ಬಿಗ್ ನ್ಯೂಸ್
Janapriya-ಒಂದೇ ಅಪಘಾತಕ್ಕೆ 4 ಎಂ ಎಲ್ ಸಿ ನಿರ್ಮಾಣಪತ್ರ: “ಜನಪ್ರಿಯ” ವೈದ್ಯನ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಒಂದೇ ಅಪಘಾತದ ಪ್ರಕರಣಕ್ಕೆ ಬರೋಬ್ಬರಿ ನಾಲ್ಕು ಕಾನೂನುಬದ್ಧ ವೈದ್ಯಕೀಯ ಪರೀಕ್ಷಾ ಪ್ರಮಾಣ ಪತ್ರಗಳನ್ನು (ಮೆಡಿಕೊ-ಲೀಗಲ್ ಕೇಸ್ – MLC) ನೀಡಿದ ಹಾಸನದ ವೈದ್ಯರೊಬ್ಬರ ನಡೆಗೆ ಹೈಕೋರ್ಟ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ವೈದ್ಯನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿರುವ ನ್ಯಾಯಾಲಯ, ತನಿಖೆ ಮುಂದುವರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರು: ಒಂದೇ ಅಪಘಾತದ ಪ್ರಕರಣಕ್ಕೆ ಬರೋಬ್ಬರಿ ನಾಲ್ಕು ಕಾನೂನುಬದ್ಧ ವೈದ್ಯಕೀಯ ಪರೀಕ್ಷಾ ಪ್ರಮಾಣ ಪತ್ರಗಳನ್ನು (ಮೆಡಿಕೊ-ಲೀಗಲ್ ಕೇಸ್ – MLC) ನೀಡಿದ ಹಾಸನದ ವೈದ್ಯರೊಬ್ಬರ ನಡೆಗೆ ಹೈಕೋರ್ಟ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ವೈದ್ಯನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿರುವ ನ್ಯಾಯಾಲಯ, ತನಿಖೆ ಮುಂದುವರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹಾಸನದ ‘ಜನಪ್ರಿಯ’ ಆಸ್ಪತ್ರೆಯ ವೈದ್ಯ ಡಾ. ಅಬ್ದುಲ್ ಬಶೀರ್ ಅವರು ಸುಳ್ಳು ಎಂಎಲ್‌ಸಿ ನೀಡಿದ ಆರೋಪದ ಮೇಲೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ವೈದ್ಯನ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. “ಒಂದೇ ಅಪಘಾತಕ್ಕೆ 4 ಎಂಎಲ್‌ಸಿ ನೀಡಲು ಸಾಧ್ಯವೇ? ಜನಪ್ರಿಯ ಆಸ್ಪತ್ರೆಯ ವೈದ್ಯರು ಇಂತಹ ಕೆಲಸಕ್ಕೇ ಜನಪ್ರಿಯರೇ? ಇಂತಹ ವೈದ್ಯರಿಂದಲೇ ವಂಚನೆ ಪ್ರಕರಣಗಳು ನಡೆಯುವುದು” ಎಂದು ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಾನೂನು ಕ್ರಮ ಎದುರಿಸಲಿ ಎಂದ ಹೈಕೋರ್ಟ್:
ವೈದ್ಯನ ಪರ ವಕೀಲರು ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿದರಾದರೂ, ನ್ಯಾಯಮೂರ್ತಿಗಳು ಅದನ್ನು ಸಾರಾಸಗಟಾಗಿ ತಿರಸ್ಕರಿಸಿದರು. “ವೈದ್ಯರು ಕಾನೂನು ಕ್ರಮ ಎದುರಿಸಲಿ, ಪೊಲೀಸರ ತನಿಖೆ ಮುಂದುವರಿಯಲಿ. ಮುಂದಿನ ವಿಚಾರಣೆ ವೇಳೆ ತನಿಖಾ ದಾಖಲೆಗಳನ್ನು ಒದಗಿಸಬೇಕು” ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದರು. ಜೊತೆಗೆ, ಅರ್ಜಿಗೆ ಉತ್ತರಿಸುವಂತೆ ಸೂಚಿಸಿ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ದೂರುದಾರ ಬಜಾಜ್ ವಿಮಾ ಕಂಪನಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು?
ಬಜಾಜ್ ವಿಮಾ ಕಂಪನಿಯ ಪ್ರತಿನಿಧಿ ಪ್ರತೀಕ್ ಎಂಬುವವರು 2024ರ ಡಿಸೆಂಬರ್ 23ರಂದು ಸಕಲೇಶಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಅದರ ಪ್ರಕಾರ, 2024ರ ಜನವರಿ 27ರಂದು ಸಂಜೆ ಕಾರ್ಮಿಕ ಅಬ್ದುಲ್ ರೆಹಮಾನ್ ಎಂಬಾತನಿಗೆ ಬೈಕ್ (KA46 Q 1588) ಡಿಕ್ಕಿ ಹೊಡೆದು, ಎಡತೊಡೆಯ ಮೂಳೆ ಮುರಿದಿದೆ ಎಂದು ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ವಿಮಾ ಕಂಪನಿ ವಿಚಾರಣೆ ನಡೆಸಿದಾಗ ಅಚ್ಚರಿಯ ಸತ್ಯವೊಂದು ಹೊರಬಿದ್ದಿತ್ತು.
ಅಪಘಾತವಾದ ದಿನವೇ ಅಬ್ದುಲ್ ರೆಹಮಾನ್, ಚಿತ್ರದುರ್ಗದ ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಿಂದ ಎಂಎಲ್‌ಸಿ ಪಡೆದುಕೊಂಡಿದ್ದ. ಅದರಲ್ಲಿ, “15 ಅಡಿ ಎತ್ತರದಿಂದ ಆಯತಪ್ಪಿ ಬಿದ್ದಿದ್ದಾನೆ” ಎಂದು ಸ್ಪಷ್ಟವಾಗಿ ನಮೂದಾಗಿತ್ತು. ಆದರೆ, ಆತ ವಿಮಾ ಹಣ (Claim) ಪಡೆಯುವ ದುರುದ್ದೇಶದಿಂದ ಹಾಸನದ ‘ಜನಪ್ರಿಯ’ ಆಸ್ಪತ್ರೆಯ ವೈದ್ಯ ಡಾ. ಅಬ್ದುಲ್ ಬಶೀರ್ ಅವರ ಜೊತೆ ಶಾಮೀಲಾಗಿ, ಅದನ್ನು “ರಸ್ತೆ ಅಪಘಾತ” ಎಂದು ಬಿಂಬಿಸುವ ಸುಳ್ಳು ದಾಖಲಾತಿಯನ್ನು (ಇಂಟಿಮೇಷನ್) ಸೃಷ್ಟಿಸಿದ್ದ. ಆ ಮೂಲಕ ಬಜಾಜ್ ವಿಮಾ ಕಂಪನಿಗೆ ವಂಚಿಸಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಅಬ್ದುಲ್ ರೆಹಮಾನ್, ಡಾ. ಅಬ್ದುಲ್ ಬಶೀರ್ ಮತ್ತು ಬೈಕ್ ಮಾಲೀಕನ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.
ನ್ಯಾಯಾಲಯದಲ್ಲಿ ನಡೆದ ಬಿಸಿಬಿಸಿ ಚರ್ಚೆ:
ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ 2ನೇ ಆರೋಪಿ ಡಾ. ಅಬ್ದುಲ್ ಬಶೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ವೈದ್ಯನ ಪರ ವಕೀಲರು, “ಸ್ವಾಮಿ, ಅರ್ಜಿದಾರರು ವೈದ್ಯರು. ವಿಮಾ ಕಂಪನಿ ದೂರು ದಾಖಲಿಸಿದೆ. ಗಾಯಗೊಂಡು ಬಂದವರಿಗೆ ಚಿಕಿತ್ಸೆ ನೀಡುವುದು ಅವರ ಕರ್ತವ್ಯ” ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದರು.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “ಅದು ಸರಿ, ಆದರೆ ಯಾರಾದರೂ ಒಂದು ಅಪಘಾತಕ್ಕೆ 4 ಎಂಎಲ್‌ಸಿ ಕೊಡುತ್ತಾರೆಯೇ? ಬಂದವರಿಗೆಲ್ಲ ಒಂದೊಂದು ಎಂಎಲ್‌ಸಿ ಕೊಟ್ಟು ಕಳಿಸುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದರು.
ಆಗ ವಕೀಲರು, “ಇಲ್ಲ ಸ್ವಾಮಿ, ಅಬ್ದುಲ್ ರೆಹಮಾನ್ ಚಿತ್ರದುರ್ಗದಲ್ಲಿ ಅಪಘಾತ ನಡೆದಿದೆ ಎಂದು ಹೇಳಿ ಬಂದಿದ್ದರು. ವೈದ್ಯರಾಗಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಚಿತ್ರದುರ್ಗದಲ್ಲಿ ಎಲ್ಲೋ ಅಪಘಾತ ನಡೆದಿದೆ ಎಂದು ಬಂದರೆ ಸತ್ಯಾಂಶ ಹೇಗೆ ತಿಳಿಯುತ್ತದೆ? ಇದು ಎರಡನೇ ಎಂಎಲ್‌ಸಿ ಅಷ್ಟೇ” ಎಂದರು.
ಇದಕ್ಕೆ ಗರಂ ಆದ ನ್ಯಾಯಮೂರ್ತಿಗಳು, “ಒಂದೇ ಅಪಘಾತಕ್ಕೆ ಎರಡು ಎಂಎಲ್‌ಸಿ ಯಾದರೂ ಹೇಗೆ ಕೊಡುತ್ತೀರಾ? ಅರ್ಜಿದಾರರ ಜನಪ್ರಿಯ ಆಸ್ಪತ್ರೆ ಎಲ್ಲಿದೆ? ಇಂಥ ಕೆಲಸಕ್ಕೆ ಅರ್ಜಿದಾರರು ಜನಪ್ರಿಯರೇ? ಇಂಥ ವೈದ್ಯರಿಂದಲೇ ವಂಚನೆ ಆಗುತ್ತಿರುವುದು. ಕಾನೂನು ಕ್ರಮ ಎದುರಿಸಲೇಬೇಕು, ಬೇರೆ ದಾರಿಯೇ ಇಲ್ಲ. ಈಗ ನಾನು ತನಿಖೆಗೆ ತಡೆಯಾಜ್ಞೆ ನೀಡಿದರೆ, ಅರ್ಜಿದಾರರು ಮೂರನೇ ಎಂಎಲ್‌ಸಿ ಕೂಡ ನೀಡುತ್ತಾರೆ. ಹೀಗಾಗಿ ದಯೆ ತೋರಿಸಲಾಗದು. ತನಿಖೆ ಮುಂದುವರಿಯಲಿ” ಎಂದು ಕಟುವಾಗಿ ಎಚ್ಚರಿಸಿ, ಅರ್ಜಿಯನ್ನು ವಜಾಗೊಳಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್10 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ16 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized17 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















