Connect with us

Uncategorized

Arrested-30ಕ್ಕೂ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಿಜೆಪಿ ನಾಯಕನ ಪುತ್ರ ಅರೆಸ್ಟ್..!

Published

on



Ad Widget

Ad Widget

Ad Widget

Ad Widget

ಸುಮಾರು 25 ರಿಂದ 30 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಗೋವಾ ಪೊಲೀಸರು ಬಿಜೆಪಿ ನಾಯಕನೊಬ್ಬನ ಮಗನನ್ನು ಬಂಧಿಸಿದ್ದಾರೆ. ಈ ಘಟನೆ ಗೋವಾ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಪಣಜಿ: ಸುಮಾರು 25 ರಿಂದ 30 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಗೋವಾ ಪೊಲೀಸರು ಬಿಜೆಪಿ ನಾಯಕನೊಬ್ಬನ ಮಗನನ್ನು ಬಂಧಿಸಿದ್ದಾರೆ. ಈ ಘಟನೆ ಗೋವಾ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪಿಯ ಹಿನ್ನೆಲೆ:
ಬಂಧಿತ ಆರೋಪಿಯನ್ನು ಮಡೆಗಲ್-ಕಾಕೋರಾ ನಿವಾಸಿ, ಕರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರ ಸೋಹಮ್ ಸುಶಾಂತ್ ನಾಯಕ್ (20) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರ್ಷಗಳಿಂದ ಸರಣಿ ದೌರ್ಜನ್ಯ ಎಸಗುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

Ad Widget

Ad Widget <> Ad Widget

ವಿಕೃತಿ ಬಯಲಾಗಿದ್ದು ಹೇಗೆ?:
ಕಳೆದ ವಾರ ನಡೆದ ಪಾರ್ಟಿಯೊಂದರಲ್ಲಿ ಆರೋಪಿ ಸೋಹಮ್, ತನ್ನ ಸ್ನೇಹಿತರ ಮುಂದೆ ಬಾಲಕಿಯರ ಮೇಲಿನ ದೌರ್ಜನ್ಯದ ಬಗ್ಗೆ ಕೊಚ್ಚಿಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ತಾನು ಚಿತ್ರೀಕರಿಸಿದ್ದ ವಿಡಿಯೋಗಳನ್ನು ಸ್ನೇಹಿತರಿಗೆ ತೋರಿಸಿದ್ದಾನೆ. ಈ ವಿಷಯ ಹೊರಬರುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಪ್ರತಿಭಟನೆಗಳು ನಡೆದವು.



Ad Widget

ಬ್ಲಾಕ್‌ಮೇಲ್ ತಂತ್ರ:
ಪೊಲೀಸ್ ತನಿಖೆಯ ಪ್ರಕಾರ, ಈತ ಅಪ್ರಾಪ್ತ ಬಾಲಕಿಯರನ್ನು ತನ್ನ ಬಲೆಗೆ ಬೀಳಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅಷ್ಟೇ ಅಲ್ಲದೆ, ಆ ಕೃತ್ಯಗಳನ್ನು ವಿಡಿಯೋ ಮಾಡಿಕೊಂಡು, ಬಳಿಕ ಅದೇ ವಿಡಿಯೋಗಳನ್ನು ತೋರಿಸಿ ಬಾಲಕಿಯರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.

Ad Widget

Ad Widget

ಜನಾಕ್ರೋಶ ಮತ್ತು ಬಂಧನ:
ಘಟನೆ ಬಯಲಾದ ಬೆನ್ನಲ್ಲೇ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಭಾನುವಾರ ಬೃಹತ್ ಪ್ರತಿಭಟನೆ ನಡೆದಿತ್ತು. 48 ಗಂಟೆಗಳ ಒಳಗೆ ಬಂಧಿಸದಿದ್ದರೆ ರಾಜ್ಯಾದ್ಯಂತ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ರಾಜಕೀಯ ಆಯಾಮ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್ ಪ್ರತಿಕ್ರಿಯಿಸಿದ್ದು, “ಸರ್ಕಾರವು ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಮತ್ತು ಸಂತ್ರಸ್ತ ಬಾಲಕಿಯರಿಗೆ ನ್ಯಾಯ ಒದಗಿಸಲು ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಸ್ತುತ ಪೊಲೀಸರು ಆರೋಪಿಯ ಬಳಿಯಿದ್ದ ಮೊಬೈಲ್ ಫೋನ್ ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Ad Widget
Click to comment

Leave a Reply

Uncategorized

ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ

Published

on



Ad Widget

Ad Widget

Ad Widget

Ad Widget
ಚಿತ್ರ : AI

ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ನಗರದ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆ ಅ.3ರಂದು ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ಉನೈಸ್ ಅವರು ಬೆಳಿಗ್ಗೆ 11.30ರ ಸುಮಾರಿಗೆ ಕಾಲೇಜಿನ ಸಮೀಪದ ಟರ್ಫ್‌ಗೆ ಕಬಡ್ಡಿ ಆಡಲು ತೆರಳಿದ್ದರು. ಈ ವೇಳೆ ಟರ್ಫ್ ಎದುರಿನ ರಸ್ತೆಯಲ್ಲಿ ಅವರ ಸ್ನೇಹಿತ ಹಾಗೂ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ರಾಯಿಝ್ ಮತ್ತು ಅದೇ ಕಾಲೇಜಿನ ಬಿಕಾಂ ವಿದ್ಯಾರ್ಥಿ, ಕಾಟಿಪಳ್ಳ ನಿವಾಸಿ ರಿಯಾನ್ ನಡುವೆ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಜಗಳ ಬಿಡಿಸಲು ಉನೈಸ್ ಸೇರಿದಂತೆ ಕೆಲ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿದಾಗ ರಿಯಾನ್ ಉನೈಸ್‌ಗೆ ಕೈಯಿಂದ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಉನೈಸ್ ಹಾಗೂ ಇತರ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸಾಗಿದ್ದರು.



Ad Widget

ಮಧ್ಯಾಹ್ನ 1.45ರ ಸುಮಾರಿಗೆ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ ರಿಯಾನ್ ಹಾಗೂ ಐವರು ಸಹಚರರು ಎರಡು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಉನೈಸ್ ಅವರನ್ನು ಸುತ್ತುವರಿದು ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

Ad Widget

Ad Widget

ಈ ವೇಳೆ ಚೂರಿಯಿಂದ ಉನೈಸ್ ಅವರ ತಲೆ, ಬೆನ್ನು, ಎಡ ಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಇರಿದು ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಗಾಯಗೊಂಡ ಉನೈಸ್ ಅವರನ್ನು ತಕ್ಷಣ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

Uncategorized

ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್‌ ಕುಮಾರ್‌ ಗೆ ಮಾತೃ ವಿಯೋಗ

Published

on



Ad Widget

Ad Widget

Ad Widget

Ad Widget


ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್‌ ವಕೀಲ ಮೊಹಿತ್‌ ಕುಮಾರ್‌ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ ಅ.3ರಂದು ಸ್ವಗೃಹದಲ್ಲಿ ನಿಧನರಾದರು.

Ad Widget

Ad Widget

Ad Widget

Ad Widget

ಪಾರ್ವತಿ ಅವರು ಚಾರ್ವಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹಾಗೂ ಪುತ್ತೂರಿನ ಪಶುವೈದ್ಯ ಧರ್ಮಪಾಲ ಕರಂದ್ಲಾಜೆ ಅವರ ಸಹೋದರಿ.
ಮೃತರು ಪುತ್ರರಾದ ತೀರ್ಥಪ್ರಸಾದ್‌ ಕೆ., ಚಿತ್ರಶೇಖರ್‌, ಮೋಹಿತ್‌ ಕುಮಾರ್‌ ಹಾಗೂ ಚಿರಣ್‌ ಕುಮಾರ್‌ ಅವರನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವಕೀಲ ಮೋಹಿತ್‌ ಕುಮಾರ್‌ ಅವರು ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ ಪರ ಸಿಬಿಐ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ಸೌಜನ್ಯ ಪ್ರಕರಣದ ನ್ಯಾಯಾಂಗ ಹೋರಾಟದಲ್ಲಿ ಅವರು ಪ್ರಮುಖವಾಗಿ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಸೌಜನ್ಯ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದರು.



Ad Widget
Ad Widget
Continue Reading

Uncategorized

Dharmasthala-28ನೇ ವರ್ಷದ ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಸಾಮರಸ್ಯದ  ಸಂಕೇತವೇ ಈ ಭಜನೆ : ಪ್ರೊ. ಪವನ್ ಕಿರಣಕೆರೆ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಮಾತನಾಡಿದರು.

Ad Widget

Ad Widget

Ad Widget

Ad Widget

ಧರ್ಮಸ್ಥಳ, ಅ.02 : ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ ಸಾಮರಸ್ಯದಿಂದ ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ  ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಅಭಿಪ್ರಾಯಪಟ್ಟರು.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ  ಮಾತನಾಡಿದರು.

Ad Widget

Ad Widget <> Ad Widget

  ಮನುಷ್ಯನ ಮನಸ್ಸಿನಲ್ಲಿರುವ ಅಸೂಯೆ, ಮತ್ಸರಗಳೇ ದುಃಖದ ಮೂಲವಾಗಿದ್ದು, ಅವೆಲ್ಲವನ್ನೂ  ಕಳೆಯಲು ಭಜನೆ ಹಾಗೂ ಆಧ್ಯಾತ್ಮದಿಂದ ಮಾತ್ರ ಸಾಧ್ಯ. ಸುಖದಲ್ಲಿ ಹಿಗ್ಗದೆ, ಕಷ್ಟ ಬಂದಾಗ ಕುಗ್ಗದೆ ಎಲ್ಲವನ್ನೂ ಸಮಚಿತ್ತವಾಗಿ ಸ್ವೀಕರಿಸುವ ಮೂಲಕ ಸಾಮರಸ್ಯದ ಬದುಕನ್ನು ಭಜನೆಯಿಂದ ಕಂಡುಕೊಳ್ಳಬಹುದಾಗಿದೆ. ಭಗವಂತನ ದೃಷ್ಟಿಯಲ್ಲಿ ಭಕ್ತಿಗೆ ಪ್ರಾಧಾನ್ಯತೆಯೇ ಹೊರತು ಯಾವುದೇ ಆಡಂಬರದ ಆಚರಣೆಗಳಿಗಲ್ಲ. ಭಗವಂತನನ್ನು ಒಲಿಸಿಕೊಳ್ಳಲು ಶ್ರದ್ಧೆಯೇ ಅತ್ಯಂತ ಉತ್ತಮ ಹಾದಿಯಾಗಿದೆ ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಭೋದಿಸಿದರು.



Ad Widget

   ರಾಜ್ಯಾದ್ಯಂತ ಎಲ್ಲಾ ಭಕ್ತರನ್ನು ಒಗ್ಗೂಡಿಸಿ ಎಲ್ಲರ ಮಾನಸಿಕ ಶುದ್ಧತೆಯನ್ನು ಕಾಪಾಡುವ ಮೂಲಕ ಭಜನಾ ಕಮ್ಮಟವು ಅತಿ ಮುಖ್ಯ ಪಾತ್ರ ವಹಿಸಿದ್ದು, ಈ ಕಮ್ಮಟವನ್ನು ಪರ್ವವಾಗಿಸುವಲ್ಲಿ ಕಾರಣಿಭೂತರಾದ  ಹೆಗ್ಗಡೆ ದಂಪತಿಗಳ ಪರಿಶ್ರಮ ಬಲು ದೊಡ್ಡದು ಎಂದು ಶ್ಲಾಘಿಸಿದರು.

Ad Widget

Ad Widget

 ಈ ಸಂದರ್ಭದಲ್ಲಿ ಹಿಂದಿನ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಭಾಗಿಯಾಗಿ ಸಾರ್ಥಕತೆಯನ್ನು ಕಂಡ ಹೇಮಂತ್ ಸುಳ್ಯ ತನ್ನ ಅನುಭವದ ಮಾತುಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಗೀತ ವಿದುಷಿ ಉಷಾ ಹೆಬ್ಬಾರ್, ಭಜನಾ ಕಮ್ಮಟ ಸಮಿತಿ ಸಂಚಾಲಕ ಸುಬ್ರಮಣ್ಯ ಪ್ರಸಾದ್, ಸಮಿತಿಯ ಸರ್ವ ಸದಸ್ಯರು ಹಾಗೂ ಶಿಬಿರಾರ್ಥಿಗಳು ಭಾಗಿಯಾಗಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading