Connect with us

Uncategorized

ನಾಳೆ (ಏ 8 ) : SLV ಬುಕ್‌ ಹೌಸ್‌ ನ ಕುಶಾಲನಗರ ಶಾಖೆ ಲೋಕಾರ್ಪಣೆ : ಸೂಪರ್ ಮಾರ್ಕೆಟ್ ಅನುಭವ, ಪುಸ್ತಕ ಪ್ರೇಮಿಗಳಿಗೆ ಸ್ವರ್ಗ!

Published

on

Ad Widget

Ad Widget

Ad Widget

Ad Widget

ಕುಶಾಲನಗರ:  ಕರ್ನಾಟಕದ ಅತಿದೊಡ್ಡ ಪುಸ್ತಕ ಮಾರಾಟ ಮಳಿಗೆಗಳಲ್ಲೊಂದಾದ ‘ಎಸ್.ಎಲ್.ವಿ. ಬುಕ್ ಹೌಸ್’  ನ  ನೂತನ ಶಾಖೆಯು  ಕುಶಾಲನಗರದ ಬಿ.ಎಂ. ರಸ್ತೆಯ ಸರಕಾರಿ ಮಾದರಿ ಶಾಲಾ ಮುಂಭಾಗದಲ್ಲಿರುವ ಕೆನರಾ ಬ್ಯಾಂಕ್ ಕಾಂಪ್ಲೆಕ್ಸ್‌ನಲ್ಲಿ ಏಪ್ರಿಲ್ 8ರಂದು ಉದ್ಘಾಟನೆಯಾಗಲಿದೆ. ಬಂಟ್ವಾಳ ತಾಲೂಕಿನ ಇಡ್ಕಿದು ನಿವಾಸಿ  ಉದ್ಯಮಿ ದಿವಾಕರ ದಾಸ್ ನೇರ್ಲಾಜೆ ಅವರ ಮಾಲಕತ್ವದ ಈ ಸಂಸ್ಥೆ, ಪುಸ್ತಕ ಪ್ರೇಮಿಗಳಿಗೆ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಹೊಸ ಲೋಕವನ್ನೇ ಪರಿಚಯಿಸಲು ಅಣಿಯಾಗಿದೆ.

Ad Widget

Ad Widget

Ad Widget

Ad Widget

  ಶ್ರೀ ಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕರಾದ ವೆಂಕಟರಮಣ ಅಸ್ರಣ್ಣರವರು ದೀಪ ಪ್ರಜ್ವಲನೆಗೈದು  ಲೋಕಾರ್ಪಣೆಗೊಳಿಸಲಿದ್ದಾರೆ . ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡರವರು ಸಂಸ್ಥೆಯನ್ನು ಉದ್ಘಾಟಿಸಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಆಹ್ವಾನಿತರು ಮತ್ತು ಪುಸ್ತಕಪ್ರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಸೂಪರ್ ಮಾರ್ಕೆಟ್ ಅನುಭವ, ಪುಸ್ತಕ ಪ್ರೇಮಿಗಳಿಗೆ ಸ್ವರ್ಗ!

Ad Widget

Ad Widget <> Ad Widget

‘ಎಸ್.ಎಲ್.ವಿ. ಬುಕ್ ಹೌಸ್’ ಕೇವಲ ಒಂದು ಪುಸ್ತಕದಂಗಡಿಯಲ್ಲ, ಅದೊಂದು ಅನುಭವ! ಸಂಸ್ಥೆಯ ಮಾಲಕರಾದ ದಿವಾಕರದಾಸ್ ನೇರ್ಲಾಜೆ ಅವರು ತಿಳಿಸಿರುವಂತೆ, “ನಮ್ಮ ಯಾವುದೇ ಔಟ್‌ಲೆಟ್‌ಗಳನ್ನು ಗಮನಿಸಿದರೆ ಅದು ಸೂಪರ್‌ಮಾರ್ಕೆಟ್ ಮಾದರಿಯಲ್ಲಿ ಗ್ರಾಹಕಸ್ನೇಹಿಯಾಗಿರುತ್ತವೆ. ಸೂಪರ್ ಮಾರ್ಕೆಟ್ ರೀತಿಯಲ್ಲಿ ಗ್ರಾಹಕರು ಬಂದು ಅವರಿಗೆ ಬೇಕಿರುವ ವಸ್ತುಗಳನ್ನು ಅವರೇ ಆರಿಸಿ ಪಡೆದುಕೊಳ್ಳಬಹುದು.”

ನೂತನ ಮಳಿಗೆಯಲ್ಲಿ ಸ್ಟೇಷನರಿ ಐಟಂಗಳು, ಪಠ್ಯ ಪುಸ್ತಕಗಳು ಸೇರಿದಂತೆ ಸಾವಿರಾರು ಪುಸ್ತಕಗಳು ವಿಷಯವಾರು ಶೆಲ್ಫ್‌ಗಳಲ್ಲಿ ಅಚ್ಚುಕಟ್ಟಾಗಿ ಜೋಡಿಸಲ್ಪಟ್ಟಿವೆ. ಪ್ರತಿ ಕೌಂಟರ್ ಬಳಿಯಲ್ಲೂ ಸಹಾಯಕರು ಲಭ್ಯರಿದ್ದು, ಗ್ರಾಹಕರಿಗೆ ಅಗತ್ಯವಿರುವ ಸಹಾಯ ಮತ್ತು ಮಾರ್ಗದರ್ಶನ ನೀಡಲು ಸಿದ್ಧರಿರುತ್ತಾರೆ. ಅಷ್ಟೇ ಅಲ್ಲ, ಸಂಸ್ಥೆಯ ಎಲ್ಲಾ ಶೋರೂಂಗಳು ಹವಾನಿಯಂತ್ರಿತವಾಗಿದ್ದು, ಗ್ರಾಹಕರು ಆರಾಮದಾಯಕ ವಾತಾವರಣದಲ್ಲಿ ಶಾಪಿಂಗ್ ಮಾಡುವ ಅನುಭವ ಪಡೆಯಬಹುದು. ಕುಶಾಲನಗರದ ಮಳಿಗೆಯೂ ವಿಭಿನ್ನವಾಗಿ, ಸುಸಜ್ಜಿತವಾಗಿ ರೂಪುಗೊಂಡಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಸಜ್ಜಾಗಿದೆ ಎಂದು ದಿವಾಕರದಾಸ್ ನೇರ್ಲಾಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪುಸ್ತಕಗಳ ದೊಡ್ಡ ಸಂಗ್ರಹವನ್ನು ಅನ್ವೇಷಿಸಲು ಮತ್ತು ಆರಾಮದಾಯಕ ಶಾಪಿಂಗ್ ಅನುಭವವನ್ನು ಪಡೆಯಲು ಕುಶಾಲನಗರದ ಜನತೆ ಈಗ ‘ಎಸ್.ಎಲ್.ವಿ. ಬುಕ್ ಹೌಸ್’ ಕಡೆ ಮುಖಮಾಡಬಹುದು. ಜ್ಞಾನದ ಭಂಡಾರ ನಿಮ್ಮ ಕೈಗೆಟುಕಲು ಸಿದ್ಧವಾಗಿದೆ!

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!