ಅಂತರ ರಾಜ್ಯ
Kerala-ಕೇರಳ ಹೈವೋಲ್ಟೇಜ್ ಕದನ: ಕಾಂಗ್ರೆಸ್ ಪಟ್ಟಿಯಲ್ಲಿ ವಿ.ಡಿ. ಸತೀಶನ್, ಕೆ. ಮುರಳೀಧರನ್ ಹೆಸರು; ಕಣ್ಣೂರಿನಲ್ಲಿ ಅಸಮಾಧಾನದ ಕಿಡಿ
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಗುರುವಾರ 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೊದಲೇ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದ ಕಾಂಗ್ರೆಸ್, ಈಗ ಎರಡನೇ ಪಟ್ಟಿಯ ಮೂಲಕ ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ.
ತಿರುವನಂತಪುರಂ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಸಿದ್ಧತೆಯನ್ನು ಚುರುಕುಗೊಳಿಸಿದ್ದು, ಗುರುವಾರ 37 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೊದಲೇ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದ ಕಾಂಗ್ರೆಸ್, ಈಗ ಎರಡನೇ ಪಟ್ಟಿಯ ಮೂಲಕ ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ.
ಪ್ರಮುಖ ಅಭ್ಯರ್ಥಿಗಳು ಮತ್ತು ಕ್ಷೇತ್ರಗಳು:
ಈ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಸ್ಥಾನ ನೀಡಲಾಗಿದೆ. ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಪರವೂರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಕರುಣಾಕರನ್ ಅವರ ಪುತ್ರ ಕೆ. ಮುರಳೀಧರನ್ ವಟ್ಟಿಯೂರ್ಕಾವು ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಪೆರಾವೂರ್ ಕ್ಷೇತ್ರದಿಂದ ಸನ್ನಿ ಜೋಸೆಫ್ ಅವರಿಗೆ ಟಿಕೆಟ್ ನೀಡಲಾಗಿದೆ.
ಇತರ ಪ್ರಮುಖರು:
ತ್ರಿಕರಿಪುರ: ಸಂದೀಪ್ ವಾರಿಯರ್
ಕಾಯಂಕುಲಂ: ಎಂ. ಲಿಜು
ಅರನ್ಮುಲಾ: ಅಬಿನ್ ವರ್ಕಿ
ಉಡುಂಬಂಚೋಳ: ಸೇನಾಪತಿ ವೇಣು
ಅಡೂರ್ (ಎಸ್ಸಿ): ಶಾಂತಕುಮಾರ್
ಕಣ್ಣೂರಿನಲ್ಲಿ ಅಸಮಾಧಾನದ ಹೊಗೆ:
ಕಣ್ಣೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿರುವುದು ಪಕ್ಷದೊಳಗೆ ಸಣ್ಣಮಟ್ಟಿನ ಬಿರುಗಾಳಿ ಎಬ್ಬಿಸಿದೆ. ಈ ನಿರ್ಧಾರದಿಂದಾಗಿ ಹಾಲಿ ಸಂಸದ ಕೆ. ಸುಧಾಕರನ್ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದ್ದು, ಇದು ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ.
ಅಂತರ ರಾಜ್ಯ
Chennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ತಿರುಪತಿ: ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ಚೆನ್ನೈನ ವರ್ಧಮಾನ್ ಜೈನ್ ಮತ್ತು ರಾಧಿಕಾ ಜೈನ್ ದಂಪತಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅರ್ಚಕರು ಹಾಗೂ ಪ್ರತಿನಿಧಿಗಳಿಗೆ ಈ ಅಮೂಲ್ಯ ಆಭರಣಗಳನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು. ವಜ್ರಖಚಿತ ಚಿನ್ನಾಭರಣಗಳನ್ನು ಒಳಗೊಂಡ ಈ ಕಾಣಿಕೆ ದೇವಾಲಯದ ಇತಿಹಾಸದಲ್ಲಿನ ಗಮನಾರ್ಹ ದಾನಗಳಲ್ಲಿ ಒಂದಾಗಿದೆ.
ಸಮಾರಂಭದಲ್ಲಿ ದಂಪತಿಯ ಭಕ್ತಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, 206 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಶ್ರೀ ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿರುವುದು ಅಪರೂಪದ ಹಾಗೂ ಅಸಾಧಾರಣ ಭಕ್ತಿಯ ಪ್ರತೀಕವಾಗಿದೆ. ದೇವರ ಮೇಲಿನ ಅಪಾರ ಭಕ್ತಿ ಮತ್ತು ದೈವಿಕ ಪ್ರೇರಣೆಯಿಂದ ಈ ದಂಪತಿ ಇಂತಹ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ತಮ್ಮ ಸೌಭಾಗ್ಯ ಎಂದು ಹೇಳಿದರು.
ತಿರುಮಲವು ನಂಬಿಕೆ, ಭಕ್ತಿ ಹಾಗೂ ಆಧ್ಯಾತ್ಮಿಕ ಸಂತೃಪ್ತಿಯ ಸಂಕೇತವಾಗಿದ್ದು, ಶ್ರೀ ಕೃಷ್ಣದೇವರಾಯರ ಕಾಲದಿಂದ ಇಂದಿನವರೆಗೂ ಭಕ್ತರ ಕಾಣಿಕೆ ಮತ್ತು ಭಕ್ತಿಪರಂಪರೆ ನಿರಂತರವಾಗಿ ಮುಂದುವರಿದಿದೆ ಎಂದು ನಾಯ್ಡು ಹೇಳಿದರು. ಪಲ್ಲವರು, ಚೋಳರು, ಚೇರರು, ಪಾಂಡ್ಯರು ಹಾಗೂ ಮೈಸೂರು ಮತ್ತು ಮರಾಠಾ ಅರಸರು ಹಿಂದಿನ ಕಾಲದಲ್ಲಿ ದೇವಾಲಯಕ್ಕೆ ಬೆಲೆಬಾಳುವ ಆಭರಣಗಳು ಮತ್ತು ಕಾಣಿಕೆಗಳನ್ನು ಅರ್ಪಿಸಿ ಶ್ರೀಮಂತಗೊಳಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಅಲಿಪಿರಿ ಬಾಂಬ್ ದಾಳಿಯಿಂದ ತಾವು ಪಾರಾದ ಘಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವೇ ತಮಗೆ ಮರುಜನ್ಮ ನೀಡಿತು ಎಂದು ಭಾವುಕರಾಗಿ ನುಡಿದರು.
ದೇವಾಲಯದ ಪಾವಿತ್ರ್ಯ ಕಾಪಾಡುವುದರ ಜೊತೆಗೆ ಗೋರಕ್ಷಣೆ, ವೈದಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಟಿಟಿಡಿಗೆ ಸೂಚಿಸಿದ ನಾಯ್ಡು, ‘ವೃಕೋ ಗೋವಿಂದಂ’ ಉಪಕ್ರಮಕ್ಕೆ ಉತ್ತೇಜನ ನೀಡುವುದಾಗಿ ತಿಳಿಸಿದರು. ಅಲ್ಲದೆ, ದೇವಾಲಯದ ಮೂಲಸೌಕರ್ಯ ವಿಸ್ತರಣೆ ಹಾಗೂ ಟಿಟಿಡಿ ಸಹಯೋಗದೊಂದಿಗೆ ಆಂಧ್ರಪ್ರದೇಶದಾದ್ಯಂತ 5,000 ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನೂ ಪ್ರಕಟಿಸಿದರು.
‘ಮಾನವ ಸೇವೆಯೇ ಮಾಧವ ಸೇವೆ’ ಎಂಬ ತತ್ವದಡಿ ಅನ್ನದಾನ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉಪಕ್ರಮಗಳನ್ನು ಸರ್ಕಾರ ಮತ್ತಷ್ಟು ಬಲಪಡಿಸಲಿದೆ. ಶ್ರೀಮಂತರು ತಮ್ಮ ಸಂಪತ್ತನ್ನು ಸಮಾಜ ಕಲ್ಯಾಣ, ಆಧ್ಯಾತ್ಮಿಕ ಕಾರ್ಯಗಳು ಹಾಗೂ ಬಡವರ ಸೇವೆಗೆ ಬಳಸುವಂತೆ ಜೈನ ದಂಪತಿಯ ದಾನವನ್ನು ಮಾದರಿಯಾಗಿ ಉಲ್ಲೇಖಿಸಿ ಮುಖ್ಯಮಂತ್ರಿ ಕರೆ ನೀಡಿದರು.
ಅಂತರ ರಾಜ್ಯ
CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್–ಎಸ್ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್ಪಿ ವಿರುದ್ಧ ಕಿಡಿಕಾರಿದ್ದಾರೆ.
ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
-
ನಿಧನ ವಾರ್ತೆ16 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್10 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ15 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ15 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ15 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್10 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ15 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ13 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















