ಬಿಗ್ ನ್ಯೂಸ್
Balavana swimming pool-ಬಾಲವನ ಈಜುಕೊಳದಲ್ಲಿ ಏ.3ರಿಂದ ಎರಡನೇ ಶಿಬಿರ ಪ್ರಾರಂಭ; ಸುಡು ಬೇಸಿಗೆ ನಡುವೆ ಶಿಬಿರಕ್ಕೆ ಭಾರಿ ಬೇಡಿಕೆ
ಕರಾವಳಿ ಭಾಗದಲ್ಲಿ ಬಿಸಿಲು ನೆತ್ತಿ ಸುಡುವ ಭಾಸವಾಗುತ್ತದೆ. ಜನರು ಪದೇ ಪದೇ ತಂಪು ಪಾನೀಯ ಸೇವಿಸುವುದಲ್ಲದೆ, ತಣ್ಣೀರಿನಲ್ಲೇ ಸ್ನಾನ ಮಾಡುತ್ತಾರೆ. ಇನ್ನೂ ಕೆಲವರಿಗೆ ನೀರಿನಲ್ಲೇ ಕುಳಿತುಕೊಳ್ಳೋಣ ಎಂಬ ಯೋಚನೆ ಬರುವಷ್ಟರ ಮಟ್ಟಿಗೆ ಸೆಕೆಯಾಗುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳವು ಎರಡನೇ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದೆ.
ಪುತ್ತೂರು: ಕರಾವಳಿ ಭಾಗದಲ್ಲಿ ಬಿಸಿಲು ನೆತ್ತಿ ಸುಡುವ ಭಾಸವಾಗುತ್ತದೆ. ಜನರು ಪದೇ ಪದೇ ತಂಪು ಪಾನೀಯ ಸೇವಿಸುವುದಲ್ಲದೆ, ತಣ್ಣೀರಿನಲ್ಲೇ ಸ್ನಾನ ಮಾಡುತ್ತಾರೆ. ಇನ್ನೂ ಕೆಲವರಿಗೆ ನೀರಿನಲ್ಲೇ ಕುಳಿತುಕೊಳ್ಳೋಣ ಎಂಬ ಯೋಚನೆ ಬರುವಷ್ಟರ ಮಟ್ಟಿಗೆ ಸೆಕೆಯಾಗುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳವು ಎರಡನೇ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದೆ.
ಮೊದಲ ಶಿಬಿರವು ಮಾ. 14 ರಂದು ಪ್ರಾರಂಭವಾಗಿದ್ದು, ಎ. 1ರಂದು ಕೊನೆಗೊಳ್ಳಲಿದೆ. 2ನೇ ಶಿಬಿರವು ಏ.3 ರಿಂದ 22ರ ವರೆಗೆ ನಡೆಯಲಿದ್ದು, ಏ.24 ರಿಂದ ಮೇ 12ರ ವರೆಗೆ 3ನೇ ಶಿಬಿರ, ಮೇ 14 ರಿಂದ ಜೂ.2ರ ವರೆಗೆ 4ನೇ ಶಿಬಿರ ನಡೆಯಲಿದೆ. ಫ್ಯಾಮಿಲಿ ಬ್ಯಾಚ್ ಮತ್ತು ಗ್ರೂಪ್ ಡಿಸೌಂಟ್ ಆಫರ್ ಇದ್ದು, ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಪುತ್ತೂರು ಅಕ್ವಾಟಿಕ್ ಕ್ಲಬ್ (PAC) ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾಲ್ಕು ವರ್ಷಗಳ ಮೇಲ್ಪಟ್ಟು ಬ್ಯಾಚ್ ವೈಸ್ ಈಜು ತರಬೇತಿ ನೀಡಲಾಗುತ್ತದೆ. ಬೆಳಗ್ಗೆ 5.30 ರಿಂದ 6.15ರ ವರೆಗೆ, 6.30 ರಿಂದ 7.15ರ ವರೆಗೆ, 7.30 ರಿಂದ 8.15ರ ವರೆಗೆ, 8.30 ರಿಂದ 9.15ರ ವರೆಗೆ ನಡೆಯಲಿದೆ. ಸಂಜೆ 3.30 ರಿಂದ 4.15ರ ವರೆಗೆ, 4.30 ರಿಂದ 5.15ರ ವರೆಗೆ, ಮಕ್ಕಳು ಮತ್ತು ಮಹಿಳೆಯರಿಗೆ 5.30 ರಿಂದ 6.15ರ ವರೆಗೆ ಈಜು ತರಬೇತಿ ನಡೆಯಲಿದೆ. 6.30 ರಿಂದ 7.15ರ ವರೆಗೆ, 7.30 ರಿಂದ 8.15ರ ವರೆಗೆ ತರಬೇತಿ ನೀಡಲಾಗುತ್ತದೆ.
ಅಲ್ಲದೆ ಪ್ರಮುಖ ತರಬೇತುದಾರರಿಂದ ವೈಯಕ್ತಿಕ ಈಜು ತರಬೇತಿಯ ಸೌಲಭ್ಯವೂ ಲಭ್ಯವಿದೆ.
ಬಾಲವನದ ಪುತ್ತೂರು ಅಕ್ವಾಟಿಕ್ ಈಜು ಕ್ಲಬ್ ನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಭಾರತೀಯ ನೌಕಾಪಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗದಲ್ಲಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಹೆಸರು ನೋಂದಾಯಿಸಿ
ಈಜು ಆರೋಗ್ಯಕ್ಕೆ ಉತ್ತಮವಾಗಿರುವುದರಿಂದ ಶಿಬಿರದಲ್ಲಿ ಪಾಲ್ಗೊಂಡು ಈಜು ಕಲಿಯುವ ಆಸಕ್ತರಿಗೆ ಇದು ಸುವರ್ಣಾವಕಾಶವಾಗಿದ್ದು, ಕೂಡಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳಿ. ಮಾಹಿತಿಗಾಗಿ ತರಬೇತುದಾರರನ್ನೇ ನೇರವಾಗಿ ಸಂಪರ್ಕಿಸಿ: 7899583697, 9743702470, 9741504834, 9108464327
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized11 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ18 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















