ಸ್ಥಳೀಯ
Timarodi-ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ತಡೆಯಾಜ್ಞೆ..! ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ 5 ತಿಂಗಳ ಅವಧಿಯಲ್ಲಿ ಹೊರಡಿಸಿದ್ದ 3ನೇ ಗಡಿಪಾರು ಆದೇಶ..!
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು (AC) ಹೊರಡಿಸಿದ್ದ ತಿಮರೋಡಿ ಅವರ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಾರ್ಚ್ 24ರಂದು ತಡೆಯಾಜ್ಞೆ ನೀಡಿದೆ.
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು (AC) ಹೊರಡಿಸಿದ್ದ ತಿಮರೋಡಿ ಅವರ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಾರ್ಚ್ 24ರಂದು ತಡೆಯಾಜ್ಞೆ ನೀಡಿದೆ.
ಪ್ರಕರಣದ ಹಿನ್ನೆಲೆ:
ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 5 ತಿಂಗಳ ಹಿಂದೆ ಮೊದಲ ಗಡಿಪಾರು ಆದೇಶ ಹೊರಡಿಸಲಾಗಿತ್ತು . ಆ ನಂತರ ಮತ್ತೊಂದ ಬಾರಿ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಲ್ಲೂ ಗಡಿಪಾರಿಗೆ ತಡೆಯಾಜ್ಞೆ ದೊರಕಿತು.
ಪುತ್ತೂರು ಎಸಿ ಹೊರಡಿಸಿದ ಆದೇಶವು ಸಮರ್ಪಕವಾಗಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಈಗಾಗಲೇ ನ್ಯಾಯಾಲಯದಿಂದ ಖುಲಾಸೆಯಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿ ಗಡಿಪಾರು ಮಾಡುವುದು ಮತ್ತು ಅರ್ಜಿದಾರರು ಸಲ್ಲಿಸಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಇರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಇದೀಗ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿದ ಮೂರನೇ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಗ್ ನ್ಯೂಸ್
Puttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನ.23ರಂದು ಸಂಜೆ ಪುತ್ತೂರು ಪೇಟೆಯಲ್ಲಿ ನಡೆಯಿತು.
ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನ.23ರಂದು ಸಂಜೆ ಪುತ್ತೂರು ಪೇಟೆಯಲ್ಲಿ ನಡೆಯಿತು.
ದರ್ಬೆಯಿಂದ ಬೊಳುವಾರು ತನಕ ಕಾಲ್ನಡಿಗೆಯ ಮೆರವಣಿಗೆಯಲ್ಲಿ ತೆರಳಿ ಸ್ಥಳೀಯ ಉದ್ಯಮ ಸಂಸ್ಥೆಗಳು ಹಾಗೂ ವರ್ತಕರಿಗೆ ಆಮಂತ್ರಣ ಪತ್ರಿಕೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಪಂಚಮುಖಿ ಆಂಜನೇಯ ಯಾಗ ಸಮಿತಿಯ ಸಹಸಂಚಾಲಕ ಮುಳಿಯ ಕೇಶವಪ್ರಸಾದ್ ಹಾಗೂ ಗೌರವ ಸಲಹೆಗಾರ ಸಂಜೀವ ನಾಯಕ್ ಕಲ್ಲೇಗ ಅವರು ದರ್ಬೆ ವೃತ್ತದಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಆಮಂತ್ರಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮೆರವಣಿಗೆಯಲ್ಲಿ ತೆರಳಿ ವಿವಿಧ ಉದ್ಯಮ ಸಂಸ್ಥೆಗಳು ಹಾಗೂ ವ್ಯಾಪಾರಸ್ಥರಿಗೆ ಆಮಂತ್ರಣ ಪತ್ರಿಕೆ ನೀಡಿ, ಪಂಚಮುಖಿ ಆಂಜನೇಯ ಹವನದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪಂಚಮುಖಿ ಆಂಜನೇಯ ಹವನ ಸಮಿತಿ ಉಪಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿಕೃಷ್ಣ ಹಸಂತಡ್ಕ ಹಾಗೂ ಪುನೀತ್ ಅತ್ತಾವರ, ಕಾರ್ಯದರ್ಶಿ ಜನಾರ್ದನ ಬೆಟ್ಟ, ಸಹಸಂಚಾಲಕ ಶ್ರೀಧರ್ ತೆಂಕಿಲ, ಸಹ ಕೋಶಾಧಿಕಾರಿ ಸೇಸಪ್ಪ ಬೆಳ್ಳಿಪ್ಪಾಡಿ, ಸ್ವಾಗತ ಸಮಿತಿ ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಹೊರೆಕಾಣಿಕೆ ಸಮಿತಿ ಸಂಚಾಲಕ ಅಜಿತ್ ರೈ ಹೊಸಮನೆ, ಮನೀಶ್ ಬಿರ್ವ, ಕಲಶ ತೀರ್ಥ ಸಮಿತಿ ಸಂಚಾಲಕ ಜಯಂತ್ ಶೆಟ್ಟಿ ಕಂಬಳತ್ತಡ್ಡ, ಸಹಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ಯಾಗ ಸಂಕಲ್ಪ ಸಮಿತಿ ಸಂಚಾಲಕ ದಾಮೋದರ ಪಾಟಾಳಿ, ಸಹಸಂಚಾಲಕ ಸುನೀಲ್ ದಡ್ಡು, ಮಹಿಳಾ ಸಮಿತಿಯ ಗೌರಿ ಬನ್ನೂರು ಹಾಗೂ ಜಯಂತಿ ನಾಯಕ್, ಸ್ವಯಂಸೇವಕ ಸಮಿತಿ ಸಂಚಾಲಕ ಜಗದೀಶ್ ನೀರ್ಪಾಜೆ ಸೇರಿದಂತೆ ಚೇತನ್ ಬೊಳುವಾರು, ದಯಾನಂದ ಕೆಮ್ಮಾಯಿ, ಸತೀಶ್ ಬಿ.ಎಸ್., ರಾಮಪ್ರಸಾದ್ ಮಯ್ಯ, ಹರೀಶ್ ದೋಳ್ಪಾಡಿ, ಮಾಧವ ಪಟ್ಲ, ಕಾರ್ಯಕಾರಿಣಿ ಸಮಿತಿಯ ಭಾಮಿ ಜಗದೀಶ್ ಶೆಣೈ, ರಾಜೇಶ್ ಬನ್ನೂರು, ದಿನೇಶ್ ಪಂಜಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
-
ಸ್ಥಳೀಯ24 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ17 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು17 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್19 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು18 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ17 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ16 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

















