ಚಿನ್ನ-ಬೆಳ್ಳಿ ದರ
Gold Rate Today – ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ; ವಾರದ ಆರಂಭದಲ್ಲೇ ಇಳಿಕೆಯಾದ ಚಿನ್ನದ ದರ..!
ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 750 ರೂಪಾಯಿಗಳಷ್ಟು ಕಡಿತ ಕಂಡುಬಂದಿದೆ. ವಿದೇಶಿ ಮಾರುಕಟ್ಟೆಯಲ್ಲಿ ಬೆಲೆ ಬಹುತೇಕ ಸ್ಥಿರವಾಗಿದ್ದರೂ, ಭಾರತದಲ್ಲಿ ಚಿನ್ನದ ದರದಲ್ಲಿ ಇಳಿಕೆಯಾಗಿರುವುದು ಗ್ರಾಹಕರಿಗೆ ಸಮಾಧಾನ ತಂದಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಬೆಂಗಳೂರು, ಮಾ.30: ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು (ಸೋಮವಾರ, ಮಾರ್ಚ್ 30) ಕೊಂಚ ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 750 ರೂಪಾಯಿಗಳಷ್ಟು ಕಡಿತ ಕಂಡುಬಂದಿದೆ. ವಿದೇಶಿ ಮಾರುಕಟ್ಟೆಯಲ್ಲಿ ಬೆಲೆ ಬಹುತೇಕ ಸ್ಥಿರವಾಗಿದ್ದರೂ, ಭಾರತದಲ್ಲಿ ಚಿನ್ನದ ದರದಲ್ಲಿ ಇಳಿಕೆಯಾಗಿರುವುದು ಗ್ರಾಹಕರಿಗೆ ಸಮಾಧಾನ ತಂದಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಹತ್ತು ಗ್ರಾಮ್ ಚಿನ್ನದ ಬೆಲೆಯಲ್ಲಿ 750 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು, ಬೆಳ್ಳಿ ಬೆಲೆಯೂ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,35,000 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,47,280 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,35,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,500 ರೂಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 30ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,046 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
ಬೆಂಗಳೂರು: 13,500 ರೂ
ಚೆನ್ನೈ: 13,600 ರೂ
ಮುಂಬೈ: 13,500 ರೂ
ದೆಹಲಿ: 13,515 ರೂ
ಕೋಲ್ಕತಾ: 13,500 ರೂ
ಕೇರಳ: 13,500 ರೂ
ಅಹ್ಮದಾಬಾದ್: 13,505 ರೂ
ಜೈಪುರ್: 13,515 ರೂ
ಲಕ್ನೋ: 13,515 ರೂ
ಭುವನೇಶ್ವರ್: 13,500 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
ಮಲೇಷ್ಯಾ: 555 ರಿಂಗಿಟ್ (12,956 ರುಪಾಯಿ)
ದುಬೈ: 501.25 ಡಿರಾಮ್ (12,814 ರುಪಾಯಿ)
ಅಮೆರಿಕ: 140.50 ಡಾಲರ್ (13,184 ರುಪಾಯಿ)
ಸಿಂಗಾಪುರ: 181 ಸಿಂಗಾಪುರ್ ಡಾಲರ್ (13,191 ರುಪಾಯಿ)
ಕತಾರ್: 499 ಕತಾರಿ ರಿಯಾಲ್ (12,843 ರೂ)
ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,754 ರುಪಾಯಿ)
ಓಮನ್: 53.15 ಒಮಾನಿ ರಿಯಾಲ್ (12,955 ರುಪಾಯಿ)
ಕುವೇತ್: 41.23 ಕುವೇತಿ ದಿನಾರ್ (12,608 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
ಬೆಂಗಳೂರು: 245 ರೂ
ಚೆನ್ನೈ: 250 ರೂ
ಮುಂಬೈ: 245 ರೂ
ದೆಹಲಿ: 245 ರೂ
ಕೋಲ್ಕತಾ: 245 ರೂ
ಕೇರಳ: 250 ರೂ
ಅಹ್ಮದಾಬಾದ್: 245 ರೂ
ಜೈಪುರ್: 245 ರೂ
ಲಕ್ನೋ: 245 ರೂ
ಭುವನೇಶ್ವರ್: 250 ರೂ
ಪುಣೆ: 245 ರೂ
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಪರಾಧ24 hours agoMadikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
-
ಉಡುಪಿ24 hours agoUdupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ23 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..















