ಉಡುಪಿ
Anantkumar Hegde-ʻಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ದ್ರೋಹಿಗಳುʼ; ಭಟ್ಕಳ ಹಿಂದೂ ಸಮಾವೇಶದಲ್ಲಿ ಅನಂತಕುಮಾರ್ ಹೆಗಡೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಬಳಿಕ ಸಾರ್ವಜನಿಕ ವೇದಿಕೆಗಳಿಂದ ಅಂತರ ಕಾಯ್ದುಕೊಂಡು ಮೌನಕ್ಕೆ ಶರಣಾಗಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಮತ್ತೆ ತಮ್ಮ ಹಳೆಯ ಖಡಕ್ ಶೈಲಿಯಲ್ಲೇ ಗುಡುಗಿದ್ದಾರೆ. ಶುಕ್ರವಾರ ಭಟ್ಕಳ ನಗರದ ಹಳೆ ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ, ಜಾತ್ಯತೀತತೆ ಹಾಗೂ ಹಿಂದೂ ಸಂಘಟನೆಯ ಕುರಿತು ತಮ್ಮದೇ ಶೈಲಿಯಲ್ಲಿ ವಿಶ್ಲೇಷಣೆ ಮಾಡಿದರು.
ಭಟ್ಕಳ (ಮಾ.08): ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಬಳಿಕ ಸಾರ್ವಜನಿಕ ವೇದಿಕೆಗಳಿಂದ ಅಂತರ ಕಾಯ್ದುಕೊಂಡು ಮೌನಕ್ಕೆ ಶರಣಾಗಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಮತ್ತೆ ತಮ್ಮ ಹಳೆಯ ಖಡಕ್ ಶೈಲಿಯಲ್ಲೇ ಗುಡುಗಿದ್ದಾರೆ. ಶುಕ್ರವಾರ ಭಟ್ಕಳ ನಗರದ ಹಳೆ ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ, ಜಾತ್ಯತೀತತೆ ಹಾಗೂ ಹಿಂದೂ ಸಂಘಟನೆಯ ಕುರಿತು ತಮ್ಮದೇ ಶೈಲಿಯಲ್ಲಿ ವಿಶ್ಲೇಷಣೆ ಮಾಡಿದರು.
“ಜಾತಿಗೆ ಬೆಲೆ ಇರಲಿಲ್ಲ, ಯೋಗ್ಯತೆಗೆ ಬೆಲೆಯಿತ್ತು”
ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಮಾತನಾಡಿದ ಅವರು, “ವಾಲ್ಮೀಕಿ, ವಿಶ್ವಾಮಿತ್ರರಂತಹ ಶೇ.90ರಷ್ಟು ಋಷಿ-ಮುನಿಗಳು ಬ್ರಾಹ್ಮಣರಾಗಿರಲಿಲ್ಲ. ನಮ್ಮ ಇತಿಹಾಸದಲ್ಲಿ ಎಂದಿಗೂ ಜಾತಿಗೆ ಬೆಲೆಯಿರಲಿಲ್ಲ, ಕೇವಲ ಯೋಗ್ಯತೆಗೆ ಮಾತ್ರ ಮನ್ನಣೆ ಇತ್ತು. ಆದರೆ, ಇಂದು ನಮ್ಮಂತಹ ‘ಬುದ್ಧಿವಂತರು’ ಜಾತಿಗೆ ಬೆಲೆ ಕೊಡುವ ಕೆಲಸ ಮಾಡುತ್ತಿದ್ದೇವೆ. ಇತಿಹಾಸವನ್ನು ಸರಿಯಾಗಿ ಓದಿದಾಗ ಮಾತ್ರ ಸತ್ಯ ಅರಿವಾಗುತ್ತದೆ” ಎಂದರು.
“ತಾಕತ್ತಿದ್ದರೆ ಬಾಂಗ್ಲಾದೇಶದಲ್ಲಿ ಜಾತ್ಯತೀತತೆಯ ಪಾಠ ಮಾಡಿ”
ಜಾತ್ಯತೀತತೆಯ (Secularism) ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಹೆಗಡೆ, “ಹಿಂದುತ್ವವೇ ನಿಜವಾದ ಜಾತ್ಯತೀತತೆ. ಬೇರೆ ರಾಷ್ಟ್ರಗಳಿಂದ ಬಂದವರಿಗೂ ನಮ್ಮಲ್ಲಿ ಮಸೀದಿ, ಚರ್ಚ್ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದೇವೆ. ಇದಕ್ಕಿಂತ ದೊಡ್ಡ ಜಾತ್ಯತೀತತೆ ಮತ್ತೊಂದಿದೆಯೇ? ಕೇವಲ ಇಲ್ಲಿ ಕುಳಿತು ಮಾತನಾಡುವ ಬದಲು, ತಾಕತ್ತಿದ್ದರೆ ಬಾಂಗ್ಲಾದೇಶಕ್ಕೆ ಹೋಗಿ ಜಾತ್ಯತೀತತೆಯ ಪಾಠ ಮಾಡಿ ಬರಲಿ” ಎಂದು ಸವಾಲು ಹಾಕಿದರು.
“ಹಿಂದೂಗಳನ್ನು ಸೋಲಿಸಿದ್ದು ನಮ್ಮವರೇ ಆದ ದ್ರೋಹಿಗಳು”
ಇತಿಹಾಸವನ್ನು ಕೆದಕಿದ ಅವರು, “ನಮ್ಮನ್ನು ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಂದು ಸೋಲಿಸಲಿಲ್ಲ. ಬದಲಾಗಿ ನಮ್ಮವರೇ ಆದ ಜಯಚಂದ, ಮಲ್ಲಪ್ಪ ಶೆಟ್ಟಿಯಂತಹ ದ್ರೋಹಿಗಳಿಂದ ನಾವು ಸೋಲೊಪ್ಪಿಕೊಳ್ಳಬೇಕಾಯಿತು. ನಾವೆಲ್ಲರೂ ಈಗಲಾದರೂ ಒಂದಾಗದಿದ್ದರೆ, ಮುಂದೊಂದು ದಿನ ನಮ್ಮ ಪರಿಸ್ಥಿತಿ ‘ಗೋವಿಂದ.. ಗೋವಿಂದ..’ ಆಗುವುದರಲ್ಲಿ ಅನುಮಾನವಿಲ್ಲ” ಎಂದು ಎಚ್ಚರಿಕೆ ನೀಡಿದರು.
“ಆರ್.ಎಸ್.ಎಸ್ (RSS) ಮುಗಿಸುವುದು ಭ್ರಮೆ”
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬಗ್ಗೆ ಮಾತನಾಡಿದ ಹೆಗಡೆ, “ಆರ್.ಎಸ್.ಎಸ್ ಅನ್ನು ಮುಗಿಸುತ್ತೇವೆ ಎಂದು ಹೇಳುವವರು ಭ್ರಮೆಯಲ್ಲಿದ್ದಾರೆ. ದೇವರಿಗೆ ಯಾವಾಗಲೂ ಕುರಿಯನ್ನಷ್ಟೇ ಬಲಿ ಕೊಡಲಾಗುತ್ತದೆ, ಹುಲಿ ಅಥವಾ ಸಿಂಹವನ್ನಲ್ಲ. ನಮ್ಮ ಸಂಘಟನೆಯನ್ನು ತಡೆಯಲು ಯಾರಿಂದಲೂ, ಎಂದಿಗೂ ಸಾಧ್ಯವಿಲ್ಲ” ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
“ಜಗತ್ತು ಭಾರತದತ್ತ ನೋಡುತ್ತಿದೆ”
ಭಾರತೀಯ ಸಂಸ್ಕೃತಿಯ ಪ್ರಭಾವದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಅವರು, “ಇಂದು ಆಫ್ರಿಕಾದಲ್ಲಿ ನಮಗಿಂತಲೂ ಹೆಚ್ಚು ಸುಂದರವಾಗಿ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಚೀನಾದ ಗ್ರಾಮೀಣ ಭಾಗಗಳಲ್ಲಿ ಭಾರತೀಯರು ಎಂದರೆ ಅತೀವ ಗೌರವವಿದೆ. ಇಡೀ ಜಗತ್ತೇ ಇಂದು ನಮ್ಮತ್ತ ನೋಡುತ್ತಿರುವಾಗ, ನಾವು ಎಚ್ಚೆತ್ತು ನಿಲ್ಲಬೇಕಾದ ಅಗತ್ಯವಿದೆ. ಕೇವಲ ಹಣ ಸಂಪಾದನೆಗೆ ಸೀಮಿತವಾಗಿರುವ ಇಂದಿನ ಶಿಕ್ಷಣ ಪದ್ಧತಿಯ ಬದಲು, ಮಕ್ಕಳಿಗೆ ಸಂಸ್ಕಾರಯುತ ಬದುಕು ಕಟ್ಟಿಕೊಡುವ ಶಿಕ್ಷಣದ ಅಗತ್ಯವಿದೆ” ಎಂದು ಪ್ರತಿಪಾದಿಸಿದರು.
ಈ ಬೃಹತ್ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಸುಮಾರು 3,000ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಟ್ಕಳ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Uncategorized23 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್11 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ6 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ11 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ10 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ11 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ9 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ11 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















