ಸ್ಥಳೀಯ
Kodishri-ಯುಗಾದಿಯ ಹೊಸ್ತಿಲಲ್ಲಿ ಕೋಡಿಶ್ರೀಗಳ ಹಳೇ ಭವಿಷ್ಯದ ವಿಶ್ಲೇಷಣೆ: ಅಂದು ಶ್ರೀಗಳು ನುಡಿದಿದ್ದೇನು?
ಚಾಂದ್ರಮಾನ ಯುಗಾದಿ ಹಬ್ಬಕ್ಕೆ (ಮಾರ್ಚ್ 19) ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವ ಬೆನ್ನಲ್ಲೇ, ಕಳೆದ ವರ್ಷ ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ಹಾಗೂ ವಿಶ್ಲೇಷಣೆಗಳು ಆರಂಭವಾಗಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಸಂಕ್ರಾಂತಿ ಮತ್ತು ಯುಗಾದಿಯ ಸಂದರ್ಭದಲ್ಲಿ ಭವಿಷ್ಯ ನುಡಿಯುವುದು ವಾಡಿಕೆ.
ಹಾಸನ: ಚಾಂದ್ರಮಾನ ಯುಗಾದಿ ಹಬ್ಬಕ್ಕೆ (ಮಾರ್ಚ್ 19) ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವ ಬೆನ್ನಲ್ಲೇ, ಕಳೆದ ವರ್ಷ ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯದ ಬಗ್ಗೆ ಭಾರೀ ಚರ್ಚೆ ಹಾಗೂ ವಿಶ್ಲೇಷಣೆಗಳು ಆರಂಭವಾಗಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಸಂಕ್ರಾಂತಿ ಮತ್ತು ಯುಗಾದಿಯ ಸಂದರ್ಭದಲ್ಲಿ ಭವಿಷ್ಯ ನುಡಿಯುವುದು ವಾಡಿಕೆ.
ಮಹಾಭಾರತದ ಉದಾಹರಣೆ ನೀಡಿದ್ದ ಶ್ರೀಗಳು:
ಕಳೆದ ಯುಗಾದಿಯ ಸಂದರ್ಭದಲ್ಲಿ ಶ್ರೀಗಳು ಮಹಾಭಾರತದ ಪ್ರಸಂಗಗಳನ್ನು ಉಲ್ಲೇಖಿಸಿ ದಾರುಣ ಭವಿಷ್ಯ ನುಡಿದಿದ್ದರು. “ಅಭಿಮನ್ಯುವಿನ ಬಿಲ್ಲನ್ನು ಕರ್ಣನ ಕೈಯಲ್ಲಿ ಮೋಸದಿಂದ ಕಿತ್ತುಕೊಂಡು ದಾರ ತುಂಡು ಮಾಡಿದಂತೆ, ಮನುಷ್ಯ ಮನುಷ್ಯನ ನಡುವೆ ನಂಬಿಕೆ-ವಿಶ್ವಾಸಗಳು ನಶಿಸಿಹೋಗಲಿವೆ. ಮಹಾಭಾರತದಲ್ಲಿ ಕೃಷ್ಣನಿದ್ದ ಕಾರಣ ಭೀಮ ಗೆದ್ದಿದ್ದ, ಆದರೆ ಈಗ ಕೃಷ್ಣನಿಲ್ಲದ ಕಾರಣ ದುರ್ಯೋಧನ ಗೆಲ್ಲುತ್ತಾನೆ” ಎಂದು ವಿಚಿತ್ರ ಭವಿಷ್ಯ ನುಡಿದಿದ್ದರು. ಇದು ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ರಾಜಕೀಯ ಭವಿಷ್ಯ:
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ಈ ಭವಿಷ್ಯದ ಪ್ರಭಾವ ಇರಲಿದೆ ಎಂದು ತಿಳಿಸಿದ್ದ ಶ್ರೀಗಳು, ರಾಜನಿಗೆ (ನಾಯಕರಿಗೆ) ಭಂಗ ಉಂಟಾಗಲಿದೆ ಎಂದು ಎಚ್ಚರಿಸಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರಾಗಿಯೇ ಸ್ಥಾನದಿಂದ ಕೆಳಗಿಳಿಯಬೇಕು ಎಂಬರ್ಥದ ಮಾತನ್ನೂ ಶ್ರೀಗಳು ಹೇಳಿದ್ದರು. ಆದರೆ, ಸರ್ಕಾರಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ:
ನಿಸರ್ಗದ ಮೇಲೆ ಮನುಷ್ಯನ ಹಸ್ತಕ್ಷೇಪದ ಬಗ್ಗೆ ಮಾತನಾಡಿದ್ದ ಶ್ರೀಗಳು, “ಭೂಮಿ ಬಿರುಕು ಬಿಡಲಿದೆ, ಗುಡ್ಡಗಳು ಕುಸಿಯಲಿವೆ ಹಾಗೂ ಜಗತ್ತಿನಾದ್ಯಂತ ಪ್ರವಾಹದ ಭೀತಿ ಎದುರಾಗಲಿದೆ” ಎಂದಿದ್ದರು. ಆಕಾಶ ತತ್ವದ ವ್ಯತ್ಯಯದಿಂದಾಗಿ ತೊಂದರೆಗಳು ಎದುರಾಗಲಿವೆ ಮತ್ತು ಜೋಶಿ ಮಠದಂತಹ ಪ್ರದೇಶಗಳು ಮುಳುಗಡೆಯಾಗಲಿವೆ ಎಂದು ಶ್ರೀಗಳು ಅಂದು ನುಡಿದಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















