ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ […]" /> ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ […]"> Siri Foundation-ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಹಾಗೂ ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ - Nikhara News | Kannada News Website
Connect with us

ಸ್ಥಳೀಯ

Siri Foundation-ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಹಾಗೂ ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Published

on

Ad Widget

Ad Widget

Ad Widget

Ad Widget

ಧಾರವಾಡದ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಪದ್ಮಲತಾ ನಿರಂಜನ್ ಕುಮಾರ್ ದಂಪತಿಗಳು ಮಾ.30-ರಂದು ಬೆಳ್ತಂಗಡಿಯಲ್ಲಿರುವ ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು.

Ad Widget

Ad Widget

Ad Widget

Ad Widget

ಧಾರವಾಡದ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಪದ್ಮಲತಾ ನಿರಂಜನ್ ಕುಮಾರ್ ದಂಪತಿಗಳು ಮಾ.30-ರಂದು ಬೆಳ್ತಂಗಡಿಯಲ್ಲಿರುವ ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಯವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಸಿರಿ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು 22 ವರ್ಷಗಳ ಹಿಂದೆ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರು ಪ್ರಾರಂಭಿಸಿದ ‘ಸಿರಿ’ ಎಂಬ ಕನಸಿನ ಕೂಸು ಇಂದು ಬೆಳೆದು ಹೆಮ್ಮರವಾಗಿ ನಿಂತಿದೆ ಎಂದು ಹೇಳಿದರು.

ಪ್ರಾರಂಭಿಕ ಹಂತದಲ್ಲಿ ಹಳ್ಳಿ-ಹಳ್ಳಿಗಳಲ್ಲಿರುವ ಬಡ ಗ್ರಾಮೀಣ ಮಹಿಳೆಯರಿಗೆ ಅವರವರ ಮನೆಗಳಲ್ಲಿಯೇ ಸಿರಿ ಉತ್ಪನ್ನಗಳನ್ನು ತಯಾರಿಸುವ ತರಬೇತಿ ನೀಡಿ, ಅವರಿಂದ ಉತ್ಪಾದಿಸಲ್ಪಟ್ಟ ವಸ್ತುಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡುವ ಮೂಲಕ, ಬಂದ ಆದಾಯದಿಂದ ಮಹಿಳೆಯರ ಜೀವನಕ್ಕೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭವಾದ ಸಿರಿ ಸಂಸ್ಥೆ, ಹಂತ ಹಂತವಾಗಿ ಬೆಳೆಯುತ್ತಾ ಇಂದು ಸಾವಿರಾರು ಮಹಿಳೆಯರ ಬದುಕು ಬೆಳಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

Ad Widget

Ad Widget

ಅಂದಿನಿಂದ ಇಂದಿನವರೆಗೂ ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಈ ಅವಿರತ ಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹಿಂದೆ ಒಂದೇ ಧೃಡಸಂಕಲ್ಪ ಅಡಗಿದೆ. ಅದೇ ‘ಸ್ತ್ರೀ ಸಬಲೀಕರಣ’ ಎಂದರು.

ಸಿರಿ ಸಂಸ್ಥೆ ಸೇರಿದಂತೆ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ಡಿ.ಎಂ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ. 70ರಷ್ಟು ಮಹಿಳೆಯರೇ ಉದ್ಯೋಗ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ಹೇಳಿದರು.

ಸಿರಿಯಲ್ಲಿ ದುಡಿಯುತ್ತಿರುವ ಎಲ್ಲ ಮಹಿಳೆಯರೂ ಪ್ರಾಮಾಣಿಕತೆ ಹಾಗೂ ಸಂತೃಪ್ತಿಯಿಂದ ಕೆಲಸ ನಿರ್ವಹಿಸಿ, ಪೂಜ್ಯ ದಂಪತಿಗಳ ಸ್ತ್ರೀ ಸಬಲೀಕರಣದ ಕನಸನ್ನು ಸಾಕಾರಗೊಳಿಸಬೇಕು. ಸಿರಿ ಸಂಸ್ಥೆಯ ಉತ್ಪನ್ನಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಮಾನ್ಯತೆ ಪಡೆಯಲಿ, ಇದರಿಂದ ಮತ್ತಷ್ಟು ಮಹಿಳೆಯರಿಗೆ ಉದ್ಯೋಗಾವಕಾಶಗಳು ಲಭಿಸಲಿ ಎಂದು ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ದನ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಧಾರವಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ಡಿ.ಎಂ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಿರಿ ಉತ್ಪನ್ನಗಳನ್ನೇ ಬಳಸುವಂತೆ ಉತ್ತೇಜನ ನೀಡುವುದರ ಜೊತೆಗೆ, ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಸಿಬ್ಬಂದಿಯವರಿಗೂ ಸಿರಿ ಉತ್ಪನ್ನಗಳನ್ನು ಬಳಕೆ ಮಾಡಲು ಪ್ರೇರೇಪಿಸುವ ಮೂಲಕ ಸಿರಿ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಡಾ. ನಿರಂಜನ್ ಕುಮಾರ್ ಹಾಗೂ ಶ್ರೀಮತಿ ಪದ್ಮಲತಾ ದಂಪತಿಗಳಿಗೆ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿವರ್ಗದವರು ಡಾ. ನಿರಂಜನ್ ಕುಮಾರ್ ಮತ್ತು ಶ್ರೀಮತಿ ಪದ್ಮಲತಾ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಭ್ರಮಿಸಿದರು.

ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!