ಆರೋಗ್ಯ
Puttur City Hospital-ಮಾ. 22ರಂದು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಸಕ್ಕರೆ ಕಾಯಿಲೆ ತಡೆಗಟ್ಟುವಿಕೆ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮ
ಸಕ್ಕರೆ ಕಾಯಿಲೆ (ಮಧುಮೇಹ) ತಡೆಗಟ್ಟುವಿಕೆ ಹಾಗೂ ಸಮಗ್ರ ಆರೋಗ್ಯ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ‘ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಮಾರ್ಚ್ 22ರಂದು ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಕ್ಕರೆ ಕಾಯಿಲೆ (ಮಧುಮೇಹ) ತಡೆಗಟ್ಟುವಿಕೆ ಹಾಗೂ ಸಮಗ್ರ ಆರೋಗ್ಯ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ‘ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್’ ವತಿಯಿಂದ ಮಾರ್ಚ್ 22ರಂದು ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಜಾಗೃತಿ ಕಾರ್ಯಕ್ರಮವು ಪುತ್ತೂರು ಸಿಟಿ ಆಸ್ಪತ್ರೆಯ ಸಭಾಂಗಣದಲ್ಲಿ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 12:45ರ ವರೆಗೆ ನಡೆಯಲಿದೆ.
ಕಾರ್ಯಕ್ರಮದ ಪ್ರಮುಖಾಂಶಗಳು:
ಶಿಬಿರದಲ್ಲಿ ಸಕ್ಕರೆ ಕಾಯಿಲೆಯ ಆರಂಭಿಕ ಲಕ್ಷಣಗಳು, ಕಾಯಿಲೆ ಬರಲು ಪ್ರಮುಖ ಕಾರಣಗಳು, ಅದರ ನಿರ್ವಹಣೆ ಹಾಗೂ ಆಧುನಿಕ ಚಿಕಿತ್ಸಾ ವಿಧಾನಗಳ ಬಗ್ಗೆ ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ, ದೈನಂದಿನ ಜೀವನದಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಸೂಕ್ತ ಜೀವನಶೈಲಿಯ ಮೂಲಕ ಮಧುಮೇಹವನ್ನು ಹೇಗೆ ತಡೆಗಟ್ಟಬಹುದು ಎಂಬ ಕುರಿತು ಉಪಯುಕ್ತ ಮಾರ್ಗದರ್ಶನ ಸಿಗಲಿದೆ.
ಸಾರ್ವಜನಿಕರು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಆರೋಗ್ಯ ಮಾಹಿತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್ ತನ್ನ ಪ್ರಕಟಣೆಯಲ್ಲಿ ವಿನಂತಿಸಿದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ನಿಧನ ವಾರ್ತೆ15 hours agoPuttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
-
ಸ್ಥಳೀಯ15 hours agoKumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
-
ಅಪರಾಧ15 hours agoHigh Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
-
ಮೈಸೂರು9 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಮಂಗಳೂರು9 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ8 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಅಪರಾಧ9 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಪರಾಧ7 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು


















