ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು […]" /> ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು […]"> Jarkiholi-ಕಾಲ್ಸಂಕ ಆಸರೆಯಾಗಿರುವ ಬೆಳ್ತಂಗಡಿಯ ದಡ್ಡುಗೆ PWD ಸಚಿವ ಜಾರಕಿಹೊಳಿ ಖುದ್ದು ಭೇಟಿ - Nikhara News | Kannada News Website
Connect with us

ಸ್ಥಳೀಯ

Jarkiholi-ಕಾಲ್ಸಂಕ ಆಸರೆಯಾಗಿರುವ ಬೆಳ್ತಂಗಡಿಯ ದಡ್ಡುಗೆ PWD ಸಚಿವ ಜಾರಕಿಹೊಳಿ ಖುದ್ದು ಭೇಟಿ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು ಪರಿಸರದ ನಿವಾಸಿಗಳು ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಜಾಕೆಡಿಯಿಂದ ದಡ್ಡು ಮೂಲಕ ಹರಿವ ನದಿಯನ್ನು ದಾಟಿ ಹೋಗಬೇಕಾಗುತ್ತದೆ. ಮರದ ತಾತ್ಕಾಲಿಕ ಕಾಲು ಸಂಕ ಇದ್ದರೂ ಮಳೆಗಾಲದಲ್ಲಿ ಅದರಲ್ಲಿ ನಡೆದು ಹೋಗೋದು ಅಪಾಯಕಾರಿ.

Ad Widget

Ad Widget <> Ad Widget

ಹಾಗಾಗಿ ಇದರಲ್ಲಿ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಹೋಗಲು ಭಯಪಡುತ್ತಾರೆ. ಇಲ್ಲಿ ಕಿರು ಸೇತುವೆಯ ಬಗ್ಗೆ ಸಚಿವರಲ್ಲಿ ಸ್ಥಳೀಯರು ಬೇಡಿಕೆಯನ್ನು ಇಟ್ಟರು ಸಚಿವರು ಪೂರಕವಾಗಿ ಸ್ಪಂದಿಸಿದರು.

ಖುದ್ದು ಲೋಕೋಪಯೋಗಿ ಸಚಿವರೇ ಬಂದು ಆ ಪರಿಸರದ ಸ್ಥಿತಿಯನ್ನು ಕಣ್ಣಾರೆ ಕಂಡರು.

Ad Widget

Ad Widget

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ,ಪ್ರದೀಪ್ ಕೆ ಸಿ, ಅಶ್ರಫ್ ನೆರಿಯ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Ad Widget
Click to comment

Leave a Reply

ಅಪರಾಧ

Excise raid-ಬಾಳ್ತಿಲ, ಮೆಲ್ಕಾರ್‌ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.

Ad Widget

Ad Widget <> Ad Widget

ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.

Ad Widget

Ad Widget

ಜಿಲ್ಲೆಯಲ್ಲಿ ಅಕ್ರಮ ಮದ್ಯ ದಾಸ್ತಾನು ಹಾಗೂ ಸಾಗಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್‌ ಸಹಿತ ಹಲವು ಸೇವೆಗಳು

Published

on

Ad Widget

Ad Widget

Ad Widget

Ad Widget

ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ ಎಂದು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ನಿರ್ಮಾಣ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಪಯಣ ನಡೆಸಿರುವ ಸಂಸ್ಥೆಯು ಆರಂಭದಲ್ಲಿ ಪಡೀಲು ಬಾಳಪ್ಪ ಕಾಂಪ್ಲೆಕ್ಸ್, ಬೊಳುವಾರು, ಕಬಕ ಹಾಗೂ ಸರ್ಕಾರಿ ನೌಕರರ ಕಟ್ಟಡದಲ್ಲಿ ಕಚೇರಿ ಹೊಂದಿ ಕಾರ್ಯಾಚರಿಸುತ್ತಿತ್ತು. ಇದೀಗ ಸ್ವಂತ ಕಟ್ಟಡದಲ್ಲಿ ಸಂಸ್ಥೆಯ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರ. ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

Ad Widget

Ad Widget <> Ad Widget

ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ
ನೂತನ ವಾಣಿಜ್ಯ ಸೌಧದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಿಕ್ಷಣ ಕರ್ಮಯೋಗಿ ಪದ್ಮಶ್ರೀ ಡಾ. ಹರೇಕಳ ಹಾಜಬ್ಬ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಮಾಸ್ಟರ್ ಪ್ಲಾನರಿ ಸಂಸ್ಥೆಯ ಎಸ್.ಕೆ. ಆನಂದ ಕುಮಾರ್, ಹಿರಿಯ ಉದ್ಯಮಿ ಮಂಜುನಾಥ್ ನಾಯಕ್, ಐಶ್ವರ್ಯ ಕನ್‌ಸ್ಟ್ರಕ್ಷನ್‌ನ ರಘುರಾಮ ಭಟ್ ಉಪ್ಪಂಗಳ, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೋ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಎ.ಬಿ. ಹಾಗೂ ಹೋಟೆಲ್ ಅಶ್ವಿನಿ ಮಾಲಕ ಕರುಣಾಕರ ರೈ ದೇರ್ಲ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಗೋಪಾಲಕೃಷ್ಣ ಭಟ್ ವಿವರಿಸಿದರು.

‘ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್’ ಪ್ರಮುಖ ಆಕರ್ಷಣೆ
ನಾಲ್ಕು ಅಂತಸ್ತಿನ ಈ ವಾಣಿಜ್ಯ ಸೌಧದ ನೆಲಹಂತ ಹಾಗೂ ಮೊದಲ ಮಹಡಿಯಲ್ಲಿ ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್ ಕಾರ್ಯಾಚರಿಸಲಿದೆ. ಇಲ್ಲಿ ದ್ವಾರಕಾ ಹಾಲಿನ ಉತ್ಪನ್ನಗಳು, ತರಕಾರಿ, ದಿನಸಿ ಸಾಮಗ್ರಿಗಳು, ಹಣ್ಣು, ಚಾಟ್ಸ್, ಜ್ಯೂಸ್, ಕೂಲ್‌ಝೋನ್, ಬೇಕರಿ ತಿನಿಸುಗಳು, ಸ್ಟೇಶನರಿ ಸೇರಿದಂತೆ ಗ್ರಾಹಕರ ನಿತ್ಯ ಬಳಕೆಯ ನೂರಾರು ವಸ್ತುಗಳು ಮಿತದರದಲ್ಲಿ ಲಭ್ಯವಾಗಲಿವೆ.

Ad Widget

Ad Widget

ಎರಡನೇ ಮಹಡಿಯಲ್ಲಿ ಹಾರ್ಡ್‌ವೇರ್, ಸ್ಯಾನಿಟರಿ, ಟೈಲ್ಸ್, ಪೇಂಟ್ಸ್, ಯುನಿಸೆಕ್ಸ್ ಸಲೂನ್, ಡೆಂಟಲ್ ಕ್ಲಿನಿಕ್, ಸಾಫ್ಟ್‌ವೇರ್ ಸಂಸ್ಥೆ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿ ಹಾಗೂ ಟೆಕ್ಸ್‌ಟೈಲ್ಸ್ ಮಳಿಗೆಗಳು ಕಾರ್ಯನಿರ್ವಹಿಸಲಿವೆ.

ಮೂರನೇ ಮಹಡಿಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಪ್ರಧಾನ ಕಚೇರಿ ಇರಲಿದ್ದು, ನಾಲ್ಕನೇ ಮಹಡಿಯಲ್ಲಿ ಸುಮಾರು 200 ಮಂದಿ ಆಸೀನರಾಗಬಹುದಾದ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ.

ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕಟ್ಟಡ
ಗ್ರಾಹಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 20 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಟ್ಟಡದಲ್ಲಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!