ಸಿನೆಮಾ
Rishab Shetty-ಹೊಂಬಾಳೆ ತೊರೆದು ‘ಕಾಂತಾರ-2’ ನಿರ್ಮಾಣದ ಸುಳಿವು ನೀಡಿದ ರಿಷಬ್ ಶೆಟ್ಟಿ..! ಹೊಂಬಾಳೆ ಅನ್ ಫಾಲೋ ಮಾಡಿದ ಡಿವೈನ್ ಸ್ಟಾರ್
ನಟ, ನಿರ್ದೇಶಕ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಯುಗಾದಿ ಹಬ್ಬದಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್‌ವೊಂದು ಸ್ಯಾಂಡಲ್‌ವುಡ್ ಅಂಗಳದಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಜೊತೆಗೆ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.
ನಟ, ನಿರ್ದೇಶಕ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಯುಗಾದಿ ಹಬ್ಬದಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್‌ವೊಂದು ಸ್ಯಾಂಡಲ್‌ವುಡ್ ಅಂಗಳದಲ್ಲಿ ಭಾರಿ ಕುತೂಹಲ ಕೆರಳಿಸಿದೆ. ಜೊತೆಗೆ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.
ತಮ್ಮ ಪೋಸ್ಟ್‌ನಲ್ಲಿ ಬಿಳಿ ಬೋರ್ಡ್ ಒಂದರ ಮೇಲೆ “ಅಧ್ಯಾಯ ಎರಡು, ಇಲ್ಲಿಂದ ಶುರು” ಎಂದು ಬರೆದಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಇದು ‘ರಿಷಬ್ ಶೆಟ್ಟಿ ಫಿಲಂಸ್’ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಚಿತ್ರ ಎಂಬ ಸುಳಿವನ್ನು ಅದರಲ್ಲಿ ನೀಡಲಾಗಿದೆ. ಈ ಪೋಸ್ಟ್ ನೋಡಿದ ಅಭಿಮಾನಿಗಳಲ್ಲಿ ಇದು ‘ಕಾಂತಾರ-2’ಗಾಗಿ ಬರೆಯುತ್ತಿರುವ ಕಥೆಯೋ ಅಥವಾ ರಿಷಬ್ ಅವರ ಮುಂದಿನ ಹೊಸ ಸಿನಿಮಾವೋ ಎಂಬ ಲೆಕ್ಕಾಚಾರ ಶುರುವಾಗಿದೆ.
ಹೊಂಬಾಳೆ ಫಿಲಂಸ್ ಅನ್‌ಫಾಲೋ!
ಈ ಹೊಸ ಪೋಸ್ಟ್‌ನ ನಡುವೆಯೇ, ರಿಷಬ್ ಶೆಟ್ಟಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ‘ಕಾಂತಾರ’ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲಂಸ್’ ಅನ್ನು ದಿಢೀರ್ ಅನ್‌ಫಾಲೋ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಗಾಂಧಿನಗರದಲ್ಲಿ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಆದರೆ, ಸಂಸ್ಥೆಯನ್ನು ಅನ್‌ಫಾಲೋ ಮಾಡಿದ್ದರೂ, ಹೊಂಬಾಳೆಯ ಮುಖ್ಯಸ್ಥರಾದ ವಿಜಯ್ ಕಿರಗಂದೂರು ಅವರನ್ನು ರಿಷಬ್ ಇನ್ನೂ ಫಾಲೋ ಮಾಡುತ್ತಿರುವುದು ಗಮನಾರ್ಹವಾಗಿದೆ.
ಸದ್ಯ ‘ಜೈ ಹನುಮಾನ್’ ಕಡೆಗೆ ಗಮನ:
ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನ ಮುಹೂರ್ತ ನೆರವೇರಿದೆ. ಸದ್ಯಕ್ಕೆ ಅವರು ಈ ಚಿತ್ರದ ಶೂಟಿಂಗ್‌ನಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಲಿದ್ದು, ನಿರ್ದೇಶನದಿಂದ ಕೊಂಚ ಬ್ರೇಕ್ ಪಡೆಯಲಿದ್ದಾರೆ ಎನ್ನಲಾಗಿದೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಸಿನೆಮಾ
Bethlehem Family Unit-ಮಲಯಾಳಂ ಚಿತ್ರರಂಗದಲ್ಲಿ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’: ಅ.2ಕ್ಕೆ ಒಟಿಟಿ ಎಂಟ್ರಿ
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಗಿರೀಶ್ ಎ.ಡಿ. ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 326 ಕೋಟಿ ರೂ. ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ‘ಲೋಕಾ ಚಾಪ್ಟರ್ 1: ಚಂದ್ರ’ ಚಿತ್ರ 304 ಕೋಟಿ ರೂ. ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿತ್ತು. ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಈ ದಾಖಲೆಯನ್ನು ಹಿಂದಿಕ್ಕಿದೆ.
ಚಿತ್ರವು ಕೇರಳದಲ್ಲಿ ಮೊದಲ ಬಾರಿಗೆ 150 ಕೋಟಿ ರೂ. ಗಳಿಕೆ ದಾಖಲಿಸಿದ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅತಿ ವೇಗವಾಗಿ 300 ಕೋಟಿ ರೂ. ಕ್ಲಬ್ ಸೇರಿದ ಚಿತ್ರ ಎಂಬ ದಾಖಲೆಗೂ ಪಾತ್ರವಾಗಿದೆ.
ಸಿನೆಮಾ
Hanuman Ansh-₹2 ಕೋಟಿ ಬಜೆಟ್ ಸಿನಿಮಾ ₹347 ಕೋಟಿ ಗಳಿಕೆ; ‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ‘ಹನುಮಾನ್ ಅಂಶ್ʼ
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ.
ಮುಂಬಯಿ: ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ.
ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯಾಗಿ 45 ದಿನಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಗಳಿಕೆ ಮುಂದುವರಿದಿರುವುದು ವಿಶೇಷವಾಗಿದೆ.
‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ಸಿನಿಮಾ
ಭಾನುವಾರ (ಸೆ.20) ‘ಹನುಮಾನ್ ಅಂಶ್’ ಭಾರತದಲ್ಲಿ ₹13.75 ಕೋಟಿ ಹಾಗೂ ವಿದೇಶದಲ್ಲಿ ₹1.50 ಕೋಟಿ ಗಳಿಕೆ ಮಾಡಿದೆ. ಇದರೊಂದಿಗೆ ಚಿತ್ರದ ಒಟ್ಟು ಜಾಗತಿಕ ಗಳಿಕೆ ₹347.05 ಕೋಟಿಗೆ ತಲುಪಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ.
ಈ ಮೂಲಕ ರಾಮ್ ಚರಣ್ ಅಭಿನಯದ ‘ಪೆದ್ದಿ’ ಹಾಗೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗಳ ವಿಶ್ವದಾದ್ಯಂತದ ಗಳಿಕೆಯನ್ನು ‘ಹನುಮಾನ್ ಅಂಶ್’ ಹಿಂದಿಕ್ಕಿದೆ.
‘ಪೆದ್ದಿ’ ₹341.90 ಕೋಟಿ ಹಾಗೂ ‘ಟಾಕ್ಸಿಕ್’ ₹341.99 ಕೋಟಿ ಗಳಿಕೆ ಮಾಡಿದ್ದರೆ, ‘ಹನುಮಾನ್ ಅಂಶ್’ ₹347.05 ಕೋಟಿ ಗಳಿಕೆಯೊಂದಿಗೆ ಈ ಎರಡೂ ಸಿನಿಮಾಗಳನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲಾ’ ಸಿನಿಮಾದ ಗಳಿಕೆಯನ್ನೂ ಹಿಂದಿಕ್ಕಿರುವ ‘ಹನುಮಾನ್ ಅಂಶ್’, ಈ ವರ್ಷದ ಹಿಂದಿ ಸಿನಿಮಾಗಳ ಪೈಕಿ ಅತಿ ಹೆಚ್ಚು ಗಳಿಕೆ ಕಂಡ ಮೂರನೇ ಚಿತ್ರವಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ.
ಇತರ ಭಾಷೆಯ ಸಿನಿಮಾಗಳನ್ನೂ ಹಿಂದಿಕ್ಕಿದ ‘ಹನುಮಾನ್ ಅಂಶ್’
ಕಳೆದ ವಾರದಲ್ಲಿಯೂ ಸಿನಿಮಾ ತನ್ನ ಗಳಿಕೆಯ ಓಟ ಮುಂದುವರಿಸಿದ್ದು, ‘ಜನಾ ನಾಯಕನ್’, ‘ಬೆತ್ತೆಹೇಮ್ ಕುಟುಂಬ ಯೂನಿಟ್’, ‘ಮಾನ ಶಂಕರ ವರಪ್ರಸಾದ್ ಗಾರು’ ಹಾಗೂ ‘ಕರುಪ್ಪು’ ಸೇರಿದಂತೆ ವಿವಿಧ ಚಿತ್ರರಂಗಗಳ ಪ್ರಮುಖ ಸಿನಿಮಾಗಳ ಜಾಗತಿಕ ಗಳಿಕೆಯನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ‘ಮಹಾರಾಜ್ ಜಿ’ ಎಂದೇ ಜನಪ್ರಿಯರಾಗಿದ್ದ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದೆ.
ಸ್ವಯಂಭೂ ಮೀಡಿಯಾ ನೆಟ್‌ವರ್ಕ್, ರಾಗಿಣಿ ಎಸ್., ನಮ್ರತಾ ಜಿ.ಎಸ್. ಹಾಗೂ ಅನುಪ್ರಿಯಾ ಎ. ನಗರ್ ನಿರ್ಮಿಸಿರುವ ಚಿತ್ರದಲ್ಲಿ ಚಂದನ್ ಕೆ. ಆನಂದ್ ಮತ್ತು ಶೋಭಿನವ್ ಸತ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿಖಿಲ್ ದುಬೆ, ಉದಯಸಿಂಹ ರಜಪೂತ್, ಪೂರ್ಣಿಮಾ ತಿವಾರಿ ಹಾಗೂ ಮನೀಶ್ ಚೌಧರಿ ಸೇರಿದಂತೆ ಹಲವು ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















