ಶಿಕ್ಷಣ
Vidyamata-ವಿದ್ಯಾಮಾತಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗಾಗಿ ವಿಶಿಷ್ಟ “ಬೇಸಿಗೆ ಕೌಶಲ ಸಂಭ್ರಮ – 2026”; 4ನೇ ತರಗತಿಯಿಂದ 10ನೇ ತರಗತಿ ವರೆಗಿನ ಮಕ್ಕಳಿಗಾಗಿ ಆಯೋಜನೆಯಾಗಿರುವ ವಿಶೇಷ ಶಿಬಿರ; 20.04.2026 ರಿಂದ 20.05.2026 ರ ವರೆಗೆ ನಡೆಯುವ ಶಿಬಿರಕ್ಕೆ ನೋಂದಣಿ ಪ್ರಾರಂಭ
ವಿದ್ಯಾರ್ಥಿಗಳ ರಜೆಯ ಸಮಯವನ್ನು ಜ್ಞಾನವರ್ಧನೆ ಮತ್ತು ಕೌಶಲಾಭಿವೃದ್ಧಿಗೆ ಪೂರಕವಾಗಿಸುವ ನಿಟ್ಟಿನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು 4ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳ ವಿಶೇಷ “ಬೇಸಿಗೆ ಕೌಶಲ ಸಂಭ್ರಮ – 2026” ಶಿಬಿರವನ್ನು ಪುತ್ತೂರು ಮತ್ತು ಸುಳ್ಯದಲ್ಲಿ ಆಯೋಜಿಸಿದೆ.
ವಿದ್ಯಾರ್ಥಿಗಳ ರಜೆಯ ಸಮಯವನ್ನು ಜ್ಞಾನವರ್ಧನೆ ಮತ್ತು ಕೌಶಲಾಭಿವೃದ್ಧಿಗೆ ಪೂರಕವಾಗಿಸುವ ನಿಟ್ಟಿನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು 4ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳ ವಿಶೇಷ “ಬೇಸಿಗೆ ಕೌಶಲ ಸಂಭ್ರಮ – 2026” ಶಿಬಿರವನ್ನು ಪುತ್ತೂರು ಮತ್ತು ಸುಳ್ಯದಲ್ಲಿ ಆಯೋಜಿಸಿದೆ.
ಕೇವಲ ಪಠ್ಯಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳ ಬೌದ್ಧಿಕ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಈ ಶಿಬಿರವು ಈ ಬಾರಿ ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿದೆ.
ಶಿಬಿರದ ಪ್ರಮುಖ ಆಕರ್ಷಣೆಗಳು:
ಮ್ಯಾಥ್ಸ್ ಕ್ಲಬ್: ಭವಿಷ್ಯದ ದೃಷ್ಟಿಯಿಂದ ಚಿಕ್ಕ ಮಕ್ಕಳಲ್ಲಿರುವ ಗಣಿತದ ಭಯವನ್ನು ಹೋಗಲಾಡಿಸಲು ವಿಶೇಷ ಗಣಿತ ತರಗತಿಗಳಾದ ಮಾನಸಿಕ ಸಾಮರ್ಥ್ಯ, ರೀಸನಿಂಗ್,ಅಬಾಕಸ್,ವೇದ ಗಣಿತ (Vedic Maths) ಮತ್ತು ಲಾಜಿಕ್ ಪಜಲ್ಸ್ ಮೂಲಕ ಗಣಿತದ ಭಯ ದೂರಮಾಡಿ ಲೆಕ್ಕಾಚಾರದಲ್ಲಿ ವೇಗ ಗಳಿಸುವ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂಚೂಣಿಯಲ್ಲಿರಲು ಸಹಕಾರಿಯಾಗಲಿದೆ.
ವಿಜ್ಞಾನ ಲೋಕ: ಪಠ್ಯಪುಸ್ತಕದ ಹೊರಗಿನ ಪ್ರಾಯೋಗಿಕ ವಿಜ್ಞಾನ ಮತ್ತು ವಿಸ್ಮಯಕಾರಿ ಪ್ರಯೋಗಗಳ ಮೂಲಕ ವೈಜ್ಞಾನಿಕ ಮನೋಭಾವ ಮೂಡಿಸುವ ಮೂಲಕ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ಅನುಕೂಲಕರವಾಗಲಿದೆ
ಇಂಗ್ಲೀಷ್ ಲ್ಯಾಬ್ & ಎಫೆಕ್ಟಿವ್ ಸ್ಪೀಕರ್: ಸುಲಲಿತ ಇಂಗ್ಲೀಷ್ ಸಂವಹನ ಕಲೆ ಮತ್ತು ವೇದಿಕೆಯ ಭಯ ನಿವಾರಿಸಿ ಆತ್ಮವಿಶ್ವಾಸದಿಂದ ಮಾತನಾಡುವ ತರಬೇತಿ.
ಮೈಂಡ್ ಗೇಮ್ಸ್: ಏಕಾಗ್ರತೆ ಮತ್ತು ನೆನಪಿನ ಶಕ್ತಿ ಹೆಚ್ಚಿಸಲು ರೂಬಿಕ್ಸ್ ಕ್ಯೂಬ್, ಚದುರಂಗ ಹಾಗೂ ವಿಶಿಷ್ಟ ಮೆಮೊರಿ ಟ್ರಿಕ್ಸ್ ಅಳವಡಿಸಲಾಗಿದೆ.
ಸಾಮಾನ್ಯ ಜ್ಞಾನ: ಆಕರ್ಷಕ ರಸಪ್ರಶ್ನೆಗಳ ಮೂಲಕ ಜಗತ್ತಿನ ವಿದ್ಯಮಾನಗಳ ಪರಿಚಯ.
ಅನುಭವಿ ತರಬೇತುದಾರರಿಂದ ಮಾರ್ಗದರ್ಶನ:
ವಿದ್ಯಾಮಾತಾ ಅಕಾಡೆಮಿಯ ನುರಿತ ತರಬೇತುದಾರರು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಪ್ರತೀ ವರ್ಷದಂತೆ ಈ ವರ್ಷವೂ ನಡೆಯಲಿದೆ ದೂರದೃಷ್ಟಿಯುಳ್ಳ ಶಿಬಿರ
4ನೇ ತರಗತಿಯಿಂದ ಪ್ರಾರಂಭವಾಗಿ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳಬಹುದು, ಮಕ್ಕಳ ಭವಿಷ್ಯವನ್ನು ಕೇಂದ್ರೀಕರಿಸಿ ನಡೆಯುವ ತರಬೇತಿಗಳು ದಿನಾಂಕ 20.04.2026 ರಿಂದ ಪ್ರಾರಂಭವಾಗಿ 20.05.2026 ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 3 ಗಂಟೆ ವರೆಗೆ ನಡೆಯಲಿದೆ, ತರಬೇತಿ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಮಾಥ್ಸ್ ಕ್ಲಬ್, ಅಬಾಕಸ್, ನವೋದಯ ಶಾಲೆ, ಸೈನಿಕ ಶಾಲೆ, ಮೊರಾರ್ಜಿ ಶಾಲೆ, ಆದರ್ಶ ವಿದ್ಯಾಲಯ ಸೇರಿದಂತೆ ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗಳು, ವಿವಿಧ ಸ್ಕಾಲರ್ ಶಿಪ್ ಗಳು ಸೇರಿದಂತೆ ಭವಿಷ್ಯದ ಶೈಕ್ಷಣಿಕ ವ್ಯಾಸಂಗ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಗಮನವಹಿಸಿ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಲಾಗುತ್ತದೆ.
ಶಿಬಿರದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಆಕರ್ಷಕ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು.
ರಜೆಯ ಮೋಜಿನೊಂದಿಗೆ ಜ್ಞಾನದ ಸಂಪತ್ತನ್ನು ಪಡೆಯಲು ಇದು ಸುವರ್ಣ ಅವಕಾಶ ಎಂದು ಅಕಾಡೆಮಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ
ನೋಂದಣಿಗಾಗಿ ಸಂಪರ್ಕಿಸಿ:
ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಪೋಷಕರು ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಲು ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:
📞 9620468869 / 9148935808
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್ಐಟಿಕೆ (NITK) ಸುರತ್ಕಲ್ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
-
ಸ್ಥಳೀಯ12 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್12 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ5 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಮಂಗಳೂರು6 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಕಾರ್ಯಕ್ರಮಗಳು7 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ6 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ14 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















