ಬಿಗ್ ನ್ಯೂಸ್
M.D. Sameer-ಧರ್ಮಸ್ಥಳ ಪ್ರಕರಣ: ‘ಎಐ’ ಬಳಸಿ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ಯೂಟ್ಯೂಬ್‌ನಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಆರೋಪದಡಿ ಎಂ.ಡಿ. ಸಮೀರ್ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಬೆಂಗಳೂರು, ಏ. 2: ಧರ್ಮಸ್ಥಳದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ಯೂಟ್ಯೂಬ್‌ನಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಆರೋಪದಡಿ ಎಂ.ಡಿ. ಸಮೀರ್ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ಸದ್ಯ ನಡೆಯುತ್ತಿರುವ ತನಿಖೆಗೆ ತಾತ್ಕಾಲಿಕ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.
ಏನಿದು ಆರೋಪ?:
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಆರೋಪಿ ಸಮೀರ್, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕರಣದ ಕುರಿತು ಸುಳ್ಳು ಮಾಹಿತಿಗಳನ್ನು ಹರಡಿದ್ದಾನೆ. ಇದು ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದಲ್ಲದೆ, ಸಮಾಜದಲ್ಲಿ ದ್ವೇಷದ ವಾತಾವರಣ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಯಾವುದೇ ಪೂರ್ವಾನುಮತಿಯಿಲ್ಲದೆ ಶವಗಳ ಹಾಗೂ ಅಂತ್ಯಕ್ರಿಯೆಯ ಭೀಕರ ದೃಶ್ಯಗಳನ್ನು ಪ್ರಕಟಿಸಿದ್ದು, ಇದು ಸಾಕ್ಷಿದಾರರ ರಕ್ಷಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿ ಎಂ.ಡಿ. ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 240 (ಸುಳ್ಳು ಮಾಹಿತಿ ನೀಡುವುದು), 192 (ಗಲಭೆಗೆ ಪ್ರಚೋದನೆ) ಮತ್ತು 353 (1)(ಬಿ) (ಸಾರ್ವಜನಿಕ ನೆಮ್ಮದಿ ಕದಡುವಿಕೆ) ಅಡಿಯಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಸದ್ಯ ಹೈಕೋರ್ಟ್ ಈ ಪ್ರಕರಣಗಳ ತನಿಖೆಗೆ ತಡೆ ನೀಡಿದೆ.
ಅಂತರ ರಾಜ್ಯ
ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.
‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.
ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.
ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.
ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.
ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.
ಬಿಗ್ ನ್ಯೂಸ್
Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.
ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.
ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.
ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.
ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.
‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.
-
Uncategorized24 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized11 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ6 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















