ಬಿಗ್ ನ್ಯೂಸ್
Russia-“ವಿಶ್ವಾಸಾರ್ಹ ಪಾಲುದಾರ ಮತ್ತು ನಿಷ್ಠಾವಂತ ಸ್ನೇಹಿತ” ಎಂದು ಇರಾನ್ ಬೆನ್ನಿಗೆ ನಿಂತ ರಷ್ಯಾ : ಅಮೆರಿಕ-ಇಸ್ರೇಲ್ ವಿರುದ್ಧ ಪುಟಿನ್ ‘ಮಾಸ್ಟರ್ ಸ್ಟ್ರೋಕ್’..!
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇರಾನ್ ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಇರಾನ್ ನಮ್ಮ “ವಿಶ್ವಾಸಾರ್ಹ ಪಾಲುದಾರ ಮತ್ತು ನಿಷ್ಠಾವಂತ ಸ್ನೇಹಿತ” ಎಂದು ಬಣ್ಣಿಸುವ ಮೂಲಕ ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ಮಾಸ್ಕೋ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇರಾನ್ ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಇರಾನ್ ನಮ್ಮ “ವಿಶ್ವಾಸಾರ್ಹ ಪಾಲುದಾರ ಮತ್ತು ನಿಷ್ಠಾವಂತ ಸ್ನೇಹಿತ” ಎಂದು ಬಣ್ಣಿಸುವ ಮೂಲಕ ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ಪುಟಿನ್ ಸಂದೇಶದ ಮಹತ್ವ:
ಪರ್ಷಿಯನ್ ಹೊಸ ವರ್ಷವಾದ ‘ನೌರುಜ್’ ಸಂದರ್ಭದಲ್ಲಿ ಇರಾನ್ ನಾಯಕರಿಗೆ ಶುಭಾಶಯ ಕೋರಿರುವ ಪುಟಿನ್, ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಸತತವಾಗಿ ಇರಾನ್ ಮೇಲೆ ಒತ್ತಡ ಹೇರುತ್ತಿರುವ ಈ ಸಮಯದಲ್ಲಿ, ರಷ್ಯಾದ ಈ ಬಹಿರಂಗ ಬೆಂಬಲವು ಇರಾನ್ ಪಾಲಿಗೆ ದೊಡ್ಡ ಆನೆಯ ಬಲ ಬಂದಂತಾಗಿದೆ.
ಇರಾನ್‌ನಿಂದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ:
ಒಂದೆಡೆ ರಾಜತಾಂತ್ರಿಕ ಬೆಂಬಲ ಸಿಗುತ್ತಿದ್ದರೆ, ಇನ್ನೊಂದೆಡೆ ಇರಾನ್ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ರಾಜಧಾನಿ ಟೆಹ್ರಾನ್‌ನಿಂದ ಸುಮಾರು 4,000 ಕಿ.ಮೀ ದೂರದಲ್ಲಿರುವ ಅಮೆರಿಕ ಮತ್ತು ಬ್ರಿಟನ್‌ನ ಜಂಟಿ ಸೇನಾ ನೆಲೆಯಾದ ‘ಡಿಯಾಗೋ ಗಾರ್ಸಿಯಾ’ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ವರದಿಯಾಗಿದೆ. ಇದು ಅಮೆರಿಕದ ಭದ್ರತಾ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಇಸ್ರೇಲ್ ಕಾರ್ಯಾಚರಣೆ – 20 ಉಗ್ರರ ಹತ್ಯೆ:
ಇತ್ತ ಇಸ್ರೇಲ್ ಕೂಡ ಸುಮ್ಮನೆ ಕುಳಿತಿಲ್ಲ. ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಸೈನ್ಯ ಭೀಕರ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಕನಿಷ್ಠ 20ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಒಟ್ಟಾರೆಯಾಗಿ ಮಧ್ಯಪ್ರಾಚ್ಯದ ಪರಿಸ್ಥಿತಿ ಸ್ಫೋಟಕ ಹಂತಕ್ಕೆ ತಲುಪಿದ್ದು, ರಷ್ಯಾದ ಮಧ್ಯಪ್ರವೇಶವು ಈ ಸಂಘರ್ಷವನ್ನು ವಿಶ್ವಮಟ್ಟದ ದೊಡ್ಡ ಯುದ್ಧವನ್ನಾಗಿ ಪರಿವರ್ತಿಸುವ ಆತಂಕ ಮೂಡಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ23 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು22 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ23 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















