Connect with us

ಬಿಗ್ ನ್ಯೂಸ್

Puttur-ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ‘ಸಂಭ್ರಮ’: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾನೂನು ಉಲ್ಲಂಘನೆ ಆರೋಪ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರು ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು : ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರು ಮನವಿ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು Karnataka Hindu Religious Institutions and Charitable Endowments Act, 1997 ಅಡಿಯಲ್ಲಿ ನೋಂದಾಯಿತವಾನವ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟಿರುವ ದೇವಸ್ಥಾನವಾಗಿದೆ.Karna taka Hindu Religious Institutions and Charitable Endowments Act, 1997 ಕಾಯ್ದೆಯ ಪ್ರಕಾರ ದೇವಸ್ಥಾನದ ಆಸ್ತಿ, ಹಾಲ್, ಕಟ್ಟಡಗಳು ಹಾಗೂ ಇತರೆ ಸೌಕರ್ಯಗಳು ಧಾರ್ಮಿಕ ಹಾಗೂ ಧರ್ಮಾರ್ಥ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದು ಕಾನೂನು ಸ್ಪಷ್ಟಪಡಿಸುತ್ತದೆ. ವಿಶೇಷವಾಗಿ ಈ ಕಾಯ್ದೆಯ Section 19, Section 25 ಹಾಗೂ Section 63 ಪ್ರಕಾರ ದೇವಸ್ಥಾನದ ಆಸ್ತಿಗಳ ಬಳಕೆ ಮತ್ತು ಅದರ ನಿರ್ವಹಣೆ ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಸೀಮಿತವಾಗಿರಬೇಕು ಮತ್ತು ಅವುಗಳ ದುರುಪಯೋಗವನ್ನು ತಡೆಯುವ ಜವಾಬ್ದಾರಿ ಆಡಳಿತಾಧಿಕಾರಿಗಳಿಗೆ ಇದೆ.

Ad Widget

Ad Widget <> Ad Widget

ಆದರೆ, ಮಾ.8ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಇದರ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿದ್ದು, ದೇವಸ್ಥಾನದ ಪವಿತ್ರ ಆವರಣದಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸುವುದು ದೇವಸ್ಥಾನದ ಧಾರ್ಮಿಕ ಸ್ವರೂಪಕ್ಕೆ ಧಕ್ಕೆ ತರುವಂತದ್ದು ಮತ್ತು ಮೇಲ್ಕಂಡ ಕಾಯ್ದೆಯ ಉದ್ದೇಶ ಹಾಗೂ ನಿಯಮಗಳಿಗೆ ವಿರುದ್ಧವಾಗಿದೆ. ಮತ್ತು ಈ ಕಾರ್ಯಕ್ರಮದಲ್ಲಿ ಅನ್ಯಧರ್ಮದ ವ್ಯಕ್ತಿಗಳು ಕೂಡ ಭಾಗಿಯಾಗಿರುವುದು ದೇವಸ್ಥಾನದ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಕಾರ್ಯ ನಡೆದಿರುತ್ತದೆ ಎಂದು ಅವರು ತಿಳಿಸಿದ್ದಾರೆ.



Ad Widget

ಇಂತಹ ಘಟನೆಗಳು ಮುಂದುವರಿದರೆ ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದ್ದು ಸಮಾಜದಲ್ಲಿ ಅನಾವಶ್ಯಕ ಉದ್ವಿಗ್ನತೆ ಉಂಟಾಗುವ ಪರಿಸ್ಥಿತಿ ಉಂಟಾಗಬಹುದು. ಆದುದರಿಂದ, ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿದ ಘಟನೆ ಕುರಿತು ತಕ್ಷಣ ತನಿಖೆ ನಡೆಸಬೇಕು. ದೇವಸ್ಥಾನದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡ ಸಂಬಂಧಪಟ್ಟವರ ವಿರುದ್ಧ Karnataka Hindu Religious Institutions and Charitable Endowments Act, 1997 ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ದೇವಸ್ಥಾನದ ಆಸ್ತಿಯನ್ನು ರಾಜಕೀಯ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಅವರು ವಿನಂತಿಯನ್ನು ಮಾಡಿದ್ದಾರೆ.

Ad Widget

Ad Widget

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷೆ ಸ್ವರ್ಣ ಲತಾ ಹೆಗಡೆ, ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಓಬಿಸಿ ಮೋರ್ಚಾ ಅಧ್ಯಕ್ಷ ನಿರಂಜನ, ಶಕ್ತಿಕೇಂದ್ರ ಅಧ್ಯಕ್ಷ ನಾಗೇಂದ್ರ ಬಾಳಿಗ, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ನಾಗೇಶ್, ಕಾರ್ಯಕರ್ತ ರವಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading