ರಾಜಕೀಯ
Vitla-ಸರ್ಕಾರಿ ಆಸ್ಪತ್ರೆಗೆ ಸೇಡಿಯಾಪು ಸೂಕ್ತ ಸ್ಥಳ – ವಿಘ್ನ ಸಂತೋಷಿಗಳಿಂದ ವಿರೋಧ : ವಿಟ್ಲ ಬ್ಲಾಕ್ ಕಾಂಗ್ರೇಸ್
ಸೇಡಿಯಾಪಿನಲ್ಲಿ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ 180 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮೂಲಸೌಕರ್ಯಗಳ ದೃಷ್ಠಿಯಿಂದ ಸೇಡಿಯಾಪಿನ ಜಾಗ ಹೆಚ್ಚು ಸೂಕ್ತವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಅವಕಾಶಗಳಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ತಿಳಿಸಿದ್ದಾರೆ.
ವಿಟ್ಲ: ಸೇಡಿಯಾಪಿನಲ್ಲಿ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ 180 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮೂಲಸೌಕರ್ಯಗಳ ದೃಷ್ಠಿಯಿಂದ ಸೇಡಿಯಾಪಿನ ಜಾಗ ಹೆಚ್ಚು ಸೂಕ್ತವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಅವಕಾಶಗಳಾಗುತ್ತದೆ. 4 ಕಡೆಯಿಂದ ಸಂಪರ್ಕ ರಸ್ತೆಗಳಾಗಲಿದ್ದು, ಸಂಪರ್ಕ ವ್ಯವಸ್ಥೆಯೂ ಸುಲಭವಾಗಲಿದೆ. ಶಾಸಕರ ಅಭಿವೃಧಿ ಕಾರ್ಯಗಳನ್ನು ಸಹಿಸಲಾಗದ ವಿಘ್ನ ಸಂತೋಷಿಗಳು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.
ಈಗಾಗಲೇ ಇರುವ ಆಸ್ಪತ್ರೆಯ ಬಳಿಯಲ್ಲಿ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಅಸಾಧ್ಯ ಎಂಬುದನ್ನು ಹಿಂದಿನ ಶಾಸಕರ ಅವಧಿಯಲ್ಲೇ ಆರೋಗ್ಯ ಇಲಾಖೆ ವರದಿಯನ್ನು ನೀಡಿತ್ತು. ಮೆಡಿಕಲ್ ಕಾಲೇಜಿಗೆ ೪೦ ಎಕ್ರೆ ಮೀಸಲು ಇಡುವ ವ್ಯವಸ್ಥೆಯನ್ನು ಶಾಸಕಿಯಾಗಿದ್ದ ಶಕುಂತಳಾ ಟಿ ಶೆಟ್ಟಿ ಅವಧಿಯಲ್ಲಿ ಮಾಡಲಾಗಿದ್ದು, ಈಗ ಶಾಸಕರು ಅದಕ್ಕೆ ಬೇಕಾದ ಅನುದಾನಗಳನ್ನು ಅವಿರತ ಶ್ರಮದ ಮೂಲಕ ತರಿಸಿದ್ದಾರೆ. ಸೇಡಿಯಾಪಿನಲ್ಲಿ ಆಯುಷ್ ಆಯುರ್ವೇದ ಕಾಲೇಜು ಸ್ಥಾಪನೆಗೂ ಅಗತ್ಯ ವ್ಯವಸ್ಥೆಯನ್ನು ಶಾಸಕರು ಮಾಡಿದ್ದಾರೆ. ಈಗ ಕೈಯಲ್ಲಾಗದವರು ಮೈ ಎಲ್ಲಾ ಪರಚಿಕೊಂಡರೆಂಬಂತೆ ವರ್ತಿಸಿ, ಯೋಜನೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯ ಮುಖಂಡ ಎಂ. ಎಸ್. ಮಹಮ್ಮದ್ ಮಾತನಾಡಿ ಕಾಮಗಾರಿಗೆ ಪ್ರಸ್ತಾವನೆಗಳನ್ನು ಕಳುಹಿಸಿದರೆ, ಅದನ್ನು ಸಂಬಂಧಪಟ್ಟ ಅಧಿಕಾರಿಗಳ, ಇಲಾಖೆಯ ಮೂಲಕ ಅನುದಾನ ತರಿಸುವ ಕಾರ್ಯ ನಡೆಯಬೇಕು. ಅದನ್ನು ಶಾಸಕ ಅಶೋಕ್ ಕುಮಾರ್ ರೈ ಸರಿಯಾಗಿ ಮಾಡುತ್ತಿದ್ದಾರೆ. ಅಭಿವೃದ್ಧಿಯ ಮನಸ್ಸು ಇಲ್ಲದಿದ್ದರೆ ಬಾಯಿ ಮುಚ್ಚಿ ಕೂರುವ ಕೆಲಸವಾದರೂ ಮಾಡಬೇಕು ಎಂದರು.
ಪ್ರಮುಖರಾದ ರಮಾನಾಥ ವಿಟ್ಲ, ಪ್ರವೀಣ್ ಚಂದ್ರ ಆಳ್ವ, ಹಂಝ ವಿಟ್ಲ ಉಪಸ್ಥಿತರಿದ್ದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
ಕ್ರೈಂ16 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ15 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು14 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ14 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ9 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್15 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ10 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ14 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















