ಕಾರ್ಯಕ್ರಮಗಳು
Puttur-ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ಉಚಿತ ಸಂಸ್ಕಾರ ಬೇಸಿಗೆ ಶಿಬಿರ “ಮಕ್ಕಳ ಕಲರವ”
ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ, ಪಾಂಗಳಾಯಿ ಅರಸು ಮುಂಡಿತ್ತಾಯ ಇದರ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪ ಪ್ರಜ್ವಲನೆಗೈದು ಕಾರ್ಯಕ್ರಮ ಉದ್ಘಾಟಿಸಿ ಗಣೇಶ ಭಟ್ ಇವರು ಮಾತನಾಡಿ ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿ ನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸಿ ಪ್ರಾಣಿ ದಯೆ ತೋರುವಂತೆ ಕರೆ ನೀಡಿದರು.
ಪುತ್ತೂರು: ಹಲವಾರು ವರ್ಷಗಳಿಂದ ನೂರಾರು ಬೀದಿ ಶ್ವಾನಗಳಿಗೆ ಪ್ರತಿದಿನ ತನ್ನ ಸ್ವಂತ ಖರ್ಚಿನಲ್ಲಿ ಆಹಾರವನ್ನು ನೀಡುತ್ತಿರುವುದು ಮಾತ್ರವಲ್ಲದೆ, ಸಕಾಲದಲ್ಲಿ ಸಂತಾನ ಹರಣ ಚಿಕಿತ್ಸೆಯನ್ನು ಮಾಡಿಸಿ ಅವುಗಳ ಸಂಖ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದಾಗಿ ಗಣೇಶ ಭಟ್ ಕೇರ ಖಂಡಿಗ ಇವರು ಹೇಳಿದರು.
ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರಿನ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ, ಪಾಂಗಳಾಯಿ ಅರಸು ಮುಂಡಿತ್ತಾಯ ಇದರ ವಠಾರದಲ್ಲಿ ನಡೆದ ಮೊದಲ ದಿನದ ‘ಮಕ್ಕಳ ಕಲರವ’ ಬೇಸಿಗೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪ ಪ್ರಜ್ವಲನೆಗೈದು ಕಾರ್ಯಕ್ರಮ ಉದ್ಘಾಟಿಸಿ ಗಣೇಶ ಭಟ್ ಇವರು ಮಾತನಾಡಿ ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿ ನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸಿ ಪ್ರಾಣಿ ದಯೆ ತೋರುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದೇವಾಲಯ ಸಂವರ್ಧನಾ ಸಮಿತಿಯ ಜಿಲ್ಲಾಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಇವರು ಮಾತನಾಡುತ್ತಾ, ಧಾರ್ಮಿಕ ಶಿಕ್ಷಣ ತರಗತಿಗಳು ಪ್ರಾರಂಭವಾದ ಬಗೆ ಹಾಗೂ ಅದು ಈ ವರೆಗೆ ನಡೆದು ಬಂದ ದಾರಿಯನ್ನು ವಿವರಿಸಿ ಶಿಬಿರಾರ್ಥಿಗಳಿಗೆಲ್ಲ ಶುಭ ಕೋರಿದರು.
ಮಕ್ಕಳಾದ ಗರಿಮಾ ಮತ್ತು ತಂಡದವರು ಪ್ರಾರ್ಥಿಸಿದರು. ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಇದರ ಸಂಚಾಲಕರಾದ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ರಶ್ಮಿಯವರು ಉದ್ಘಾಟಕರನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು. ಪಾಂಗಳಾಯಿ ದೈವಸ್ಥಾನದ ಅಧ್ಯಕ್ಷರಾದ ಗೋಪಾಲ ನಾಯಕ್ ಅವರು ಶುಭ ಹಾರೈಸಿದರು. ಗಣೇಶ ಭಟ್ ಅವರ ಧರ್ಮಪತ್ನಿ ಪ್ರೀತಿ ಸುಧಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದೂ ಧಾರ್ಮಿಕ ಶಿಕ್ಷಣದ ಪುಸ್ತಕ ಸಮಿತಿಯ ನಿರ್ವಾಹಕರಾದ ಶಂಕರಿ ಶರ್ಮ ವಂದಿಸಿದರು. ಪುತ್ತೂರು ನಗರಸಭೆಯ ಮಾಜಿ ಉಪಾಧ್ಯಕ್ಷರಾದ ವಿನಯ ಭಂಡಾರಿ ಹಾಗೂ ದೈವಸ್ಥಾನದ ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಬೋಧಕರಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಡಾ. ವಿಜಯ ಸರಸ್ವತಿ, ಪ್ರಭಾವತಿ, ಸುಧಾ ಹೆಬ್ಬಾರ್, ಶಂಕರಿ ಶರ್ಮ ಹಾಗೂ ನಿರ್ವಾಹಕರಾಗಿ ಪ್ರತಿಮಾ ಸಂಪತ್, ರಶ್ಮಿ ಉಮಾನಾಥ್ ಮತ್ತು ವಿನುತ, ಕ್ಷಮಾ ಸಂತೋಷ್ ಮುಂತಾದವರುಸಹಕರಿಸಿದರು. ಮಾವಿನ ಎಲೆಯಿಂದ ವಿಶೇಷ ತೋರಣ, ಮಕ್ಕಳಿಂದ ಸರಳವಾಗಿ ಗಣಪತಿ ಪೂಜೆ, ದಿನನಿತ್ಯ ಪಠಿಸುವ ಶ್ಲೋಕಗಳು, ಆಟ ಇತ್ಯಾದಿಗಳನ್ನು ಎಲ್ಲರುಸೇರಿ ನಡೆಸಿಕೊಟ್ಟರು. ಸುಮಾರು 185ಮಕ್ಕಳು ಹಾಗೂ ಪೋಷಕರು ಪಾಲ್ಗೊಂಡ ಮೊದಲ ದಿನದ ಶಿಬಿರವು ಅತ್ಯಂತ ಸಂಭ್ರಮದಿಂದ ನಡೆಯುತ್ತಿದೆ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
-
Uncategorized24 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized12 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ6 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















