Connect with us

ಬಿಗ್ ನ್ಯೂಸ್

Puttur-ಪುತ್ತೂರು: ಐತಿಹಾಸಿಕ ಕೋಟಿ-ಚೆನ್ನಯ ಕಂಬಳದ ಕರೆ ಹಾಗೂ ಬೃಹತ್ ವೇದಿಕೆ ಕುರುಹೇ ಸಿಗದಂತೆ ಸಮತಟ್ಟು..! ಜಾತ್ರೆಯ ಬಳಿಕ ಹೊಸ ಜಾಗದಲ್ಲಿ ಮರುನಿರ್ಮಾಣ..!

Published

on



Ad Widget

Ad Widget

Ad Widget

Ad Widget

ಕರಾವಳಿಯ ಜಾನಪದ ಕ್ರೀಡೆಗೆ ಸಾಕ್ಷಿಯಾಗಿದ್ದ, ಐತಿಹಾಸಿಕ ಹಿನ್ನೆಲೆಯುಳ್ಳ ಪುತ್ತೂರಿನ ‘ಕೋಟಿ ಚೆನ್ನಯ ಜೋಡುಕರೆ ಕಂಬಳ’ ದ ಕರೆ ಇದೀಗ ಕಣ್ಮರೆಯಾಗಿದೆ. ಕೆಲವೇ ದಿನಗಳ ಹಿಂದೆ ಇಲ್ಲೊಂದು ಕಂಬಳದ ಕರೆ ಇತ್ತು ಎಂಬುದಕ್ಕೆ ಯಾವುದೇ ಸಣ್ಣ ಕುರುಹು ಕೂಡ ಉಳಿಯದಂತೆ ಈ ಕರೆಯನ್ನು ಸಂಪೂರ್ಣವಾಗಿ ಮಣ್ಣು ಹಾಕಿ ಮುಚ್ಚಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಕರಾವಳಿಯ ಜಾನಪದ ಕ್ರೀಡೆಗೆ ಸಾಕ್ಷಿಯಾಗಿದ್ದ, ಐತಿಹಾಸಿಕ ಹಿನ್ನೆಲೆಯುಳ್ಳ ಪುತ್ತೂರಿನ ‘ಕೋಟಿ ಚೆನ್ನಯ ಜೋಡುಕರೆ ಕಂಬಳ’ ದ ಕರೆ ಇದೀಗ ಕಣ್ಮರೆಯಾಗಿದೆ. ಕೆಲವೇ ದಿನಗಳ ಹಿಂದೆ ಇಲ್ಲೊಂದು ಕಂಬಳದ ಕರೆ ಇತ್ತು ಎಂಬುದಕ್ಕೆ ಯಾವುದೇ ಸಣ್ಣ ಕುರುಹು ಕೂಡ ಉಳಿಯದಂತೆ ಈ ಕರೆಯನ್ನು ಸಂಪೂರ್ಣವಾಗಿ ಮಣ್ಣು ಹಾಕಿ ಮುಚ್ಚಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಆರಾಧ್ಯ ದೈವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ರೂಪಿಸಲಾಗಿರುವ ‘ಮಾಸ್ಟರ್ ಪ್ಲಾನ್’ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ. ರಥಬೀದಿಯ ಅಂಚಿನಲ್ಲಿದ್ದ ಹಳೆಯ ಕಂಬಳದ ಕರೆಯನ್ನು ಮುಚ್ಚಿ, ಪ್ರಸ್ತುತ ಇರುವ ಸ್ಥಳದಿಂದ ಸುಮಾರು 30 ಅಡಿ ದೂರದಲ್ಲಿ ಹೊಸದಾಗಿ ಜೋಡುಕರೆ ನಿರ್ಮಿಸುವ ಉದ್ದೇಶವನ್ನು ಆಡಳಿತ ಮಂಡಳಿ ಹೊಂದಿದೆ.

Ad Widget

Ad Widget <> Ad Widget

ಕುರುಹೇ ಉಳಿಯದಂತೆ ಕಾರ್ಯಾಚರಣೆ:
ನಗರದ ನಾನಾ ಭಾಗಗಳಿಂದ ಲೋಡ್‌ಗಟ್ಟಲೆ ಮಣ್ಣನ್ನು ತಂದು, ಸತತ ಒಂದೂವರೆ ತಿಂಗಳ ಕಾರ್ಯಾಚರಣೆ ನಡೆಸಿ ಕರೆಯನ್ನು ಮುಚ್ಚಲಾಗಿದೆ. ಕಂಬಳದ ಕರೆ ಮಾತ್ರವಲ್ಲದೆ, ಕಂಬಳದ ವೀಕ್ಷಣೆಗಾಗಿ ಎರಡು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಪೂರ್ವ-ಮುಖಿ ಸಾಂಸ್ಕೃತಿಕ ವೇದಿಕೆಯನ್ನೂ ನೆಲಸಮ ಮಾಡಲಾಗುತ್ತಿದೆ. ನೂರಕ್ಕೂ ಹೆಚ್ಚು ಅತಿಥಿಗಳು ಕೂರಬಹುದಾಗಿದ್ದ ಈ ಬೃಹತ್ ಮಣ್ಣಿನ ವೇದಿಕೆ ಕಂಬಳದ ಆಕರ್ಷಣೆಯ ಕೇಂದ್ರವಾಗಿತ್ತು.



Ad Widget

ಏಪ್ರಿಲ್‌ನಲ್ಲಿ ಜಾತ್ರೆ, ಆ ಬಳಿಕ ಹೊಸ ಕರೆ ನಿರ್ಮಾಣ:
ಏಪ್ರಿಲ್ 10 ರಿಂದ 20 ರವರೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ನಡೆಯಲಿದೆ. ಕಂಬಳದ ಕರೆ ಹಾಗೂ ವೇದಿಕೆ ತೆರವುಗೊಳಿಸಿ ಜಾಗವನ್ನು ಸಮತಟ್ಟು ಮಾಡಿದ್ದರಿಂದ, ಈ ಬಾರಿಯ ಜಾತ್ರೋತ್ಸವಕ್ಕೆ ಮುಕ್ತ ಹಾಗೂ ವಿಶಾಲವಾದ ಸ್ಥಳಾವಕಾಶ ಸಿಕ್ಕಂತಾಗಿದೆ.

Ad Widget

Ad Widget

“ಜಾತ್ರೋತ್ಸವ ಮುಗಿದ ಕೂಡಲೇ ನೂತನ ಕಂಬಳ ಕರೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತಿಳಿಸಿದ್ದಾರೆ.

ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಕಾಮಗಾರಿಗಳ ಭಾಗವಾಗಿ, ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯ ಕಂಬಳ ಸಮಿತಿಯು ದಾನಿಗಳ ನೆರವಿನೊಂದಿಗೆ ನೂತನ ಕರೆಯನ್ನು ನಿರ್ಮಿಸಲಿದೆ.

ಕಂಬಳದ ಹಿನ್ನೆಲೆ:
ಹಿಂದೆ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದ ಪುತ್ತೂರು ಕಂಬಳ ಕಾಲಕ್ರಮೇಣ ನಿಂತುಹೋಗಿತ್ತು. ಬಳಿಕ 1992ರಲ್ಲಿ ಅಂದಿನ ಶಾಸಕ ವಿನಯ ಕುಮಾರ್ ಸೊರಕೆ ಹಾಗೂ ಯುವ ಉದ್ಯಮಿ ದಿ. ಜಯಂತ ರೈ ಅವರ ನೇತೃತ್ವದಲ್ಲಿ ‘ಕೋಟಿ ಚೆನ್ನಯ ಜೋಡುಕರೆ’ ಕಂಬಳ ಮರುಜೀವ ಪಡೆದುಕೊಂಡಿತು. ಆರಂಭದಲ್ಲಿ ಉತ್ತರ-ದಕ್ಷಿಣಾಭಿಮುಖವಾಗಿದ್ದ ಈ ಕರೆಯನ್ನು, ರಥಬೀದಿಗೆ ಅಡ್ಡವಾಗುತ್ತದೆ ಎಂಬ ಕಾರಣಕ್ಕಾಗಿ ಪೂರ್ವ-ಪಶ್ಚಿಮವಾಗಿ ಬದಲಾಯಿಸಲಾಗಿತ್ತು. ಜಯಂತ ರೈ ಅವರ ನಿಧನದ ಬಳಿಕ ವಿನಯ ಕುಮಾರ್ ಸೊರಕೆ ಅವರ ಗೌರವಾಧ್ಯಕ್ಷತೆಯಲ್ಲಿ ಕಂಬಳ ಸಮಿತಿಯು ಪ್ರತಿವರ್ಷ ಯಶಸ್ವಿಯಾಗಿ ಕಂಬಳವನ್ನು ಆಯೋಜಿಸಿಕೊಂಡು ಬರುತ್ತಿದೆ.

Ad Widget
Click to comment

Leave a Reply

ಅಂತರ ರಾಜ್ಯ

L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

Published

on



Ad Widget

Ad Widget

Ad Widget

Ad Widget

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿಲ್ಲಿಯ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.



Ad Widget

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

Continue Reading

ಮಂಗಳೂರು

MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ

Published

on



Ad Widget

Ad Widget

Ad Widget

Ad Widget

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್‌ಪಿಎಲ್‌ನ ಫೇಸ್-3ರ ಸಿಎಚ್‌ಟಿಯು (Coker Hydro Treating Unit) ಪ್ಲಾಂಟ್‌ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.

Ad Widget

Ad Widget <> Ad Widget

ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.



Ad Widget

ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Continue Reading

ಸ್ಥಳೀಯ

Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ

Published

on



Ad Widget

Ad Widget

Ad Widget

Ad Widget

ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.

Ad Widget

Ad Widget <> Ad Widget

ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.



Ad Widget

ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading