Uncategorized
ಐದು ದಶಕಕ್ಕೂ ಅಧಿಕ ಕಾಲದಿಂದ ವೈದಕೀಯ ಸೇವೆಯಲ್ಲಿ ನಿರತರಾಗಿರುವ ಪುತ್ತೂರಿನ ಜನಪ್ರಿಯ ವೈದ್ಯ, ಡಾ. ಪ್ರಸಾದ್ ಎಮ್.ಕೆ. ಭಂಡಾರಿಯವರಿಗೆ ಪ್ರತಿಷ್ಟಿತ ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ಡೇ ಅವಾರ್ಡ್

ಪುತ್ತೂರು: ಪುತ್ತೂರಿನ ಜನಪ್ರಿಯ ವೈದ್ಯ, 5 ದಶಕಕ್ಕೂ ಅಧಿಕ ಕಾಲದಿಂದ ವೈದಕೀಯ ಸೇವೆಯಲ್ಲಿ ನಿರತರಾಗಿರುವ ಆದರ್ಶ ಆಸ್ಪತ್ರೆಯ ವೈದ್ಯ ಡಾ. ಪ್ರಸಾದ್ ಎಮ್.ಕೆ. ಭಂಡಾರಿಯವರಿಗೆ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(IMA) ವೈದ್ಯರ ದಿನದ ಪ್ರಶಸ್ತಿ ಲಭಿಸಿದೆ.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ ಈ ಪ್ರಶಸ್ತಿಗೆ ಡಾ. ಪ್ರಸಾದ್ ಅವರ ಹೆಸರನ್ನು ಆಯ್ಕೆ ಮಾಡಿದೆ. ಐ.ಎಮ್.ಎ.-ಕೆ.ಎಸ್.ಬಿ ನೀಡುವ ಡಾಕ್ಟರ್ಸ್ಡೇ ಅವಾರ್ಡ್ ನ್ನು ಪ್ರತಿವರ್ಷ ಸಿಮೀತ ವ್ಯಕ್ತಿಗಳಿಗಷ್ಟೇ ನೀಡುತ್ತಿದೆ.ಡಾ. ಪ್ರಸಾದ್ ಭಂಡಾರಿಯವರು ಐಎಮ್ಎಯ ಕಾರ್ಯಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡ ಹಿನ್ನಲೆಯಲ್ಲಿ ಹಾಗೂ ಅವರು ನೀಡಿದ ಉತ್ತಮ ವೈದ್ಯಕೀಯ ಸೇವೆ ಮತ್ತು ಸಮಾಜಮುಖೀ ಕೆಲಸಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ವೈದ್ಯರ ದಿನವಾದ ಜು.1ರಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಕ್ಯಾಂಪಸ್ನ ಬಿಎಂಸಿ ಅಲುಮ್ನಿಂ ಅಸೋಸಿಯೇಷನ್ ಕಟ್ಟಡದ ಡಾ. ಬಸವ ರಾಜೇಂದ್ರ ಆಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕದ ಮಾಜಿ ಲೋಕಾಯುಕ್ತ, ಎನ್. ಸಂತೋಷ್ ಹೆಗ್ಡೆಯವರಿಂದ ಡಾ. ಪ್ರಸಾದ್ ಭಂಡಾರಿಯವರು ಪ್ರಶಸ್ತಿ ಸೀಕರಿಸಲಿದ್ದಾರೆ.
ಪುತ್ತೂರು IMA ಬ್ರಾಂಚ್ ಇತಿಹಾಸದಲ್ಲಿ ಮೊದಲ ಬಾರಿ: ಪುತ್ತೂರು ವೈದ್ಯಕೀಯ ಸಂಘದ ಇತಿಹಾಸದಲ್ಲಿ ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಪ್ರಶಸ್ತಿ ಮೊದಲ ಬಾರಿಗೆ ಪುತ್ತೂರಿನ ವೈದ್ಯರಿಗೆ ಲಭಿಸಿದೆ.
1967ರಲ್ಲಿ ಎಂಬಿಬಿಎಸ್ ವ್ಯಾಸಂಗ ಮುಗಿಸಿದ ಡಾ. ಪ್ರಸಾದ್ ಅವರು ಸರಕಾರಿ ವೈದ್ಯರಾಗಿ ವೈದಕೀಯ ಸೇವೆ ಆರಂಭಿಸಿದರು. 90ರ ದಶಕದ ಆರಂಭದಲ್ಲಿ ಸರಕಾರಿ ಸೇವೆಯಿಂದ ನಿವೃತ್ತಿ ಪಡೆದು ಹೊರ ಬಂದ ಅವರು ಬಳಿಕ ಖಾಸಗಿಯಾಗಿ ವೈದಕೀಯ ಸೇವೆ ನೀಡಲು ಆರಂಭಿಸಿದರು. ಖಾಸಗಿ ಕ್ಲಿನಿಕ್ ತೆರೆದರು ಹೆಚ್ಚಿನ ವೈದರುಗಳಂತೆ ಹಣ ಮಾಡುವ ಉದ್ದೇಶ ಹೊಂದದೆ, ಬಡ ಜನರಿಗೆ ಕಡಿಮೆ ವೆಚ್ಚದಲ್ಲಿ ವೈದಕೀಯ ಸೇವೆ ನೀಡಿದವರು. ಅವರು ಕನ್ಸಲ್ಟಿಂಗ್ ಗೆ ಈಗಲೂ ಕೇವಲ 10 ರೂಪಾಯಿ ಪೀಸ್ ಪಡೆಯುವ ಮೂಲಕ ಉಳಿದ ವೈದ್ಯರಿಗಿಂತ ಭೀನ್ನ ಪಥದಲ್ಲಿ ಸಾಗುತ್ತಿದ್ದಾರೆ
ಇದು ಮಾತ್ರವಲ್ಲದೇ ಅಪ್ಪಟ್ಟ ಹಿಂದುತ್ವಾದಿಯಾಗಿರುವ ಅವರು ಈ ನಿಟ್ಟಿನಲ್ಲಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರನ ವಠಾರದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಇವರ ಪ್ರಯತ್ನದ ಫಲ. ಇದನ್ನುಅಂದಿನಿಂದ ಇಂದಿನವರೆಗೆ ಮುನ್ನಡೆಸಿಕೊಂಡು ಹೋಗುತ್ತಿರುವವರು ಅವರೇ. ಅಲ್ಲದೇ, ಹಿಂದೂ ಜಾಗರಣೆ ವೇಧಿಕೆ ಸಹಿತ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
















Pingback: ಜು.14ರಂದು 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎï