ನಗರದಲ್ಲಿ ಸುದ್ದಿಗಾರರೊಂದಿಗೆ […]" /> ನಗರದಲ್ಲಿ ಸುದ್ದಿಗಾರರೊಂದಿಗೆ […]"> Moodubidire Inspector-ಮೂಡುಬಿದಿರೆ ಇನ್‌ಸ್ಪೆಕ್ಟರ್ ವಿರುದ್ಧ ದೌರ್ಜನ್ಯ ಆರೋಪ: ಸಿಐಡಿ ತನಿಖೆಗೆ ಪರಮೇಶ್ವರ್ ಆದೇಶ - Nikhara News | Kannada News Website
Connect with us

ಬಿಗ್ ನ್ಯೂಸ್

Moodubidire Inspector-ಮೂಡುಬಿದಿರೆ ಇನ್‌ಸ್ಪೆಕ್ಟರ್ ವಿರುದ್ಧ ದೌರ್ಜನ್ಯ ಆರೋಪ: ಸಿಐಡಿ ತನಿಖೆಗೆ ಪರಮೇಶ್ವರ್ ಆದೇಶ

Published

on

Ad Widget

Ad Widget

Ad Widget

Ad Widget

ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧದ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಶನಿವಾರ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧದ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಶನಿವಾರ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆಯನ್ನು ಕೂಡಲೇ ಸಿಐಡಿಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡಿರುವುದಾಗಿ ತಿಳಿಸಿದರು. ಇತ್ತೀಚೆಗಷ್ಟೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದರು. ಈ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯ ಅಗತ್ಯವಿರುವುದರಿಂದ ಸಿಐಡಿಗೆ ವಹಿಸಲಾಗಿದೆ ಎಂದು ಸಚಿವರು ವಿವರಿಸಿದರು.

Ad Widget

Ad Widget <> Ad Widget

“ಆರೋಪ ಕೇಳಿ ಬಂದ ತಕ್ಷಣವೇ ಇನ್‌ಸ್ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಪ್ರಕರಣದಲ್ಲಿ ಎಷ್ಟು ಜನ ಸಂತ್ರಸ್ತೆಯರಿದ್ದಾರೆ ಎಂಬ ಸತ್ಯಾಂಶ ತನಿಖೆಯ ನಂತರವೇ ತಿಳಿಯಲಿದೆ. ಸಿಐಡಿ ತನಿಖೆಯಿಂದ ಎಲ್ಲವೂ ಹೊರಬರಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Ad Widget
Click to comment

Leave a Reply

ಸ್ಥಳೀಯ

Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ

Published

on

Ad Widget

Ad Widget

Ad Widget

Ad Widget

ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.

Ad Widget

Ad Widget

Ad Widget

Ad Widget

ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.

Ad Widget
Continue Reading

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!