Connect with us

ರಾಜಕೀಯ

U.T. Khader-ಲಿಖಿತ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು; ಆಕ್ರೋಶಗೊಂಡು ಸದನದಿಂದ ಹೊರನಡೆದ ಸಭಾಧ್ಯಕ್ಷ ಯು.ಟಿ. ಖಾದರ್

Published

on



Ad Widget

Ad Widget

Ad Widget

Ad Widget

ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳು ತೋರುತ್ತಿರುವ ವಿಳಂಬ ಧೋರಣೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯಿಂದ ಅಸಮಾಧಾನಗೊಂಡ ಅವರು, ಕಲಾಪ ನಡೆಸದೆ ಪೀಠದಿಂದ ಎದ್ದು ಹೊರಹೋದ ಅಪರೂಪದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳು ತೋರುತ್ತಿರುವ ವಿಳಂಬ ಧೋರಣೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯಿಂದ ಅಸಮಾಧಾನಗೊಂಡ ಅವರು, ಕಲಾಪ ನಡೆಸದೆ ಪೀಠದಿಂದ ಎದ್ದು ಹೊರಹೋದ ಅಪರೂಪದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಪ್ರಶ್ನೆಗಳಿಗೆ ಸಿಗದ ಉತ್ತರ:
ಸದನದಲ್ಲಿ ಈ ಬಗ್ಗೆ ಸಚಿವರ ವಿರುದ್ಧ ಗರಂ ಆದ ಯು.ಟಿ. ಖಾದರ್, “ಒಟ್ಟು 230 ಲಿಖಿತ ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಸಚಿವರಿಂದ ಉತ್ತರ ಬಂದಿದೆ. ಶಾಸಕರು ಕೇಳುವ ಪ್ರಶ್ನೆಗಳಿಗೆ ಶೀಘ್ರವಾಗಿ ಉತ್ತರ ನೀಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಸೂಚನೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಅಸಮಾಧಾನ ಹೊರಹಾಕಿದರು.

Ad Widget

Ad Widget <> Ad Widget

ಸದನ ಇರುವುದು ಮಂತ್ರಿಗಳಿಗಾಗಿ ಅಲ್ಲ:
ಸಚಿವರ ಕಾರ್ಯವೈಖರಿಯನ್ನು ಪ್ರಶ್ನಿಸಿದ ಸಭಾಧ್ಯಕ್ಷರು, “ಸದನ ನಡೆಸುವುದು ಕೇವಲ ಮಂತ್ರಿಗಳಿಗಾಗಿ ಅಲ್ಲ, ಅದು ಶಾಸಕರ ಸಮಸ್ಯೆಗಳ ಚರ್ಚೆಗಾಗಿ. ಎಲ್ಲ ಪಕ್ಷಗಳ ಶಾಸಕರೂ ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳುತ್ತಾರೆ. ನಿಯಮಾವಳಿಯಂತೆ ಸರ್ಕಾರ ಉತ್ತರ ನೀಡದಿದ್ದರೆ ಶಾಸಕರು ಸದನಕ್ಕೆ ಯಾಕೆ ಬರಬೇಕು?” ಎಂದು ಖಾರವಾಗಿ ಪ್ರಶ್ನಿಸಿದರು.



Ad Widget

ಐದನೇ ಬಾರಿಯೂ ಸುಧಾರಿಸದ ಸರ್ಕಾರ:
ಸಚಿವರ ವಿಳಂಬ ಹಾಗೂ ಸದನಕ್ಕೆ ತಡವಾಗಿ ಬರುವ ಪ್ರವೃತ್ತಿಯನ್ನು ಟೀಕಿಸಿದ ಖಾದರ್, “ಮಂತ್ರಿಗಳು ಸರಿಯಾದ ಸಮಯಕ್ಕೆ ಸದನಕ್ಕೆ ಬರುತ್ತಿಲ್ಲ. ಈಗಾಗಲೇ ನಾಲ್ಕು ಬಾರಿ ಸೂಚನೆ ನೀಡಿದ್ದರೂ ಐದನೇ ಬಾರಿಯೂ ಯಾವುದೇ ಸುಧಾರಣೆ ಕಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸದನ ನಡೆಸುವುದು ಹೇಗೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

Ad Widget

Ad Widget

ಅಂತಿಮವಾಗಿ, “ಸಂಬಂಧಪಟ್ಟ ಸಚಿವರು ಬಂದು ಈ ಬಗ್ಗೆ ಸ್ಪಷ್ಟನೆ ನೀಡುವವರೆಗೂ ನಾನು ಸದನ ನಡೆಸುವುದಿಲ್ಲ” ಎಂದು ಖಡಕ್ ಆಗಿ ಹೇಳಿದ ಸಭಾಧ್ಯಕ್ಷರು, ಪೀಠದಿಂದ ಎದ್ದು ಹೊರನಡೆದರು. ಈ ಘಟನೆಯು ವಿಧಾನಸಭೆಯಲ್ಲಿ ಕೆಲಕಾಲ ಗೊಂದಲ ಮತ್ತು ಬಿಗುವಿನ ವಾತಾವರಣ ನಿರ್ಮಿಸಿತು.

Ad Widget
Click to comment

Leave a Reply

ರಾಜಕೀಯ

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

Published

on



Ad Widget

Ad Widget

Ad Widget

Ad Widget

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.



Ad Widget

ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.

Ad Widget

Ad Widget

ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.

ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಸೌಕತ್‌ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.



Ad Widget

ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

Ad Widget

Ad Widget

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.

ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.

Ad Widget
Continue Reading

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading