ್ಲಿ ನಿರ್ಮಿಸಿದರೂ ಅಭ್ಯಂತರವಿಲ್ಲ. ಆದರೆ, ಆಸ್ಪತ್ರೆ ಸ್ಥಳಾಂತರದ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ನೀಡಬಾರದು ಹಾಗೂ 300 ಹಾಸಿಗೆಗಳ ಆಸ್ಪತ್ರೆ ಪ್ರಸ್ತುತ ಇರುವ ನಗರದ ಹೃದಯ ಭಾಗದಲ್ಲೇ ನಿರ್ಮಾಣವಾಗಬೇಕು ಎಂದು ಪುತ್ತೂರು ಬಿಜೆಪಿ ಖಡಕ್ ಆಗ್ರಹ ಮಾಡಿದೆ.
ಪುತ್ತೂರು: ಬಹುನಿರೀಕ್ಷಿತ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಇದೀಗ ಭಾರೀ ಚರ್ಚೆಯೊಂದು ಶುರುವಾಗಿದೆ. ಉದ್ದೇಶಿತ ಸರ್ಕಾರಿ ಮೆಡಿಕಲ್ ಕಾಲೇಜನ್ನು ನಗರದ ಹೊರವಲಯದ ಸೇಡಿಯಾಪಿನಲ್ಲಿ ನಿರ್ಮಿಸಿದರೂ ಅಭ್ಯಂತರವಿಲ್ಲ. ಆದರೆ, ಆಸ್ಪತ್ರೆ ಸ್ಥಳಾಂತರದ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ನೀಡಬಾರದು ಹಾಗೂ 300 ಹಾಸಿಗೆಗಳ ಆಸ್ಪತ್ರೆ ಪ್ರಸ್ತುತ ಇರುವ ನಗರದ ಹೃದಯ ಭಾಗದಲ್ಲೇ ನಿರ್ಮಾಣವಾಗಬೇಕು ಎಂದು ಪುತ್ತೂರು ಬಿಜೆಪಿ ಖಡಕ್ ಆಗ್ರಹ ಮಾಡಿದೆ.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ಆಸ್ಪತ್ರೆಯ ಹಿಂದಿನ ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಫೀಕ್ ದರ್ಬೆ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಆಸ್ಪತ್ರೆ ಸ್ಥಳಾಂತರದ ಹಿಂದಿರುವ ಹುನ್ನಾರವನ್ನು ಬಿಚ್ಚಿಟ್ಟಿದ್ದಾರೆ.
ರಿಯಲ್ ಎಸ್ಟೇಟ್ ಲಾಭಕ್ಕಾಗಿ ಆಸ್ಪತ್ರೆ ಶಿಫ್ಟ್?
ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, “ಆಸ್ಪತ್ರೆ ಸ್ಥಳಾಂತರದ ಹಿಂದೆ ಜಾಗದ ಮೌಲ್ಯ (Valuation) ಹೆಚ್ಚಿಸಿಕೊಳ್ಳುವ ಪಿತೂರಿ ಅಡಗಿದೆ. ಸೇಡಿಯಾಪಿನ ಸುತ್ತಮುತ್ತ ಜಾಗ ಹೊಂದಿರುವ ಕೆಲವರು, ತಮ್ಮ ಜಾಗದ ಮೌಲ್ಯ ಹೆಚ್ಚಿಸಿಕೊಳ್ಳುವ ಏಕೈಕ ಉದ್ದೇಶದಿಂದ 300 ಬೆಡ್ನ ಆಸ್ಪತ್ರೆಯನ್ನೂ ಸೇಡಿಯಾಪಿಗೆ ಕೊಂಡೊಯ್ಯುವ ಹುನ್ನಾರ ನಡೆಸುತ್ತಿದ್ದಾರೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಆದರೆ ಆಸ್ಪತ್ರೆ ಇರುವುದು ರೋಗಿಗಳಿಗಾಗಿ ಎಂಬುದನ್ನು ಮರೆಯಬಾರದು” ಎಂದು ಎಚ್ಚರಿಸಿದರು.
ಬಡ ರೋಗಿಗಳಿಗೆ ಕಷ್ಟ ಕೊಡಬೇಡಿ:
“ಮೆಡಿಕಲ್ ಕಾಲೇಜು ಸ್ಥಾಪನೆಗೆ ಸೇಡಿಯಾಪಿನಲ್ಲಿ ಜಾಗ ಕಾಯ್ದಿರಿಸಲಾಗಿದೆ. ಅಲ್ಲಿಯೇ ಕಾಲೇಜು ಆಗಲಿ. ಆದರೆ, ಮೆಡಿಕಲ್ ಕಾಲೇಜಿಗೆ ಪೂರಕವಾಗಿ 300 ಹಾಸಿಗೆಗಳ ಆಸ್ಪತ್ರೆ ಕಡ್ಡಾಯ. ಈ ಆಸ್ಪತ್ರೆಯನ್ನು ಸೇಡಿಯಾಪಿಗೆ ಸ್ಥಳಾಂತರಿಸಿದರೆ ಬಡ ರೋಗಿಗಳಿಗೆ ಪ್ರಯಾಣ ತೀವ್ರ ಕಷ್ಟವಾಗಲಿದೆ. ಹೀಗಾಗಿ, ಹಿಂದಿನ ಶಾಸಕ ಸಂಜೀವ ಮಠಂದೂರು ಅವರು ನಿಗದಿಪಡಿಸಿದ್ದ ನಗರದ 5.16 ಎಕರೆ ಜಾಗದಲ್ಲೇ ಬೃಹತ್ ಆಸ್ಪತ್ರೆ ತಲೆ ಎತ್ತಬೇಕು. ಮಡಿಕೇರಿ ಮತ್ತು ಮಂಗಳೂರಿನ (KMC) ಮಾದರಿಯಲ್ಲೇ, ಆಸ್ಪತ್ರೆ ಪೇಟೆಯಲ್ಲಿದ್ದು, ಕಾಲೇಜು ದೂರದಲ್ಲಿ ಇರುವುದು ಸೂಕ್ತ” ಎಂದು ರಫೀಕ್ ದರ್ಬೆ ವಿವರಿಸಿದರು.
ಕಾಂಗ್ರೆಸ್ ಮಾಜಿ ಶಾಸಕಿಗೆ ಕ್ರೆಡಿಟ್ ಕೊಟ್ಟ ಬಿಜೆಪಿ!
ರಾಜಕೀಯ ವಲಯದಲ್ಲಿ ಗಮನ ಸೆಳೆದ ಬೆಳವಣಿಗೆಯೊಂದರಲ್ಲಿ, ಬಿಜೆಪಿ ಮುಖಂಡರು ಕಾಂಗ್ರೆಸ್ನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕಾರ್ಯವನ್ನು ಶ್ಲಾಘಿಸಿದ್ದಾರೆ. “ಮೆಡಿಕಲ್ ಕಾಲೇಜು ವಿಚಾರದಲ್ಲಿ ‘ಬೆಂಚ್ ಮಾರ್ಕ್’ ಯಾರದ್ದು ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಇದರ ನಿಜವಾದ ಶ್ರೇಯಸ್ಸು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಸಲ್ಲಬೇಕು. 2013ರಲ್ಲೇ ಮೆಡಿಕಲ್ ಕಾಲೇಜಿಗೆ ಜಾಗ ಕಾಯ್ದಿರಿಸಿ, 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಮೊದಲ ಪ್ರಯತ್ನ ಪಟ್ಟವರು ಅವರು” ಎಂದು ರಾಜೇಶ್ ಬನ್ನೂರು ಮುಕ್ತವಾಗಿ ಒಪ್ಪಿಕೊಂಡರು.
ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ್ದ ಜಾಗದಲ್ಲಿ ಸೀಫುಡ್ ಕಾರ್ಖಾನೆ ನಿರ್ಮಿಸಲು ಸಂಜೀವ ಮಠಂದೂರು ಪ್ರಯತ್ನಿಸಿದ್ದರಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜೇಶ್ ಬನ್ನೂರು ಇದಕ್ಕೆ ಮಠಂದೂರು ಅವರೇ ಉತ್ತರಿಸಬೇಕು ಎಂದರು.
ಆಸ್ಪತ್ರೆಯಲ್ಲೀಗ ಇರುವುದು ಕೇವಲ 4 ವೈದ್ಯರು!
ಒಂದು ಕಾಲದಲ್ಲಿ 18 ವೈದ್ಯರಿದ್ದ ಪುತ್ತೂರು ಸರ್ಕಾರಿ ಆಸ್ಪತ್ರೆ ಇಂದು ಅಕ್ಷರಶಃ ಸೊರಗಿದೆ. ಕೇವಲ 4 ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಹೆರಿಗೆ ತಜ್ಞರು, ಕಣ್ಣಿನ ವೈದ್ಯರು, ದಂತ ವೈದ್ಯರಂತಹ ಯಾವುದೇ ಪ್ರಮುಖ ತಜ್ಞರಿಲ್ಲದೆ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮುಖಂಡರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಶಗ್ರಿತ್ತಾಯ, ನಾಗೇಂದ್ರ ಬಾಳಿಗ, ಶಶಿಧರ್ ನಾಯಕ್, ನಿತೀಶ್ ಕಲ್ಲೇಗ, ವಿಶ್ವನಾಥ ಕುಲಾಲ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ರಾಜಕೀಯ24 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ದಕ್ಷಿಣ ಕನ್ನಡ9 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ7 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ8 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized7 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್8 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ7 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು7 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















