ಮೋಹನದಾಸ ಶೆಟ್ಟಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೊರಗೆಳೆದು ಹಾಕಿ ತಲವಾರಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಲಾಗಿದೆ. […]" /> ಮೋಹನದಾಸ ಶೆಟ್ಟಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೊರಗೆಳೆದು ಹಾಕಿ ತಲವಾರಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಲಾಗಿದೆ. […]"> ಬಿಜೆಪಿ ನಾಯಕ , ಪೆರಾಬೆ ಗ್ರಾಮ ಪಂಚಾಯತ್ ಅಧ್ಯಕ್ಷರ ಕೊಲೆಯತ್ನ : ಗಾಂಜ ಸೇವಿಸಿ ತಲುವಾರು ಬೀಸಿದ ಪಿಎಫ್ಐ ಕಾರ್ಯಕರ್ತರು - 32 ಗಂಟೆ ಕಳೆದರೂ ಬಂಧನವಾಗಿಲ್ಲ ಪ್ರಮುಖ ಆರೋಪಿಗಳು - Nikhara News | Kannada News Website
Connect with us

Uncategorized

ಬಿಜೆಪಿ ನಾಯಕ , ಪೆರಾಬೆ ಗ್ರಾಮ ಪಂಚಾಯತ್ ಅಧ್ಯಕ್ಷರ ಕೊಲೆಯತ್ನ : ಗಾಂಜ ಸೇವಿಸಿ ತಲುವಾರು ಬೀಸಿದ ಪಿಎಫ್ಐ ಕಾರ್ಯಕರ್ತರು – 32 ಗಂಟೆ ಕಳೆದರೂ ಬಂಧನವಾಗಿಲ್ಲ ಪ್ರಮುಖ ಆರೋಪಿಗಳು

Published

on

Ad Widget

Ad Widget

Ad Widget

Ad Widget

ಪುತ್ತೂರು: ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಪ್ರಭಾವಿ ಬಿಜೆಪಿ ನಾಯಕ ಮೋಹನದಾಸ ಶೆಟ್ಟಿ ಹಾಗೂ ಮೂವರ ಮೇಲೆ ಪಿಎಫ್ಐ ಕಾರ್ಯಕರ್ತರಿಂದ ತಲವಾರು ದಾಳಿ ನಡೆದಿದೆ. ಆದರೆ ದಾಳಿ ನಡೆಸಿ 32 ಗಂಟೆ ಕಳೆದರೂ ಪ್ರಮುಖ ಆರೋಪಿ ಬಂಧನ ಇನ್ನೂ ಆಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಜೂ.24ರ ರಾತ್ರಿ ಪೆರಾಬೆ ಶಾಲಾ ಬಳಿ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೋಹನದಾಸ ಶೆಟ್ಟಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೊರಗೆಳೆದು ಹಾಕಿ ತಲವಾರಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಲಾಗಿದೆ. ಗಾಂಜ ಸೇವಿಸಿದ ಪಿಎಫ್ಐ ಕಾರ್ಯಕರ್ತರಿಂದ ದಾಳಿ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ .

Ad Widget

Ad Widget <> Ad Widget

ತಲವಾರು ದಾಳಿ ನಡೆಸಿದ ಪಿಎಫ್ಐ ಕಾರ್ಯಕರ್ತರು

ಪೆರಾಬೆ ಶಾಲೆ ಸಮೀಪ ವೈಯ್ಯಕ್ತಿಕ ವಿಚಾರವಾಗಿ ಒಂದೇ ಕೋಮಿನ ಎರಡು ತಂಡಗಳ ನಡುವೆ ಚರ್ಚೆ ನಡೆಯುತಿತ್ತು. ಆಗ ಅದೇ ರಸ್ತೆಯಲ್ಲಿ ತನ್ನ ಮನೆಯ ಕಡೆ ಹೋಗುತಿದ್ದ ಮೋಹನ್ ದಾಸ್ ಶೆಟ್ಟಿಯವರ ಮೇಲೆ ದಾಳಿಯಾಗಿದೆ.

ಹಲ್ಲೆಗೊಳಗಾದವರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

Ad Widget

ಆಸ್ಪತ್ರೆಯಲ್ಲಿ ದಾಖಲಾಗಿರುವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ದಾಸ್ ರೈವರು ಘಟನೆಯ ಬಗ್ಗೆ ಪೋಲಿಸರಿಗೆ ದೂರು ನೀಡಿದ್ದು, ನಾನು ಜೂ.24ರಂದು ಪೆರಾಬೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಹೋಗಿ ಬಳಿಕ ನನ್ನ ಕಾರಿನಲ್ಲಿ ಕೃಷಿ ಜಮೀನಿಗೆ ಹಳೇನರಂಕಿ ಎಂಬಲ್ಲಿಗೆ ಹೋಗಿ ಅಲ್ಲಿ ಕೆಲಸ ಮಾಡಿ ನನ್ನ ಕೃಷಿ ಜಮೀನಿನಲ್ಲಿ ಕೆಲಸ ಮಾಡುವ ಅಲಂಕಾರು ನಿವಾಸಿ ರಾಘವ ಎಂಬವರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ವಾಪಾಸ್ಸು ಮನೆ ಕಡೆಗೆ ಬರುತ್ತಿರುವಾಗ ಅಲಂಕಾರು ಪೇಟೆಯಲ್ಲಿದ್ದ ಪರಿಚಯದ ಶಿವರಾಮ ಎಂಬವರನ್ನು ಕಾರಿನಲ್ಲಿ ಕುಳ್ಳಿರಿಸಿ ಕೊಂಡು ರಾತ್ರಿ 08.45 ಗಂಟೆಗೆ ಅಲಂಕಾರಿನಿಂದ ಪೆರಾಬೆ ತನ್ನ ಮನೆ ಕಡೆಗೆ ಹೋಗುತ್ತಿರುವಾಗ, ಪೆರಾಬೆ ಹಿರಿಯ ಪ್ರಾಥಮಿಕ ಶಾಲೆ ಬಳಿಗೆ ತಲುಪುತಿದ್ದಂತೆ ಅದೇ ರಸ್ತೆಯಲ್ಲಿ ಜನರ ಗುಂಪು ಸೇರಿಕೊಂಡು ಯಾವುದೋ ವಿಚಾರ ಮಾತನಾಡುತ್ತಿದ್ದು, ನಂತರ ಆ ಗುಂಪಿನಲ್ಲಿದ್ದ ನನ್ನ ಪರಿಚಯದ ಇಬ್ರಾಹಿಂ ಎಂಬವರು ಕಾರಿನ ಬಳಿ ಬಂದು ನನ್ನ ಅಳಿಯ ಯಾವುದೋ ವಾಟ್ಸಾಪ್ ವಿಚಾರವಾಗಿ ಸಮಸ್ಯೆ ಮಾಡಿಕೊಂಡಿದ್ದು ಬಗೆಹರಿಸುವಂತೆ ಕೇಳಿಕೊಂಡ .

ಆಗ ಜನರ ಗುಂಪಿನಲ್ಲಿದ್ದ ಪಿಎಫ್ಐ ಕಾರ್ಯಕರ್ತರಾದ ರಾಜೀಕ್, ಜುಬೈರ್, ಜುನೈದ್, ಮೊಯಿದು ಕುಂಞ, ಸಂಶು, ಅಮನ್, ಸಾಹುಲ್ ಹಮೀದ್ ಹಾಗೂ ಇತರರು ನನ್ನ ಕಾರಿನ ಹತ್ತಿರ ಬಂದು ನನ್ನನ್ನು ಕಾರಿನಿಂದ ಎಳೆದು ಅವಾಚ್ಯ ಶಬ್ದದಿಂದ ಬೈದು ಹಲ್ಲೆ ಮಾಡಿದ್ದು ಬಳಿಕ ಆರೋಪಿತ ರಾಜೀಕ್ ಎಂಬಾತನು ಕೈಯಲ್ಲಿದ್ದ ಕತ್ತಿಯನ್ನು ನನ್ನ ಮೇಲೆ ಬೀಸಿದ್ದು ಈ ವೇಳೆ ಕತ್ತಿ ನನ್ನ ಜತೆ ಇದ್ದ ಶಿವರಾಮ ಎಂಬವರ ಬೆನ್ನಿನ ಬಲಬದಿಗೆ ತಾಗಿ ಗಾಯವಾಗಿದೆ. ಆರೋಪಿಗಳೆಲ್ಲ ಗಾಂಜ ಅಮಲಿನಲ್ಲಿದ್ದರು ಎಂದು ಮೋಹನದಾಸ್ ಶೆಟ್ಟಿ ತಿಳಿಸಿದ್ದಾರೆ.

ಕೂಡಲೇ ಹಲ್ಲೆಯಿಂದ ಗಾಯಗೊಂಡ ಶಿವರಾಮರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸುತ್ತಿದ್ದ ವೇಳೆ ಪುನ: ಆರೋಪಿತರು ನನ್ನ ಕಾರನ್ನು ತಡೆದು ನಿಲ್ಲಿಸಿ ನೀನು ನಮ್ಮವರ ವಿಚಾರಕ್ಕೆ ಬಂದರೆ ನಿನ್ನನ್ನು ಮುಂದಕ್ಕೆ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿ ಕಡಬ ಪೋಲಿಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ನಾಲ್ಕು ತಲವಾರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸ್ಥಳೀಯವಾಗಿ ಪ್ರಭಾವಿ ಬಿಜೆಪಿ ನಾಯಕರಾದ ಮೋಹನದಾಸ್ ಶೆಟ್ಟಿಯವರು ಹಲವು ಬಾರಿ ಪೆರಾಬೆ ಗ್ರಾಮ ಪಂಚಾಯತ್ ಸದಸ್ಯರಾಗಿ ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಕೊಲೆಯತ್ನ ನಡೆದು 32 ಗಂಟೆ ಕಳೆದರೂ ಪ್ರಮುಖ ಆರೋಪಿಗಳ ಬಂಧನ ಇನ್ನೂ ಆಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿಗಳಲ್ಲಿ ಓರ್ವ ಕ್ರಿಮಿನಲ್ ಚಟುವಟಿಕೆಗಳಲ್ಲಿದ್ದು, ಆತನ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವರು ಪ್ರಕರಣಗಳಿವೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!