ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದಿಂದ ವಿಶನ್ 2K26 ಆಯೋಜನೆ
ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್ ಐಟಿ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಶನ್2K26 ಐಟಿ ಫೆಸ್ಟ್ ಅನ್ನು ಆಯೋಜಿಸಲಾಯಿತು.
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್ ಐಟಿ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಶನ್2K26 ಐಟಿ ಫೆಸ್ಟ್‌ಅನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆಗೃದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ವಿದ್ಯಾರ್ಥಿಗಳನ್ನುದ್ದೇಶಿಸಿ “ಕಾಲೇಜಿನಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಎಲ್ಲಾ ಕಾರ್ಯಕ್ರಮಗಳೂ ನಿಗದಿತ ವೇಳಾಪಟ್ಟಿಯಂತೆ ನಡೆಯುತ್ತವೆ ಆದರೆ ಔದ್ಯೋಗಿಕ ಜಗತ್ತಿಗೆ ಕಾಲಿರಿಸಿದಾಗ ನಿಮ್ಮ ಮುಂದೆ ಡೆಡ್‌ಲೈನ್ ಅಥವಾ ಗಡುವು ಮಾತ್ರವೇ ಇರುತ್ತದೆ. ಗಡುವು ಮೀರದಂತೆ ಕತ್ರವ್ಯ ನಿರ್ವಹಿಸಲು ಶಿಸ್ತು ಹಾಗೂ ಸಮಯಪರಿಪಾಲನೆ ಅತ್ಯಂತ ಮುಖ್ಯವಾಗಿರುತ್ತವೆ. ಒಂದು ಕೆಲಸವನ್ನು ನಿರ್ದಿಷ್ಟ ಸಮಯದಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಡುವಲ್ಲಿ ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತವೆ “ ಎಂದು ಹೇಳಿದರು.

ಕಾಲೇಜಿನ ಗಣಗವಿಜ್ಞಾನ ವಿಭಾಗದ ಡೀನ್ ಡಾ| ವಿನಯಚಂದ್ರರವರು “ಕಾಲೇಜಿನಲ್ಲಿ 2012ರಿಂದ ವಿಶನ್ ಇಂಟ್ರಾ ಡಿಪಾರ್ಟ್‌ಮೆಂಟ್ ಐಟಿ ಫೆಸ್ಟ್ ಅನ್ನು ಆಯೋಜಿಸಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಪಠ್ಯ ಅಧ್ಯಯನದ ಜೊತೆಗೆ ತಮ್ಮ ಅಡಗಿರುವ ಪ್ರತಿಭೆಯನ್ನು ಹೊರಹಾಕುವ ವಿಶಿಷ್ಟ ಅವಕಾಶವನ್ನು ಒದಗಿಸುತ್ತಿದೆ. ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆಯುವ ವಿಷನ್ ಕಾರ್ಯಕ್ರಮವು ನವೀನ ಆಲೋಚನೆಗಳಿಗೆ ಉತ್ತೇಜನ ನೀಡುವ ಹಾಗೂ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವ ಸಕ್ರಿಯ ವೇದಿಕೆಯಾಗಿದೆ. ವಿಶನ್ ಸ್ಪರ್ಧೆಗಳ ಘೋಷಣೆ ಆಗುತ್ತಿದ್ದಂತೆಯೇ ವಿದ್ಯಾರ್ಥಿಗಳಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಗುತ್ತದೆ. ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸ್ಪರ್ಧಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ತಂಡಸ್ಪೂರ್ತಿ ಬೆಳೆದು ಬರುತ್ತವೆ” ಎಂದು ಹೇಳಿದರು.

ಸುರಭಿ ಮತ್ತು ಬಳಗ ಪ್ರಾರ್ಥಿಸಿದರು. ಪಿನ್ಯಾಕಲ್ ಐಟಿ ಕ್ಲಬ್ ನ ಅಧ್ಯಕ್ಷ ಯೂಸುಫ್ ಅಲಿ ಸಲೀಲ್ ಸ್ವಾಗತಿಸಿದರು. ಉಪಾಧ್ಯಕ್ಷೆ ದೀಕ್ಷಾ ವಂದಿಸಿದರು. ದ್ವಿತೀಯ ಬಿಸಿಎ (ಎಐ & ಎಂಲ್) ವಿದ್ಯಾರ್ಥಿನಿ ಶೀತಲ್ ಕಾರ್ಯಕ್ರಮ ನಿರೂಪಿಸಿದರು. ಪಿನ್ಯಾಕಲ್ ಐಟಿ ಕ್ಲಬ್‌ನ ಕಾರ್ಯದರ್ಶಿ ತೀಕ್ಷಣ್, ತೃತೀಯ ಬಿಸಿಎ ವಿದ್ಯಾರ್ಥಿನಿ ಸೃಜನಾ ಹಾಗೂ ಪ್ರಥಮ ಬಿಸಿಎ ವಿದ್ಯಾರ್ಥಿನಿ ಪ್ರತ್ಯಕ್ಷಾ ಸಹಕಾರ ನೀಡಿದರು. ಕೆ-ಸೆಟ್ ಮತ್ತು ಎನ್ ಇ ಟಿ ಪರೀಕ್ಷೆಗಳಲ್ಲಿ ಅರ್ಹತೆಯನ್ನು ಪಡೆದ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ಫಾತಿಮತ್ ಸಾನಿದ ಹಾಗೂ ಸಮೀದರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಹಾಯಕ ಪ್ರಾಧ್ಯಾಪಕಿ ಡಾ| ಗೀತಾ ಪೂರ್ಣಿಮಾ ಕೆ ಸನ್ಮಾನ ಭಾಷಣ ಮಾಡಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್11 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು14 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized15 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ15 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ16 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ14 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್15 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















