ಶಿಕ್ಷಣ
ಸಂತ ಫಿಲೋಮಿನಾ ಕಾಲೇಜಿನ ತೇಜಸ್ವಿ ಭಟ್ ಕೆ – NCC ಸಬ್ ಲೆಫ್ಟಿನೆಂಟ್ ಆಗಿ ನೇಮಕ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ತೇಜಸ್ವಿ ಭಟ್ ಕೆ ನಾಗ್ಪುರದ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (ಕಾಂಪ್ಟಿ) ನಡೆಯುವ ಪ್ರತಿಷ್ಠಿತ ಪ್ರೀ-ಕಮಿಷನ್ ಕೋರ್ಸ್ (PRCN) ಯಶಸ್ವಿಯಾಗಿ ಪೂರ್ಣಗೊಳಿಸಿ ರಾಷ್ಟ್ರೀಯ ಕ್ಯಾಡೆಟ್ ಕಾರ್ಪ್ಸ್ (NCC) ನಲ್ಲಿ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ.
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ತೇಜಸ್ವಿ ಭಟ್ ಕೆ ನಾಗ್ಪುರದ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (ಕಾಂಪ್ಟಿ) ನಡೆಯುವ ಪ್ರತಿಷ್ಠಿತ ಪ್ರೀ-ಕಮಿಷನ್ ಕೋರ್ಸ್ (PRCN) ಯಶಸ್ವಿಯಾಗಿ ಪೂರ್ಣಗೊಳಿಸಿ ರಾಷ್ಟ್ರೀಯ ಕ್ಯಾಡೆಟ್ ಕಾರ್ಪ್ಸ್ (NCC) ನಲ್ಲಿ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ.
ಜನವರಿ 5ರಿಂದ ಏಪ್ರಿಲ್ 4, 2026 ರವರೆಗೆ ನಡೆದ ಈ ತರಬೇತಿಯಲ್ಲಿ, ಅವರು NCC ಕೆಡೆಟ್ಗಳಿಗೆ ಮಾರ್ಗದರ್ಶನ ನೀಡಲು ವಿನ್ಯಾಸಗೊಳಿಸಲಾದ ನಾಯಕತ್ವ, ಶಿಸ್ತು ಮತ್ತು ಸಂಘಟನಾ ಚಾತುರ್ಯ ಮುಂತಾದ ವಿಷಯಗಳ ಕುರಿತು ತರಬೇತಿ ಪಡೆದುಕೊಂಡರು. NCC (DGNCC) ಯ ಮಹಾನಿರ್ದೇಶಕರು ಇವರಿಗೆ NCC ಸಬ್ ಲೆಫ್ಟಿನೆಂಟ್ ಪದವಿಯನ್ನು ನೀಡಿರುತ್ತಾರೆ.
ತೇಜಸ್ವಿ ಭಟ್ ಕೆ ತಮ್ಮ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನಲ್ಲಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಸಂತ ಫಿಲೋಮಿನಾ ಕಾಲೇಜಿಲ್ಲಿಪೂರೈಸಿ, ಹತ್ತು ವರ್ಷಗಳಿಂದ ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೆನ್ಹಾಸ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
“ತೇಜಸ್ವಿ ಭಟ್ ಕೆ ನಮ್ಮ ಕಾಲೇಜಿನ ಹೆಮ್ಮೆಯ ಹಿರಿಯ ವಿದ್ಯಾರ್ಥಿ. ತಮ್ಮ ವಿದ್ಯಾರ್ಥಿ ದಿನಗಳಲ್ಲಿ ಸೀನಿಯರ್ ಅಂಡರ್ಆಫೀಸರ್ ಆಗಿದ್ದ ಅವರು ತೀವ್ರ ಪರಿಶ್ರಮ, ಶಿಸ್ತು ಮತ್ತು ಸಮರ್ಪಣೆಯಿಂದ PRCN ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ NCC ನಲ್ಲಿ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡಿರುವುದು ಪ್ರಶಂಸಾರ್ಹ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ, ಪ್ರಾಂಶುಪಾಲರು
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಬಿಗ್ ನ್ಯೂಸ್14 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ13 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಅಂತರ ರಾಜ್ಯ11 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ12 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸುಳ್ಯ8 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ11 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ13 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ8 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!

















