ರಾಜಕೀಯ
Ashok Rai-ಎರಡು ವರ್ಷದಲ್ಲಿ ಕೋಡಿಂಬಾಡಿ-ಬೆಳ್ಳಿಪ್ಪಾಡಿ ಗ್ರಾಮಕ್ಕೆ ಒಟ್ಟು 11 ಕೋಟಿ 7 ಲಕ್ಷ ಅನುದಾನ; ನನ್ನ ತವರು ಗ್ರಾಮಕ್ಕೆ ಪ್ರೀತಿಯ ಉಡುಗೋರೆ ನೀಡಿದ್ದೇನೆ- ಶಾಸಕ ಅಶೋಕ್ ರೈ
ನಾನು ನನ್ನ ತವರು ಗ್ರಾಮಕ್ಕೆ ಉಳಿದ ಗ್ರಾಮಕ್ಕಿಂತ ಸ್ವಲ್ಪ ಹೆಚ್ಚು ಅನುದಾನವನ್ನು ನೀಡುವ ಮೂಲಕ ನನ್ನ ಗ್ರಾಮಸ್ಥರಿಗೆ ಪ್ರೀತಿಯ ಉಡುಗೋರೆಯನ್ನು ನೀಡಿದ ತೃಪ್ತಿ ಇದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವುದಾಗಿ ಶಾಸಕ ಅಶೋಕ್ ರೈ ಹೇಳಿದರು. ಅವರು ಎ.4 ರಂದು ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮದ 23 ವಿವಿಧ ರಸ್ತೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪುತ್ತೂರು: ತನ್ನ ಗ್ರಾಮಕ್ಕೆ ಶಾಸಕರು ಎಷ್ಟು ಅನುದಾನ ನೀಡಿರಬಹುದು ಎಂಬ ಕುತೂಹಲ ಕೆಲವರಲ್ಲಿತ್ತು, ನಾನು ನನ್ನ ತವರು ಗ್ರಾಮಕ್ಕೆ ಉಳಿದ ಗ್ರಾಮಕ್ಕಿಂತ ಸ್ವಲ್ಪ ಹೆಚ್ಚು ಅನುದಾನವನ್ನು ನೀಡುವ ಮೂಲಕ ನನ್ನ ಗ್ರಾಮಸ್ಥರಿಗೆ ಪ್ರೀತಿಯ ಉಡುಗೋರೆಯನ್ನು ನೀಡಿದ ತೃಪ್ತಿ ಇದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವುದಾಗಿ ಶಾಸಕ ಅಶೋಕ್ ರೈ ಹೇಳಿದರು.
ಅವರು ಎ.4 ರಂದು ಕೋಡಿಂಬಾಡಿ ಹಾಗೂ ಬೆಳ್ಳಿಪ್ಪಾಡಿ ಗ್ರಾಮದ 23 ವಿವಿಧ ರಸ್ತೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಅನುದಾನವನ್ನು ತನ್ನ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಸಮಪ್ರಮಾಣದಲ್ಲಿ ಹಂಚಿಕೆ ಮಾಡಿದ್ದೇನೆ, ತಾರತಮ್ಯ ಮಾಡಿಲ್ಲ, ರಾಜಕೀಯ ಮಾಡಿಲ್ಲ ಇದರ ನಡುವೆ ತನ್ನ ಸ್ವಂತ ಗ್ರಾಮಕ್ಕೆ ಒಂದೆರಡು ಕೋಟಿ ಹೆಚ್ಚು ಅನುದಾನನವನ್ನು ನೀಡಿದ್ದೇನೆ ಎಂದು ಹೇಳಿದರು. ತವರು ಗ್ರಾಮಕ್ಕೆ ಸ್ವಲ್ಪ ಹೆಚ್ಚು ಕೊಡಬೇಕಾಗಿದ್ದೇ ಇದು ನನ್ನ ಬದ್ದತೆ ಕೂಡಾ ಎಂದು ಶಾಸಕರು ಹೇಳಿದರು. ಇದುವರೆಗೂ ನನ್ನ ಗ್ರಾಮದಲ್ಲಿ ಹಲವು ರಸ್ತೆಗಳಿಗೆ ಇನ್ನೂ ಕಾಂಕ್ರೀಟ್ ನೀಡದೇ ಇರುವ ಕಾರಣ ಗ್ರಾಮದ ಕಟ್ಟಕಡೇಯ ರಸ್ತೆಯನ್ನು ಹುಡುಕಿ ಅನುದಾನವನ್ನು ನೀಡಿದ್ದೇನೆ. ಶಾಸಕರ ತವರು ಗ್ರಾಮಸ್ಥರು ಅರ್ಜಿ ಹಾಕದೇ ಇದ್ದರೂ ಎಲ್ಲಾ ರಸ್ತೆಗಳ ಅವಸ್ಥೆಯನ್ನು ತಿಳಿದಿರುವ ನಾನು ಅನುದಾನವನ್ನು ನೀಡಿದ್ದೇನೆ ಗ್ರಾಮದ ಜನರ ಮೇಲೆ ನನ್ನ ಋಣ ಇದೆ ಅದೇ ಋಣವನ್ನು ಗ್ರಾಮಸ್ಥರು ಮುಂದಿನ ಚುನಾವಣೆಯಲ್ಲಿ ತೀರಿಸುತ್ತಾರೆ ಎಂಬ ನಂಬಿಕೆಯೂ ಇದೆ ಎಂದು ಹೇಳಿದರು.
ವೋಟು ಕಡಿಮೆ ಬಿದ್ದರೂ ಅನುದಾನ ನೀಡಿದ್ದೇನೆ
ಬೆಳ್ಳಿಪ್ಪಾಡಿ ಹಾಗೂ ಕೋಡಿಂಬಾಡಿ ಗ್ರಾಮದಲ್ಲಿ ನನಗೆ ಬಿದ್ದ ಮತಗಳ ಸಂಖ್ಯೆ ಕಡಿಮೆ ಇತ್ತು ಯಾವುದೋ ಕಾರಣಕ್ಕೆ ಇದು ಆಗಿರಬಹುದು ಆದರೆ ನಾನು ಮಾತ್ರ ವೋಟು ಬಿದ್ದಿಲ್ಲ ಎಂದು ಅನುದಾನ ಕಡಿಮೆ ಮಾಡಿಲ್ಲ. ನಾನು ಹೋದ ಕಡೆಯಲ್ಲಿ ನನಗೆ ಈ ಎರಡೂ ಗ್ರಾಮದಲ್ಲಿ ಜನರಿಂದ ಬೆಂಬಲ ವ್ಯಕ್ತವಾಗಿದೆ ಮುಂದೆ ಅವರು ನನಗೆ ಆಶೀರ್ವಾದ ಮಾಡಿಯೇ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಬಾರ್ತಿಕುಮೇರಿನ ರಸ್ತೆ ಅಭಿವೃದ್ದಿಗೆ ಒಟ್ಟು 15 ಲಕ್ಷ ಅನುದಾನವನ್ನು ನೀಡಿದ್ದೇನೆ. ಈ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಅದೇ ರೀತಿ ಗ್ರಾಮದ ಬಹುತೇಕ ಕಡೆಗಳಿಗೆ ಇದೇ ಮೊದಲು ಎಂಬಂತೆ ರಸ್ತೆಗೆ ಅನುದಾನ ನೀಡಲಾಗಿದೆ. ಇದುವರೆಗೆ ಈ ರಸ್ತೆಗೆ ಯಾಕೆ ಅನುದಾನ ನೀಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಎಲ್ಲಿಯವನಿಗೋ ವೋಟು ಹಾಕುವ ಬದಲು ನಿಮ್ಮದೇ ಗ್ರಾಮದವನಾದ ನನಗೆ ಆಶೀರ್ವಾದ ಮಾಡಿ ಎಂದು ಶಾಸಕರು ಮನವಿ ಮಾಡಿದರು.
ಗ್ರಾಮಸ್ಥರಿಂದಲೇ ಶಿಲಾನ್ಯಾಸ
ಸಾಧಾರಣವಾಗಿ ಶಿಲಾನ್ಯಾಸವನ್ನು ಶಾಸಕರುಗಳು ಮಾಡುತ್ತಾರೆ ಆದರೆ ಅಶೋಕ್ ರೈ ಅವರು ಗ್ರಾಮಸ್ಥರ ಮೂಲಕವೇ ಶಿಲಾನ್ಯಾಸ ಮಾಡಿಸಿದ್ದಾರೆ. ತೆಂಗಿನ ಕಾಯಿ ಒಡೆಯುವುದು, ಗುದ್ದಲಿಪೂಜೆ, ದೀಪ ಪ್ರಜ್ವಲನೆ, ಟೇಪ್ ಕತ್ತರಿಸುವುದು ಎಲ್ಲವೂ ಗ್ರಾಮಸ್ಥರಿಂದ ಅಥವಾ ಫಲಾನುಭವಿಗಳಿಂದ ಮಾಡಿಸಿದ್ದಾರೆ. ಗುದ್ದಲಿಪೂಜೆ ಮಹಿಳೆಯರಿಗೇ ಮೀಸಲಿಡಲಾಗಿದ್ದು ವಿಶೇಷವಾಗಿತ್ತು. ಹೋದ ಕಡೆಯಲ್ಲೆಲ್ಲಾ ಜನರು ಪ್ರೀತಿಯಿಂದ ಎಳನೀರು ನೀಡಿದ್ದು ಕಂಡು ಬಂತು. ಸುಡುಬಿಸಿಲಿನ ನಡುವೆ ಗ್ರಾಮದ ಫಲಾನುಭವಿಗಳ ಸಂಖ್ಯೆಯಲ್ಲಿ ಕೊರತೆ ಕಾಣಲಿಲ್ಲ.
ವಲಯಾಧ್ಯಕ್ಷ , ಬೂತ್ ಅಧ್ಯಕ್ಷರೇ ಸ್ವಾಗತಿಸಬೇಕು
ಗ್ರಾಮದ ಕಾಂಗ್ರೆಸ್ ವಲಯಾಧ್ಯಕ್ಷ ಮತ್ತು ಬೂತ್ ಅಧ್ಯಕ್ಷ ಜೊತೆಗೆ ಕಾರ್ಯಕರ್ತರಿಗೆ ಶಿಲಾನ್ಯಾಸ ಕಾರ್ಯದಲ್ಲಿ ಪ್ರಮುಖ ಪಾತ್ರವನ್ನು ನೀಡಲಾಗಿತ್ತು. ಬೂತ್ ಅರ್ಧಯಕ್ಷರು ಕಡ್ಡಾಯವಾಗಿ ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಬೇಕಿತ್ತು. ಪಕ್ಷದ ಬೆಳವಣಿಗೆಗೆ ಸಹಕಾರ ನೀಡುತ್ತಿರುವ ನವಲಯ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮ್ತತು ಕಾರ್ಯಕರ್ತರನ್ನು ಶಾಸಕರು ಜೊತೆಗೂಡಿಸಿಕೊಂಡು ಹೋಗಿದ್ದರು. ಕಾರ್ಯಕ್ರಮದಲ್ಲಿ ಪಕ್ಷದ ಹುದ್ದೆಯಲ್ಲಿದ್ದವರು ಕಡ್ಡಾಯವಾಗಿ ಭಾಗವಹಿಸಬೇಕಿತ್ತು.
ಏನ್ ದಾದ ಅನ್ಯಾಯಮಲ್ತೆ ಪನ್ಲೆ ತೂಕ…
ನಾನು ನಿಮಗೆ ಏನು ಅನ್ಯಾಯ ಮಾಡಿದ್ದೇನೆ? ಕಳೆದ ಚುನಾವಣೆಯಲ್ಲಿ ಯಾಕೆ ಈ ಭಾಗದಲ್ಲಿ ವೋಟು ಕಮ್ಮಿಯಾಗಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾನು ಕೋಡಿಂಬಾಡಿ, ಬೆಳ್ಳಿಪ್ಪಾಡಿಯ ಯಾರಿಗೂ ಅನ್ಯಾಯ ಮಾಡಿಲ್ಲ. ಇಲ್ಲಿನ ಪ್ರತೀಯೊಬ್ಬರ ಮನೆಯಲ್ಲೂ ತನ್ನ ತಂದೆ ಯ ವಿದ್ಯಾರ್ಥಿಗಳಿದ್ದಾರೆ. ತಂದೆಯ ಮೇಲಿನ ಪ್ರೀತಿಯಿಂದ ಅಥವಾ ಗುರುಗಳ ಮೇಲಿನ ಪ್ರೀತಿಯಿಂದ ನನಗೆ ಮುಂದಿನ ದಿನಗಳಲ್ಲಿ ಆಶೀರ್ವಾದ ಮಾಡಿ ಎಂದು ಗದ್ಗಧಿತರಾದರು ಶಾಸಕರು. ಗ್ರಾಮಸ್ಥರ ಅಕ್ರಮ ಸಕ್ರಮ , 94 ಸಿ ಮಾಡಿಸಿಕೊಟ್ಟಿದ್ದೇನೆ, ಇಲ್ಲಿನವರಿಗೆ ನನ್ನಿಂದಾದ ಎಲ್ಲಾ ಸಹಾಯವನ್ನು ಮಾಡಿದ್ದೇನೆ. ನಾನು ತಪ್ಪಿದರೆ ತಿದ್ದುವ ಕೆಲಸವನ್ನು ನನ್ನ ಗ್ರಾಮಸ್ಥರೇ ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು.
ಅರ್ಜಿ ಹಾಕದಿದ್ದರೂ ಅನುದಾನ ಇಟ್ಟಿದ್ದಾರೆ: ಜಯಪ್ರಕಾಶ್ ಬದಿನಾರ್
ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಸ್ಥರು ನಮ್ಮ ರಸ್ತೆಗೆ ಅನುದಾನ ಕೊಡಿ ಎಂದು ಶಾಸಕರಲ್ಲಿ ಅರ್ಜಿ ಹಾಕದೇ ಇದ್ದರೂ ಶಾಸಕರು ಅನುದಾನವನ್ನು ನೀಡಿದ್ದಾರೆ. ಸ್ವಂತ ಗ್ರಾಮ ಎಂಬ ವಿಶೇಷ ಪರಿಕಲ್ಪನೆಯಿಂದ ಅವರು ಅನುದಾನ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೂಡಾ ಇದಕ್ಕೆ ಬೆಂಬಲವನ್ನು ನೀಡುವ ಮೂಲಕ ಯಾವುದೇ ರಾಜಕೀಯ ಮಾಡದೆ ಅನುದಾನವನ್ನು ಎಲ್ಲಾ ಕಡೆ ಡಂಪ್ ಮಾಡಲಾಗಿದೆ ಎಂದು ಕೋಡಿಂಬಾಡಿ ಗ್ರಾಪಂ ನಿಕಟಪೂರ್ವ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್ ಹೇಳಿದರು. ಶಾಸಕರು ಮಾಡಿದ ಅಭಿವೃದ್ದಿ ಕಾರ್ಯಕ್ಕೆ ಗ್ರಾಮಸ್ಥರಾದ ನಾವು ಪೂರ್ಣ ಬೆಂಬಲವನ್ನು ನೀಡುವುದರ ಜೊತೆಗೆ ಮುಂದಿನ ಗ್ರಾಪಂ, ತಾಪಂ, ಜಿಪಂ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ನಮ್ಮ ಶಾಸಕರು ನಮ್ಮ ಗ್ರಾಮದ ಹೆಮ್ಮೆ: ಮುರಳೀಧರ್ ರೈ
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಮಾತನಾಡಿ ನಮ್ಮ ಗ್ರಾಮದ ಅಶೋಕ್ ರೈ ಶಾಸಕರಾಗಿದ್ದು ನಮಗೆಲ್ಲ ಹೆಮ್ಮೆ, ನಮ್ಮ ಗ್ರಾಮದ ಹೆಸರನ್ನು ರಾಜ್ಯದಲ್ಲಿ ಸುದ್ದಿ ಮಾಡಿದ್ದಾರೆ, ನಮ್ಮ ಗ್ರಾಮಕ್ಕೆ ಅತೀ ಹೆಚ್ಚು ಅನುದಾನವನ್ನು ನೀಡುವ ಮೂಲಕ ಮಾತೃಗುಣ ವ್ಯಕ್ತಪಡಿಸಿದ್ದಾರೆ. ಮುಂದೆಯೂ ಅವರು ಪುತ್ತೂರಿನಲ್ಲಿ ಶಾಸಕರಾಗಿಯೇ ಇರಬೇಕು ಎಂದು ಹೇಳಿದರು. ಶಾಸಕರು ಮಾಡಿದ ಅಭಿವೃದ್ದಿ ಕೆಲಸವನ್ನು ಮನೆ ಮನೆಗೆ ತಿಳಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಕಾರ್ಯಕರ್ತ ಸಿಲ್ವಸ್ಟರ್ ವೇಗಸ್ ರವರ ಮನೆಯಲ್ಲಿ ಮಧ್ಯಾಹ್ನದ ಭೋಜನ ನಡೆಯಿತು.
ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್, ಪಂಚ ಗ್ಯಾರಂಟಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ,ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ, ವಲಯ ಅಧ್ಯಕ್ಷ ಮೋನಪ್ಪ ಗೌಡ, ಶಿವಪ್ರಸಾದ್ ರೈ, ಕೋಡಿಂಬಾಡಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಮಲ್ಲಿಕಾ ಅಶೋಕ್, ಗ್ರಾಪಂ ಸದಸ್ಯೆ ಗೀತಾ ಬಾಬುಮುಗೇರ, ಉಷಾ ಲಕ್ಷö್ಮಣ ಪೂಜಾರಿ,ಜಗನ್ನಾಥ ಶೆಟ್ಟಿ ನಡುಮನೆ,ಪುಷ್ಪಾ ಲೋಕಯ್ಯ ನಾಯ್ಕ, ಪೂರ್ಣಿಮಾ ಯತೀಶ್ ಶೆಟ್ಟಿ, ವಲಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಮಾನಿ, ಬೂತ್ ಅಧ್ಯಕ್ಷರುಗಳಾದ ಯತೀಶ್ ಶೆಟ್ಟಿ ಬರಮೇಲು, ಪ್ರಭಾಕರ ಸಾಮಾನಿ ಮಟಂತಬೆಟ್ಟು, ಪದ್ಮನಾಭ ಪಕ್ಕಳ, ಪದ್ಮನಾಭ ಶೆಟ್ಟಿ ರೆಂಜಾಜೆ, ಕೇಶವ ಭಂಡಾರಿ ಕೈಪಾ,ಪದ್ಮಪ್ಪ ಪೂಜಾರಿ ಪರನೀರು,ಸುಬ್ರಹ್ಮಣ್ಯ ಶೆಟ್ಟಿ ರೆಂಜಾಜೆಗುತ್ತು,ಅಶೋಕ ಪೂಜಾರಿ ಅಂಕರಡ್ಕ,ರಾಮಣ್ಣ ಗೌಡ ಕೋಡಿ,ಭಾಸ್ಕರ ಪೂಜಾರಿ ಕೋಡಿ,ಶ್ರೀಮತಿ ಪುಷ್ಪ ಶೀನಪ್ಪ ಪೂಜಾರಿ ಕೋಡಿ,ದೀವಾಕರ ಶೆಟ್ಟಿ ಕಾರ್ನೋಜಿ, ಮಮತಾ ನಾರಾಯಣ ನಾಯ್ಕ,ಶೇಖರ ಪೂಜಾರಿ ಡೆಕ್ಜಾಜೆ,ಸೀತಾರಾಮ ಶೆಟ್ಟಿ ಹೆಗ್ಹೆಹಿತ್ಲು,ಉಮೇಶ್ ಡೆಕ್ಕಾಜೆ,ಶಶಿಧರ ಪೂಜಾರಿ ಡೆಕ್ಕಾಜೆ,ಯಮುನಾ ಡೆಕ್ಕಾಜೆ,ಈಶ್ವರ ಪೂಜಾರಿ,ಕೊರಗಪ್ಪ ಗೌಡ ದೇವಸ್ಯ
ಗಿರಿಧರ ಗೌಡ ದೇವಸ್ಯ, ಶ್ರೀಮತಿ ಯಶೋದಾ ಕಾಂತಿಜಾಲು,ರಾಮಣ್ಣ ಗೌಡ,ಲಕ್ಷ÷್ಮಣ ಪೂಜಾರಿ ಕೋರ್ಯಜಯಂತಿ ದೇವದಾಸ್ ಗೌಡ, ಎಲ್ಯಣ್ಣ ಗೌಡ ಮೇಲುಹಿತ್ಲು, ಶ್ರೀನಿವಾಸ್ ನಾಯ್ಕ್ ದಾಸಕೋಡಿ, ಬಾಬು ನೆಕ್ಕರೆ, ಬಾಲಕೃಷ್ಣ ಶೆಟ್ಟಿ, ದಾಮೋದರ ಶೆಟ್ಟಿ, ಸಂತೋಷ್ ಗೌಡ, ದೇವದಾಸ್ ಗೌಡ ಪಿಲಿಗುಂಡ, ವಿದ್ಯಾಬಾಬು ಆಚಾರ್ಯ ಕೊಂಬಕೋಡಿ, ಯಮುನಾ ಪಿಲಿಗುಂಡ, ರುದೀಶ್ ಗೌಡ, ಹರೀಶ್ ರೈ, ದಿಲೀಪ್ ಶೆಟ್ಟಿ ಕರಾಯ, ಮೋನಪ್ಪ ಗೌಡ ಪಿಲಿಗುಂಡ, ಸಂತೋಷ್ ರೈ ಕದಿಕಂಡೆಗುತ್ತು, ಬಾಬು ಆಚಾರ್ಯ ಕೊಂಬಕೋಡಿ, ಕೊರಗಪ್ಪ ಗೌಡ ಪಿಲಿಗುಂಡ, ಜಯಾನಂದ ಗೌಡ ಪಿಲಿಗುಂಡ, ಆನಂದ, ಶಶಿಧರ್ ಕೃಷ್ಣಗಿರಿ, ಸುಬಾಸ್ ನಾಯ್ಕ್ ನೆಕ್ಕರಾಜೆ, ಶಂತರಾಮ ನಾಯಕ್, ಸೌಮ್ಯ ಶಿವಪ್ರಕಾಶ್ ಮೋನಡ್ಕ, ಸತೀಶ್ ನಾಯಕ್, ಚೇತನಕುಮಾರ್ ದೇವರಹಿತ್ಲು, ವಾಸು ಆಚಾರ್ಯ ಕೊಡಪಟ್ಯ, ಪ್ರೇಮಾ ಪದ್ಮಯ್ಯ ಪೂಜಾರಿ, ಚಂದನ್ ಗೌಡ ತೆಂಕಪಾಡಿ, ಕೀರ್ತಿಕುಮಾರ್, ರಾಜೇಂದ್ರ ಗೌಡ, ಶ್ರೀಧರ ಗೌಡ ಮಲ್‌ವೇಲು, ಮೋನಪ್ಪ ಶೆಟ್ಟಿ ಕಠಾರಶ್ರೀನಿವಾಸ್ ಶೆಟ್ಟಿ ಕಠಾರ, ಈಶ್ವರ ನಾಯ್ಕ,ಮೋನಪ್ಪ ಗೌಡ, ರಾಮಣ್ಣ ಗೌಡ, ದಯಾನಂದ ಗೌಡ, ಕೇಶವ ಗೌಡ, ಬಾಲಕೃಷಣ ಗೌಡ ಬಾರ್ತಿಕುಮೇರು, ಸುಬ್ರಹ್ಮಣ್ಯ ಗೌಡ, ವಿಶ್ವನಾಥ ಗೌಡ, ಬಾಲಚಂದ್ರ ಗೌಡ, ಬಾರ್ತಿಕುಮೇರ, ಆನಂದ ಗೌಡ ಬಾರ್ತಿಕುಮೇರು, ವಿಶ್ವನಾಥ ಗೌಡ ಬಾರ್ತಿಕುಮೇರು, ಶೇಖರ್ ಪೂಜಾರಿ ನಿಡ್ಯ, ಪ್ರೇಮಾ ಉಗ್ಗಪ್ಪ ಪೂಜಾರಿ, ಪ್ರಸಾದ್ ಪೂಜರಿ ಕೈಕಾಜೆ, ರೇವತಿ , ಉಮೇಶ್ ಪೂಜಾರಿ ಡೆಕ್ಕಾಜೆ, ಚೆನ್ನಮ್ಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
-
ಬಿಗ್ ನ್ಯೂಸ್23 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್24 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ನಿಧನ ವಾರ್ತೆ5 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ4 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ4 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ಸ್ಥಳೀಯ5 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ4 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಅಂತರ ರಾಜ್ಯ4 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!















