ಬಿಗ್ ನ್ಯೂಸ್
Puttur-ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೆ ಕ್ಷಣಗಣನೆ; ಮಲ್ಲಿಗೆ-ಬಿಲ್ವಪತ್ರೆ ಭೂಸ್ಪರ್ಶದ ಶುಭ ಶಕುನದೊಂದಿಗೆ ರಥಬೀದಿಗೆ ಬಂದ ಬ್ರಹ್ಮರಥ..!
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಅಧಿಕೃತ ಚಾಲನೆ ನೀಡಲಾಯಿತು.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಅಧಿಕೃತ ಚಾಲನೆ ನೀಡಲಾಯಿತು.
ರಥ ಕಟ್ಟುವ ಸ್ಥಳದಲ್ಲಿ ಪ್ರತಿ ಬಾರಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಬಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ.
ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಇಂಜಿನಿಯರ್ ಪಿ.ಜಿ. ಜಗನ್ನಿವಾಸ್ ರಾವ್ ಮಾರ್ಗದರ್ಶನದಲ್ಲಿ ಆರಂಭದಲ್ಲಿ ದೇವಳದ ನೌಕರರು ರಥದ ಹಿಂಬದಿಯ ಚಕ್ರಕ್ಕೆ ದಂಡೆ ಇಟ್ಟು ಚಕ್ರಕ್ಕೆ ಚಾಲನೆ ನೀಡಿದರು. ಬ್ರಹ್ಮರಥವನ್ನು ಕ್ರೈನ್ ಸಹಾಯದಿಂದ ಹೊರಗೆಳೆಯುವ ಕೆಲಸ ನಿರ್ವಹಿಸಲಾಯಿತು. ದೇವಾಲಯದ ಕೆಲಸಗಾರರು ಸೇರಿ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸಿದರು. ರಥಬೀದಿಗೆ ರಥವನ್ನು ತಂದಾಗ ರಥದ ದಂಡೆಯಲ್ಲಿದ್ದ ಬಿಲ್ವಪತ್ರೆ, ತುಳಸಿ, ಬಿಳಿ ಪುಷ್ಪಗಳ ಪೈಕಿ ಬಿಲ್ವಪತ್ರೆ ಮತ್ತು ಮಲ್ಲಿಗೆಯ ಹಾರವೊಂದು ಭೂಸ್ಪರ್ಶ ಮಾಡಿದೆ. ಬಳಿಕ ಬ್ರಹ್ಮರಥವನ್ನು ಅದೇ ಸ್ಥಳದಲ್ಲಿ ನೇರವಾಗಿ ನಿಲ್ಲಿಸಲಾಯಿತು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕಚೇರಿ ಸಹಾಯಕ ಪದ್ಮನಾಭ, ಪಿ.ಜಿ.ಚಂದ್ರಶೇಖರ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್ ಎಂ, ವರುಣ್ ಪಂಜಿಗುಡ್ಡೆ, ಕೊಯಿಲ ಪಶುಸಂಗೋಪನಾ ನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್, ಜಯರಾಜ್ ಪಾದುಕ, ಸುಧೀರ್ ಕಲ್ಲಾರೆ, ಬಾಲಚಂದ್ರ ಸೊರಕೆ, ಗೋಪಾಲ್, ಗಣೇಶ್ ಸಹಿತ ದೇವಳದ ನೌಕರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಭಿವೃದ್ಧಿ ಕಾರ್ಯಗಳು:
ಮಹಾಲಿಂಗೇಶ್ವರ ದೇವರ ಜಾತ್ರೆಯು ವರ್ಷಂಪ್ರತಿಯಂತೆ ಸಡಗರ ಸಂಭ್ರಮದಿಂದ ನಡೆಯಲಿದೆ. ಏ.1ಕ್ಕೆ ಗೊನೆ ಮುಹೂರ್ತ ನಡೆಯಲಿದೆ. ಏ.10ರಿಂದ ಏ.20ರ ತನಕ ಜಾತ್ರೋತ್ಸವ ನಡೆಯಲಿದೆ. ಜಾತ್ರೆಯ ಪೂರ್ವ ಸಿದ್ಧತೆಯಾಗಿ ಎಲ್ಲಾ ಭಕ್ತರ ಸಹಕಾರದಿಂದ ಬ್ರಹ್ಮರಥವನ್ನು ರಥಬೀದಿಗೆ ತಂದು ಇರಿಸಲಾಗಿದೆ. ಇನ್ನು ರಥ ಕಟ್ಟುವ ಕೆಲಸ ಆರಂಭಗೊಳ್ಳಲಿದೆ. ಅದೇ ದೇವಳದ ರಾಜಾಂಗಣದಲ್ಲಿ ಪುನರ್ನಿರ್ಮಾಣಗೊಳ್ಳಲಿರುವ 5 ಕಟ್ಟೆಗಳ ಕೆಲಸವೂ ನಡೆಯುತ್ತಿದೆ. ಏ.1ರೊಳಗೆ ಪೂರ್ಣಗೊಳ್ಳಲಿದೆ. ಅಶ್ವತ್ಥಕಟ್ಟೆಯ ಕೆಲಸವೂ ಪೂರ್ಣಗೊಳ್ಳಲಿದೆ. ದೇವಳದ ಎದುರುಗದ್ದೆಯಲ್ಲಿ ಸ್ವಚ್ಛತಾ ಕೆಲಸ ನಡೆದಿದೆ. ಈ ಹಿಂದಿಗಿಂತಲೂ ದೇವಳದ ಎದುರು ಮೈದಾನ ಇನ್ನಷ್ಟು ವಿಶಾಲವಾಗಿದೆ. 40 ಸೆಂಟ್ಸ್ ಜಾಗ ಖರೀದಿ ಮಾಡಿದ್ದೇವೆ. ಕಂಬಳದ ಕರೆ, ಕಂಬಳದ ಸ್ಟೇಜ್ ತೆರವು ಮಾಡಲಾಗುತ್ತಿದೆ. ಹಳೆಯ ಗೋಶಾಲೆ ಹೋಗಿ ವಿಸ್ತಾರವಾಗಿ ಮೈದಾನ ನಿರ್ಮಾಣ ಆಗಿದೆ.. ಮುಂದಿನ ದಿನ ಪುತ್ತೂರು ಜಾತ್ರೆ ವೈಭವದಿಂದ ನಡೆಯುವ ಮೂಲಕ ಎಲ್ಲರಿಗೂ ದೇವರು ಆಶೀರ್ವಾದ ಮಾಡಲಿ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ಅಂತರ ರಾಜ್ಯ23 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು17 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized23 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು17 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು16 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ನಿಧನ ವಾರ್ತೆ23 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು23 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
-
Uncategorized17 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ


















