ಪುತ್ತೂರು
ವಿದ್ಯಾಮಾತಾದಿಂದ ಬೇಸಿಗೆ ರಜಾ ಕಾಲದ ಶಾರ್ಟ್ ಟರ್ಮ್ ಕೋರ್ಸ್ ಗಳು ಪ್ರಾರಂಭ : ಬೇಸಿಗೆ ಕೌಶಲ ಸಂಭ್ರಮ 2026ರ ಮೂಲಕ ಪ್ರಾರಂಭವಾಗಲಿರುವ ಹೊಸ ತರಬೇತಿಗಳು – ಇಂದಿನ ಯುವ ಪೀಳಿಗೆಯ ಭವಿಷ್ಯವನ್ನು ಬಾಲ್ಯದಲ್ಲೇ ಭದ್ರ ಗೊಳಿಸುವ ತರಬೇತಿಗಳನ್ನು ಪರಿಚಯಿಸಿದ ಪ್ರತಿಷ್ಠಿತ ತರಬೇತಿ ಕೇಂದ್ರ
ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಗಿಸಿರುವ ಮತ್ತು ಸದ್ಯ ಬೇಸಿಗೆ ರಜೆಯಲ್ಲಿರುವ ಅಲ್ಲದೇ ಸರಕಾರಿ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನತೆಗೆ ಪೂರಕವಾಗಿರುವ ಸೀಮಿತ ಅವಧಿಯಲ್ಲಿ ವಿಶೇಷ ಕೌಶಲ್ಯಭರಿತ ತರಬೇತಿಗಳನ್ನು ವಿದ್ಯಾಮಾತಾ ಅಕಾಡೆಮಿಯು ಪರಿಚಯಿಸುತ್ತಿದೆ.
ಪ್ರಾರಂಭದಲ್ಲಿ ಬೇಸಿಗೆ ಕೌಶಲ ಸಂಭ್ರಮ 2026ರ ಅಡಿಯಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿ ತರಬೇತಿ ಒದಗಿಸಲಾಗುತ್ತದೆ ಈ ತರಬೇತಿಯು ಎಪ್ರಿಲ್ 20 2026 ರಿಂದ ಮೇ 20 2026ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 3 ರ ವರೆಗೆ ನಡೆಯುತ್ತದೆ.
ಇದರ ಮುಂದುವರೆದ ಭಾಗವಾಗಿ ವಿದ್ಯಾಮಾತಾ ಅಕಾಡೆಮಿ ಯಲ್ಲಿ 4ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗಳಾದ ನವೋದಯ, ಸೈನಿಕ, ಮೊರಾರ್ಜಿಗಳಂತಹ ಪ್ರವೇಶ ಪರೀಕ್ಷೆಗಳಿಗೆ ತರಬೇತಿ, ಗಣಿತ ವಿಷಯದ ಕುರಿತು ಮಕ್ಕಳಲ್ಲಿ ಇರುವ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ 07 ವರ್ಷದಿಂದ 15 ವರ್ಷದೊಳಗಿನ ಮಕ್ಕಳಿಗೆ ಮಾಥ್ಸ್ ಕ್ಲಬ್ ಎಂಬ ವಿಶಿಷ್ಟ ಗಣಿತ ತರಗತಿ ಅಲ್ಲದೇ ವೇದಿಕ್ ಗಣಿತ, ಮಾನಸಿಕ ಸಾಮರ್ಥ್ಯ, ಮೈಂಡ್ ಗೇಮ್, ಮಾಥ್ಸ್ ಒಲಿಂಪಿಯಾಡ್ ನಂತಹ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಗಣಿತ ಸಂಬಂಧಿತ ಸ್ಪರ್ಧೆಗಳಿಗೆ ಆನ್ಲೈನ್ ಮತ್ತು ಆಫ್ ಲೈನ್ ಪೂರ್ವ ತಯಾರಿ ತರಗತಿಗಳು,
16 ರಿಂದ 22 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ರಕ್ಷಣಾ ಪಡೆಗಳಲ್ಲಿ ಅಧಿಕಾರಿಯಾಗುವ ಪ್ರಯತ್ನದಲ್ಲಿರುವವರಿಗೆ NDA ಮತ್ತು CDS ಹಾಗೂ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳಿಗೆ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ವಲಯದಲ್ಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳು ಅಲ್ಲದೇ ರಜಾ ದಿನಗಳಲ್ಲಿ ಬ್ಯಾಂಕಿಂಗ್, ರೈಲ್ವೆ, PDO, VAO, KAS ಹಾಗೂ ಭಾರತೀಯ ಸೇನೆ, ಪೊಲೀಸ್ ಪರೀಕ್ಷೆಗಳಿಗೆ ಸೀಮಿತ ಅವಧಿಯ ಪೂರ್ವ ತಯಾರಿ ತರಬೇತಿಗಳನ್ನು ವಿದ್ಯಾಮಾತಾ ಅಕಾಡೆಮಿಯು ಒದಗಿಸುತ್ತಿದ್ದು ಇದರ ಜೊತೆಗೆ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಕಂಪ್ಯೂಟರ್ ತರಗತಿಗಳು, AI, ಡಿಜಿಟಲ್ ಮಾರ್ಕೆಟಿಂಗ್, SAF, FICO, ಗ್ರಾಫಿಕ್ ಡಿಸೈನ್, VFX ಗಳು ಹಾಗೂ ಅಕೌಂಟಿಂಗ್ ವಲಯದಲ್ಲಿ SSLC, PUC ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟೀಯ ಮತ್ತು ಬಹು ರಾಷ್ಟ್ರೀಯ(MNC) ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳುವ ಇರಾದೆ ಹೊಂದಿರುವವರಿಗೆ ವಿದ್ಯಾಮಾತಾ ಅಕಾಡೆಮಿಯು ನಿತ್ಯ ನಿರಂತರ ಮಾರ್ಗದರ್ಶನ ತರಬೇತಿ ನೀಡುತ್ತಿದೆ.
ಯುವ ಜನತೆಯನ್ನು ತಯಾರಿಗೊಳಿಸುವ ಈ ತರಬೇತಿ ಯ ಸದುಪಯೋಗ ಪಡಿಸಿಕೊಳ್ಳಲು ಹಾಗೂ ತರಬೇತಿಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ವಿದ್ಯಾಮಾತಾ ಅಕಾಡೆಮಿಯ ಸಂಪರ್ಕ ಸಂಖ್ಯೆ 9620468869 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.




















