ದೇವಳದ ಅಭಿವೃದ್ಧಿ ಕಾರ್ಯಗಳಲ್ಲಿ ಕಳೆದ 20 ವರ್ಷಗಳಿಂದ ಇಂಜಿನಿಯರ್ […]" /> ದೇವಳದ ಅಭಿವೃದ್ಧಿ ಕಾರ್ಯಗಳಲ್ಲಿ ಕಳೆದ 20 ವರ್ಷಗಳಿಂದ ಇಂಜಿನಿಯರ್ […]"> ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯ ಸಂದರ್ಭ ಪ್ರತಿಭಟನೆ ಸಾಧ್ಯತೆ? ಬಿಗಿ ಬಂದೋಬಸ್ತ್‌ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ - Nikhara News | Kannada News Website
Connect with us

Uncategorized

ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯ ಸಂದರ್ಭ ಪ್ರತಿಭಟನೆ ಸಾಧ್ಯತೆ? ಬಿಗಿ ಬಂದೋಬಸ್ತ್‌ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಆರಂಭವಾಗಲಿದ್ದು, ಈ ವೇಳೆ ಧ್ವಜಾರೋಹಣಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ತೊಂದರೆಯಾಗದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕೆಂದು ಕೋರಿ ಆರ್.ಕೆ.ಪಾಂಗಣ್ಣಾಯ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಎಂಟು ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

 ಮನವಿಯಲ್ಲಿ ಏನಿದೆ?

Ad Widget

Ad Widget alt="Ad Widget"/>

Ad Widget

ದೇವಳದ ಅಭಿವೃದ್ಧಿ ಕಾರ್ಯಗಳಲ್ಲಿ ಕಳೆದ 20 ವರ್ಷಗಳಿಂದ ಇಂಜಿನಿಯರ್ ಹಾಗೂ ವಾಸ್ತು ತಜ್ಞರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರನ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದ ಆರೋಪಿಗೆ ನ್ಯಾಯಾಲಯ ಈಗಾಗಲೇ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆ ನಡೆಯುತ್ತಿದೆ. ಆದರೆ, ಈ ಪ್ರಕರಣದ ಸಂತ್ರಸ್ತೆಯ ತಾಯಿ ಏಪ್ರಿಲ್ 10ರಂದು ಧ್ವಜಾರೋಹಣದ ಸಮಯದಲ್ಲಿ ಧ್ವಜಸ್ತಂಭದ ಅಡಿಯಲ್ಲಿ ಕುಳಿತು ಪ್ರತಿಭಟನೆ ನಡೆಸುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

Ad Widget

Ad Widget <> Ad Widget

ಧಾರ್ಮಿಕ ಕಾರ್ಯಕ್ಕೆ ಅಡ್ಡಿಯಾಗುವ ಭೀತಿ:

ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಆರ್.ಕೆ. ಪಾಂಗಣ್ಣಾಯ ಅವರು, “ಧ್ವಜಸ್ತಂಭದ ಬಳಿ ಪ್ರತಿಭಟನೆ ನಡೆಸಲು ಯಾರಿಗೂ ಅವಕಾಶವಿಲ್ಲ. ನ್ಯಾಯ ಕೇಳುವುದಿದ್ದರೆ ದೇವರಲ್ಲಿ ಪ್ರಾರ್ಥನೆ ಮಾಡಬೇಕು ಅಥವಾ ಸರ್ಕಾರದ ಅನುಮತಿ ಪಡೆದು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟಿಸಬೇಕು. ಅದನ್ನು ಬಿಟ್ಟು ಧ್ವಜಾರೋಹಣದ ವೇಳೆ ಅಡ್ಡಿಪಡಿಸುವುದು ಸರಿಯಲ್ಲ,” ಎಂದು ಹೇಳಿದ್ದಾರೆ.

Ad Widget

Ad Widget

ಒಂದು ವೇಳೆ ಪ್ರತಿಭಟನೆಯಿಂದಾಗಿ ನಿಗದಿತ ಸಮಯದಲ್ಲಿ ಧ್ವಜಾರೋಹಣ ನಡೆಯದಿದ್ದರೆ, ದೇವಳದ ಸಾವಿರಾರು ಭಕ್ತರಿಗೆ ಅನ್ಯಾಯವಾಗುತ್ತದೆ. ಅಲ್ಲದೆ, ಕಾನೂನು ಸುವ್ಯವಸ್ಥೆಗೂ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ ಜಾತ್ರೆಯು ಯಾವುದೇ ಅಡೆತಡೆಯಿಲ್ಲದೆ ನಿರ್ವಿಘ್ನವಾಗಿ ಸಾಗಲು ಪೊಲೀಸ್ ಇಲಾಖೆ ಹಾಗೂ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ತಮ್ಮ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ದೇವಳಕ್ಕೆ ಜಗನ್ನಿವಾಸ ರಾವ್ ಕುಟುಂಬದ ಸೇವೆ:

ಪಿ.ಜಿ. ಜಗನ್ನಿವಾಸ ರಾವ್ ಅವರ ಕುಟುಂಬವು ಕಳೆದ 200 ವರ್ಷಗಳಿಂದ ದೇವಳದ ಸೇವೆ ನಡೆಸುತ್ತಾ ಬಂದಿದೆ. ಕಳೆದ 20 ವರ್ಷಗಳಲ್ಲಿ ಜಗನ್ನಿವಾಸ ರಾವ್ ಅವರು ಯಾವುದೇ ಸಂಭಾವನೆ ಪಡೆಯದೆ ದೇವಳದ ಅಭಿವೃದ್ಧಿಗೆ ಶ್ರಮಿಸಿದ್ದು, ಇದರಿಂದ ದೇವಸ್ಥಾನಕ್ಕೆ ಸುಮಾರು 2 ಕೋಟಿ ರೂಪಾಯಿಗಳಷ್ಟು ಉಳಿತಾಯವಾಗಿದೆ ಎಂದು  ಮನವಿಯಲ್ಲಿ  ಪಾಂಗಣ್ಣಾಯ ಸ್ಮರಿಸಿದ್ದಾರೆ

Ad Widget
1 Comment

1 Comment

  1. ಲಕ್ಷ್ಮೀನಾರಾಯಣ ಭಟ್

    April 8, 2026 at 11:37 am

    ಆರ್. ಕೆ. ಪಾಂಗಣ್ಣಾಯರ ಅಭಿಮತವನ್ನು ಶ್ರೀಮಹತೋಭಾರ ಮಹಾಲಿಂಗೇಶ್ವರ ದೇವರ ಭಕ್ತ ಸಮೂಹ ಬೆಂಬಲಿಸುವoತಹದಾಗಿದೆ.ಯಾವ ಪ್ರಕರಣವು ಎರಡು ಕುಟುಂಬಗಳ ಸೌಹಾರ್ದಯುತ ಮಾತುಕತೆಯಿಂದ ಪರಿಹಾರ ಕಾಣುತ್ತಿತ್ತೋ ಅಂತಹದನ್ನು ಸಂತ್ರಸ್ತೆಯ ತಾಯಿ ರಾಜಕೀಯಗೊಳಿಸಿದ್ದಲ್ಲದೆ ಕಾನೂನಿನ ಮೂಲಕವೇ ಪರಿಹಾರ ಪಡೆಯುವ ಹಾದಿಯಲ್ಲಿ ಸಾಗಿರುವಾಗ ದೇವಳದಲ್ಲಿ ಪ್ರತಿಭಟನೆ ಮಾಡುವ ತೀರ್ಮಾನ ತೆಗೆದುಕೊಂಡಿರುವುದು ನ್ಯಾಯಾoಗಕ್ಕೆ ಮಾಡಿದ ಅವಮಾನವೆನ್ನಬಹುದು.ನ್ಯಾಯಾಂಗದಲ್ಲಿ ನಂಬಿಕೆಯಿಲ್ಲದೆ ಇದ್ದ ಪಕ್ಷದಲ್ಲಿ ಕಾನೂನಿನ ಮೊರೆ ಹೋಗಬಾರದಿತ್ತು. ನಂಬಿಕೆಯಿದ್ದು ಮೊರೆ ಹೋಗಿದ್ದ ಪಕ್ಷದಲ್ಲಿ ಅಲ್ಲಿಂದ ಬರುವ ತೀರ್ಮಾನವನ್ನು ಒಪ್ಪಿಕೊಳ್ಳುವ ಮನೋಭಾವ ಆಕೆಗೆ ಇರಬೇಕಿತ್ತು. ಈಗ ಪ್ರಕರಣವನ್ನು ದೇವಳದ ಆಚರಣೆಗಳಿಗೆ ಅಡ್ಡಿ ಪಡಿಸುವ ತೀರ್ಮಾನ ಮಾಡಿರುವುದು ಸರಿಯೆನಿಸುತ್ತಿಲ್ಲ.ಇದರ ಜೊತೆಯಲ್ಲಿಯೇ ಕುಲ್ಕುಂದದ ಸಂಘಟನೆಯೊಂದು ಮೂಗುತೂರಿಸಿ ಗೊಂದಲಕ್ಕೆ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವಂತಿದೆ. ಕಳೆದ ಎರಡು ಶತಮಾನಗಳಿಂದ ನಡೆದುಕೊಂಡು ಪದ್ಧತಿಯಲ್ಲಿ ದೋಷ ಕಂಡು ಹುಡುಕಿ ಗೊಂದಲವನ್ನು ಉದ್ಪನ ಗೊಳಿಸುವ ಕಾರ್ಯವೆಸಗುತ್ತಿದೆ.ಇದು ಸರಿಯೆನಿಸುತ್ತಿಲ್ಲ. ಆದ ಕಾರಣ ಸರಕಾರ ಸಕಾಲಿಕ ಯೋಗ್ಯ ಕ್ರಮ ಕೈಗೊಳ್ಳಬೇಕಿದೆ.

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!