ಸ್ಥಳೀಯ
Ujire-ಉಜಿರೆ: ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ಹೋದ ಬಾಲಕನಿಗೆ ಹಲ್ಲೆ; ವಿಡಿಯೋ ಮಾಡಿ ಬೆದರಿಕೆ ಹಾಕಿದವರ ವಿರುದ್ಧ ಎಫ್ಐಆರ್ ದಾಖಲು
ಬೆಳ್ತಂಗಡಿ ತಾಲೂಕಿನ ಖಾಸಗಿ ಶಾಲೆಯ ಅಪ್ರಾಪ್ತ ಬಾಲಕನ ಮೇಲೆ ‘ನೈತಿಕ ಪೊಲೀಸ್ಗಿರಿ’ ಹೆಸರಿನಲ್ಲಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ತಾಲೂಕಿನ ಖಾಸಗಿ ಶಾಲೆಯ ಅಪ್ರಾಪ್ತ ಬಾಲಕನ ಮೇಲೆ ‘ನೈತಿಕ ಪೊಲೀಸ್ಗಿರಿ’ ಹೆಸರಿನಲ್ಲಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
17 ವರ್ಷದ ಬಾಲಕನು ಮಾರ್ಚ್ 11ರಂದು ಸಂಜೆ ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ತೆರಳಿದ್ದನು. ಈ ವೇಳೆ ಅಲ್ಲಿಗೆ ಬಂದ ಕೆಲವರು, ತಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದನ್ನು ಆಕ್ಷೇಪಿಸಿ ಗಲಾಟೆ ಆರಂಭಿಸಿದ್ದಾರೆ. ಜಾತ್ರಾ ಸ್ಥಳದಲ್ಲೇ ಬಾಲಕನಿಗೆ ನಿಂದಿಸಿ ಹಲ್ಲೆ ನಡೆಸಿದ ಕಿಡಿಗೇಡಿಗಳು, ಅಷ್ಟಕ್ಕೇ ನಿಲ್ಲಿಸದೆ ಆತನನ್ನು ಬೈಕಿನಲ್ಲಿ ದೂರದ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.
ಅಲ್ಲಿಯೂ ಬಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು, “ಜಾತ್ರಾ ಸ್ಥಳದಲ್ಲಿ ನಾನೇ ತಪ್ಪು ಮಾಡಿದ್ದೇನೆ” ಎಂದು ಆತನಿಂದ ಬಲವಂತವಾಗಿ ವಿಡಿಯೋ ಹೇಳಿಕೆಯನ್ನು ಚಿತ್ರೀಕರಿಸಿಕೊಂಡಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ಬೆದರಿದ್ದ ಬಾಲಕ ಕಳೆದ ಕೆಲವು ದಿನಗಳಿಂದ ಭಯಭೀತನಾಗಿ ಮನೆಯಲ್ಲಿದ್ದನು.
ಪೊಲೀಸ್ ದೂರು:
ಮಗನ ಭಯಕ್ಕೆ ಕಾರಣ ತಿಳಿದ ತಂದೆ, ಮಾರ್ಚ್ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಘಟನೆ ನಡೆದು ಒಂದು ವಾರದ ಬಳಿಕ ದೂರು ದಾಖಲಾಗಿದ್ದು, ಪೊಲೀಸರು ಅಪರಾಧ ಸಂಖ್ಯೆ 30/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS 2023) ವಿವಿಧ ಕಲಂಗಳಾದ 137(2), 115(2), 351(2), 352, 353(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್15 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ20 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು23 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized22 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್23 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ21 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















