ಬಿಗ್ ನ್ಯೂಸ್
Puttur Umesh Nayak-“ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ಕನ್ನಡ ಪ್ರಭ -ಏಷ್ಯಾನೆಟ್ ಸುವರ್ಣ ಟಿವಿಯ 2026ರ ‘ಸುವರ್ಣ ಕನ್ನಡಿಗ’ ಪ್ರಶಸ್ತಿ
ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಸಮಾಜದ ವಿವಿಧ ಹಂತಗಳ ಮೇಲೆ ಸ್ಪಷ್ಟ ಹಾಗೂ ಸಕಾರಾತ್ಮಕ ಪ್ರಭಾವ ಬೀರಿರುವ ಬಹುಮುಖ ವ್ಯಕ್ತಿತ್ವದ ಚಿಂತನೆ ಕ್ರಿಯಾಶೀಲತೆ ಮತ್ತು ಮಾನವೀಯತೆಗಳ ಭಾವದ ಮೂಲಕ ಪುತ್ತೂರು ತಾಲೂಕಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಆದ ವಿಶಿಷ್ಟ ಗುರುತನ್ನ ನಿರ್ಮಿಸಿರುವ ನಿರ್ಗತಿಕರ ಆಪತ್ಬಾಂಧವ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು, 2026ನೇ ಸಾಲಿನ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಸಮಾಜದ ವಿವಿಧ ಹಂತಗಳ ಮೇಲೆ ಸ್ಪಷ್ಟ ಹಾಗೂ ಸಕಾರಾತ್ಮಕ ಪ್ರಭಾವ ಬೀರಿರುವ ಬಹುಮುಖ ವ್ಯಕ್ತಿತ್ವದ ಚಿಂತನೆ ಕ್ರಿಯಾಶೀಲತೆ ಮತ್ತು ಮಾನವೀಯತೆಗಳ ಭಾವದ ಮೂಲಕ ಪುತ್ತೂರು ತಾಲೂಕಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಆದ ವಿಶಿಷ್ಟ ಗುರುತನ್ನ ನಿರ್ಮಿಸಿರುವ ನಿರ್ಗತಿಕರ ಆಪತ್ಬಾಂಧವ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು, 2026ನೇ ಸಾಲಿನ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದು, ಪುತ್ತೂರು ತಾಲೂಕಿನಿಂದ 2026ರ ಸುವರ್ಣ ಕನ್ನಡಿಗ ಪ್ರಶಸ್ತಿಗೆ ಆಯ್ಕೆ ಆಗಿರುವ ಏಕೈಕ ಸೇವಾ ಸಾಧಕರು ಇವರಾಗಿದ್ದಾರೆ.
ಮಾರ್ಚ್ 28ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು,ಸಮಾರಂಭದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದು, ಸಮಾರಂಭವು ಅತ್ಯಂತ ಗೌರವಪೂರ್ಣವಾಗಿ ನೆರವೇರಲಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ದಿನಪತ್ರಿಕೆ ಸಂಯುಕ್ತವಾಗಿ ಪ್ರದಾನ ಮಾಡುವ ಈ ಪ್ರಶಸ್ತಿ, ನಾಡು, ನುಡಿ ಹಾಗೂ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಸಾಧಕರಿಗೆ ನೀಡಲಾಗುವ ಅತ್ಯಂತ ಮಾನ್ಯತೆಯ ಗೌರವಗಳಲ್ಲಿ ಒಂದಾಗಿದೆ.
ಪುತ್ತೂರು ಉಮೇಶ್ ನಾಯಕ್ ಅವರು ಕಳೆದ ನಾಲ್ಕು ವರ್ಷಗಳಿಂದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷವಾಕ್ಯದಲ್ಲಿ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯ 32 ಗ್ರಾಮಗಳಲ್ಲಿ “ಗ್ರಾಮ ಸಾಹಿತ್ಯ ಸಂಭ್ರಮ” ಎಂಬ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮವನ್ನು ಗ್ರಾಮ ಗ್ರಾಮದಲ್ಲೂ ನಡೆಸಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ್ದಾರೆ. ವಿವಿಧ ಗ್ರಾಮದ 250ಕ್ಕೂ ಅಧಿಕ ಸಾಧಕರನ್ನು ಗುರುತಿಸಿ ಗೌರವಿಸಿರುವುದಲ್ಲದೆ, 100ಕ್ಕೂ ಹೆಚ್ಚು ಕೃತಿಗಳ ಪ್ರಕಟಣೆಗೆ ಮಾರ್ಗದರ್ಶನ ನೀಡಿರುವುದು ಅವರ ಸಾಹಿತ್ಯಪ್ರೇಮ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.
“ಶಾಸನ ಸಂಶೋಧನಾ ಅಧ್ಯಯನ” ಎಂಬ ಘೋಷವಾಕ್ಯದಡಿ ಪ್ರಾಚೀನ ಶಾಸನಗಳ ಸಂರಕ್ಷಣೆ ಹಾಗೂ ಪುನರುಜ್ಜೀವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರು, ಪುತ್ತೂರಿನಲ್ಲಿ ಸುಮಾರು ಎರಡು ದಶಕಗಳಿಂದ ಸ್ಥಗಿತಗೊಂಡಿದ್ದ ಕನ್ನಡ ಭುವನೇಶ್ವರಿ ರಾಜ್ಯೋತ್ಸವ ಮೆರವಣಿಗೆಯನ್ನು ಪುನಃ ಪ್ರಾರಂಭಿಸಿ, ತಾಲೂಕು ಮಟ್ಟದಲ್ಲಿ “ರಾಜ್ಯೋತ್ಸವ ಪ್ರಶಸ್ತಿ” ವ್ಯವಸ್ಥೆಯನ್ನು ರೂಪಿಸಿದ ಪ್ರಮುಖ ವ್ಯಕ್ತಿಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿಯೂ ಅವರು ವಿಶಿಷ್ಟ ಸಾಧನೆ ಮಾಡಿದ್ದು, “ಕನ್ನಡದಲ್ಲೂ ಐಎಎಸ್ ಪರೀಕ್ಷೆ ಬರೆಯಿರಿ” ಎಂಬ ಅಭಿಯಾನದಡಿ 200ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರಗಳನ್ನು ಕನ್ನಡದಲ್ಲೇ ನಡೆಸಿ, ಸುಮಾರು 50,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಐಎಎಸ್ ದಿಕ್ಕಿನತ್ತ ಪ್ರೇರಣೆ ನೀಡಿರುವುದು ಗಮನಾರ್ಹವಾಗಿದೆ. ಒಟ್ಟಾರೆಯಾಗಿ ರಾಜ್ಯದ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ರೀತಿಯ ವಿನೂತನ ಕಾರ್ಯಕ್ರಮಗಳು ಹಾಗೂ ಪ್ರಯೋಗಗಳು ಪ್ರಪ್ರಥಮ ಎನ್ನುಬಹುದಾಗಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಸಾಧಕ ಲೇಖಕರಾಗಿಯೂ ಗುರುತಿಸಿಕೊಂಡಿರುವ ಅವರು, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರಕಟಿತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸ್ಥಳ ಪುರಾಣದ ಸಂಕ್ಷಿಪ್ತ ಸಂಗ್ರಹವಾದ “ಸ್ವಯಂಭೂ ಮಹಾಲಿಂಗೇಶ್ವರ” ಸೇರಿದಂತೆ ಮೂರು ಕೃತಿಗಳನ್ನು ರಚಿಸಿದ್ದಾರೆ.
ಮಾನವೀಯ ಸೇವೆಯಲ್ಲಿ ಕೂಡ ಅವರು ಅನನ್ಯ ಸೇವೆ ಸಲ್ಲಿಸಿದ್ದು, ಕಳೆದ ಹತ್ತು ವರ್ಷಗಳಲ್ಲಿ 100ಕ್ಕೂ ಹೆಚ್ಚು ನಿರ್ಗತಿಕರನ್ನು ಪುನರ್ವಸತಿ ಕೇಂದ್ರಗಳಿಗೆ ಸೇರಿಸಿ, ಅವರಿಗೆ ಹೊಸ ಬದುಕಿನ ಆಶಾಕಿರಣವಾಗಿದ್ದಾರೆ. ವಿಶೇಷವಾಗಿ ಎಚ್.ಐ.ವಿ ಪೀಡಿತ ಓರ್ವ ಮಹಿಳೆ ಹಾಗೂ ಇಬ್ಬರು ಎಚ್. ಐ. ವಿ ಪೀಡಿತ ಮಕ್ಕಳ ರಕ್ಷಣೆ ಮಾಡಿ ಅವರಿಗೆ ಆಶ್ರಯ, ಚಿಕಿತ್ಸೆ ಮತ್ತು ವಿದ್ಯಾಭ್ಯಾಸ ಒದಗಿಸಿರುವುದು ಅವರ ಮಾನವೀಯತೆಯ ಉನ್ನತ ಉದಾಹರಣೆಯಾಗಿದೆ.
ತಮ್ಮ ಡೌನ್ ಸಿಂಡ್ರೋಮ್(ಬುದ್ದಿ ಮಾಂದ್ಯತೆ ) ಪೀಡಿತ ಸಹೋದರ ಸುರೇಶ್ ನಾಯಕ್ ಅವರಿಗೆ ಜಾದು ಕಲಿಸಿ ದೇಶದಾದ್ಯಂತ 500ಕ್ಕೂ ಹೆಚ್ಚು ಉಚಿತ ಪ್ರದರ್ಶನಗಳ ಮೂಲಕ ಬುದ್ಧಿಮಾಂದ್ಯತಾ ಹಾಗೂ ಸ್ವಚ್ಛ ಭಾರತ್ ಜನ ಜಾಗೃತಿ ಮೂಡಿಸಿ ಉಭಯ ಅಭಿಯಾನಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಈ ಪ್ರಯತ್ನಗಳಿಂದ ಸುರೇಶ್ ನಾಯಕ್ ಲಿಮ್ಕಾ ದಾಖಲೆ ಸೇರಿದಂತೆ ಎಂಟು ವಿಶ್ವ ದಾಖಲೆಗಳನ್ನು ಸಾಧಿಸಿ, 2014ರ ವಿಶ್ವ ಅಂಗವಿಕಲ ದಿನಾಚರಣೆಯಂದು ರಾಷ್ಟ್ರಪತಿ ಪ್ರಶಸ್ತಿ ಪಡೆದಿದ್ದಾರೆ.
ಅದೇ ರೀತಿ, ಉಡುಪಿಯ ಡೌನ್ ಸಿಂಡ್ರೋಮ್ ಅಂತರಾಷ್ಟ್ರೀಯ ಈಜುಗಾರ್ತಿ ಅರ್ಚನಾ ಜೈ ವಿಠಲ್ ಹಾಗೂ ಮೈಸೂರಿನ ದಿವ್ಯಾಂಗ ಕೀಬೋರ್ಡ್ ವಾದಕ ಗಣೇಶ ಭಟ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ದೊರಕಲು ಕೂಡ ಅವರು ಪ್ರಮುಖ ಪಾತ್ರವಹಿಸಿದ್ದು, ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಹಾಗೂ ಗೌರವದ ಜೀವನ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.
ಇವರ ಸೇವೆಯನ್ನು ಗುರುತಿಸಿ 2020ರಲ್ಲಿ “ರೋಟರಿ ಅನ್ಸಂಗ್ ಹೀರೋ ಪ್ರಶಸ್ತಿ” ಹಾಗೂ 2025ರಲ್ಲಿ “ಪುತ್ತೂರು ತಾಲೂಕು ಗಣರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಪ್ರಸ್ತುತ “ಶ್ರೀರಾಮ್ ಶೇರ್ಸ್ ಅಂಡ್ ಫೈನಾನ್ಷಿಯಲ್ ಕನ್ಸಲ್ಟೆಂಟ್” ಸಂಸ್ಥೆಯ ಮೂಲಕ ವೃತ್ತಿಜೀವನ ನಡೆಸುತ್ತಿರುವ ಅವರು, ಪತ್ನಿ ರೂಪಶ್ರೀ ನಾಯಕ್, ಪುತ್ರ ಸಾತ್ವಿಕ್ ನಾಯಕ್ ಹಾಗೂ ಪೋಷಕರೊಂದಿಗೆ ಪುತ್ತೂರಿನಲ್ಲಿ ವಾಸವಾಗಿದ್ದಾರೆ.
‘ಸುವರ್ಣ ಕನ್ನಡಿಗ’ ಪ್ರಶಸ್ತಿ ಇವರಂತಹ ಬಹುಮುಖ ಸೇವಾ ಸಾಧಕರಿಗೆ ಲಭಿಸಿರುವುದು ಪುತ್ತೂರು ತಾಲೂಕು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿವೆ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized16 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized19 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized20 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized18 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized17 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್2 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















