ಪುತ್ತೂರು
Uppinangadi-ಉಪ್ಪಿನಂಗಡಿ : ಮನೆಯ ಪಕ್ಕದ ಶೆಡ್ನಲ್ಲೇ ‘ಮಿನಿ ಡೀಸೆಲ್ ಬಂಕ್’! ಪೊಲೀಸರ ದಿಢೀರ್ ದಾಳಿ: ಬರೋಬ್ಬರಿ 4,175 ಲೀಟರ್ ಡೀಸೆಲ್ ಸೀಜ್
ಯಾವುದೇ ಲೈಸೆನ್ಸ್ ಇಲ್ಲ.. ಸುರಕ್ಷತಾ ಕ್ರಮಗಳಂತೂ ಮೊದಲೇ ಇಲ್ಲ..! ಮನೆಯ ಪಕ್ಕದ ಶೆಡ್ವೊಂದನ್ನೇ ‘ಮಿನಿ ಡೀಸೆಲ್ ಬಂಕ್’ ಮಾಡಿಕೊಂಡಿದ್ದ ಅಡ್ಡೆಯೊಂದರ ಮೇಲೆ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಭಾರಿ ಅಕ್ರಮವೊಂದನ್ನು ಬೆಳ್ತಂಗಡಿ ಉಪವಿಭಾಗದ ಪೊಲೀಸರು ಬೇರುಸಹಿತ ಬಯಲಿಗೆಳೆದಿದ್ದಾರೆ.
ಉಪ್ಪಿನಂಗಡಿ: ಯಾವುದೇ ಲೈಸೆನ್ಸ್ ಇಲ್ಲ.. ಸುರಕ್ಷತಾ ಕ್ರಮಗಳಂತೂ ಮೊದಲೇ ಇಲ್ಲ..! ಮನೆಯ ಪಕ್ಕದ ಶೆಡ್ವೊಂದನ್ನೇ ‘ಮಿನಿ ಡೀಸೆಲ್ ಬಂಕ್’ ಮಾಡಿಕೊಂಡಿದ್ದ ಅಡ್ಡೆಯೊಂದರ ಮೇಲೆ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಭಾರಿ ಅಕ್ರಮವೊಂದನ್ನು ಬೆಳ್ತಂಗಡಿ ಉಪವಿಭಾಗದ ಪೊಲೀಸರು ಬೇರುಸಹಿತ ಬಯಲಿಗೆಳೆದಿದ್ದಾರೆ.

ಏನಿದು ಘಟನೆ?
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಜಗದೀಶ್ (35) ಎಂಬಾತ ತನ್ನ ಮನೆಯ ಸಮೀಪದ ಶೆಡ್ನಲ್ಲಿ ಸಾವಿರಾರು ಲೀಟರ್ ಡೀಸೆಲ್ ಅನ್ನು ಅಕ್ರಮವಾಗಿ ಬಚ್ಚಿಟ್ಟಿದ್ದ. ಈ ಬಗ್ಗೆ ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು.
ಮಾಹಿತಿ ಸಿಕ್ಕ ತಕ್ಷಣವೇ ಅಲರ್ಟ್ ಆದ ಡಿವೈಎಸ್ಪಿ ಅವರು, ಮಾರ್ಚ್ 09ರ ರಾತ್ರಿ ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಠಾಣಾಧಿಕಾರಿಗಳ ವಿಶೇಷ ತಂಡದೊಂದಿಗೆ ತೆರಳಿ ಈ ಶೆಡ್ ಮೇಲೆ ಭರ್ಜರಿ ರೇಡ್ ಮಾಡಿದ್ದಾರೆ.

ಪೊಲೀಸರೇ ದಂಗು..! ಶೆಡ್ನಲ್ಲಿ ಸಿಕ್ಕಿದ್ದೇನು?
ದಾಳಿ ವೇಳೆ ಶೆಡ್ನಲ್ಲಿದ್ದ ದೃಶ್ಯ ಕಂಡು ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ. ಗುಟ್ಟಾಗಿ ಇಟ್ಟಿದ್ದ ಬ್ಯಾರೆಲ್ಗಳನ್ನು ಪರಿಶೀಲಿಸಿದಾಗ ಕಳ್ಳಾಟ ಬೆಳಕಿಗೆ ಬಂದಿದೆ.
• 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ಗಳು!
• 35 ಲೀಟರ್ ಸಾಮರ್ಥ್ಯದ 5 ಕ್ಯಾನ್ಗಳು!
• ಬರೋಬ್ಬರಿ 4,175 ಲೀಟರ್ ಡೀಸೆಲ್ ಪತ್ತೆ!
• ಜೊತೆಗೆ ಮತ್ತಷ್ಟು ಅಕ್ರಮಕ್ಕೆ ಬಳಸಲು ಇಟ್ಟಿದ್ದ ಹಲವು ಖಾಲಿ ಬ್ಯಾರೆಲ್ ಹಾಗೂ ಕ್ಯಾನ್ಗಳು ಪತ್ತೆಯಾಗಿವೆ.
ವಶಪಡಿಸಿಕೊಂಡಿರುವ ಡೀಸೆಲ್ ಹಾಗೂ ಇತರ ವಸ್ತುಗಳ ಒಟ್ಟು ಮೌಲ್ಯ ಅಂದಾಜು 3.50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಗಾಳಿಗೆ ತೂರಿದ್ದ ನಿಯಮ, ಬಿಗಿಯಾದ ಕಾನೂನು ಕುಣಿಕೆ!
ಆರೋಪಿ ಜಗದೀಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆದಿಲ್ಲ ಎಂಬುದು ದೃಢಪಟ್ಟಿದೆ. ಜನವಸತಿ ಪ್ರದೇಶದ ಸಮೀಪ ಯಾವುದೇ ಸುರಕ್ಷತಾ ನಿಯಮಗಳಿಲ್ಲದೆ ಇಷ್ಟು ದೊಡ್ಡ ಪ್ರಮಾಣದ ಸ್ಫೋಟಕ ವಸ್ತುವನ್ನು ಶೇಖರಿಸಿಟ್ಟಿದ್ದು ಭಾರೀ ಅನಾಹುತಕ್ಕೂ ಕಾರಣವಾಗುವ ಸಾಧ್ಯತೆ ಇತ್ತು.
ಸದ್ಯ ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (ಕ್ರೈಂ ನಂಬರ್: 35) ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 287, 3(5), ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3, 7 ಹಾಗೂ ಪೆಟ್ರೋಲಿಯಂ ಕಾಯ್ದೆ 1934ರ ಕಲಂ 23ರ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈ ಅಕ್ರಮದ ಹಿಂದೆ ಇನ್ಯಾರಿದ್ದಾರೆ? ಈ ಡೀಸೆಲ್ ಎಲ್ಲಿಂದ ಬಂತು? ಎಂಬುದರ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















