ಪುತ್ತೂರು
Second PU Result : ಪುತ್ತೂರಿನ ನರೇಂದ್ರ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ. 98 ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಕೆ. 593 (ಶೇ.98.8 ) ಪ್ರಥಮ, ವಿಜ್ಞಾನ ವಿಭಾಗದಲ್ಲಿ ನಂದನ 590 (ಶೇ. 98.3) ಪ್ರಥಮ
ಪುತ್ತೂರು: 2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ.97 ಫಲಿತಾಂಶವನ್ನು ಪಡೆದಿದೆ.
ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಕೆ. 593(98.8%) ಅಂಕಗಳನ್ನು ಗಳಿಸುವುದರ ಮೂಲಕ ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಶಷ್ಟಿಕಾ ಎಮ್.ಕೆ. (589 ), ಶಾಲ್ಮಲಿ ಆರ್. ಎಸ್. (579 ), ಶರಣ್ಯ (575 ), ಎಮ್. ಎಸ್. ಶರ್ವಾಣಿ ಆಚಾರ್ಯ ( 532), ಪಲ್ಲವಿ ಎಮ್.(527), ಸಿಂಧು ಸರಳಾಯ (525 )ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ನಂದನಾ 590(98.3%) ಅಂಕಗಳನ್ನು ಗಳಿಸುವುದರ ಮೂಲಕ ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಸಿಂಚನಾ ಜೆ.ಎನ್. (587 ), ತೃಷಾ ಕೆ. ಆರ್. (585 ), ಅರ್ಚನಾ (583 ), ಪಿ. ಕವನಶ್ರೀ (579 ), ಪ್ರಕೃತಿ ವಿ. ರೈ (575 ), ರಶ್ಮಿತಾ ಎ. ಪಿ. ( 574), ಲಿತಿಕಾ (572 ), ಸಹನಾ ಎನ್. ( 567), ಮೋಕ್ಷಾ ಸಿ, ಕೆ. ( 564), ಮೋಕ್ಷಾ ಬಿ. (561 ), ರಿತಿಕಾ ಬಿ. ಆರ್. (559 ), ಅನುಷಾ ಎನ್. ಜೆ. ( 558)
ಸನಿಕ ಪಿ. ರೈ (554 ), ಎ. ಶ್ರವಣ ಕುಮಾರ್ (554 ), ಹರಿಣಿ ಗೌಡ(553), ಸಿಂಚನಾ ಪಿ.ಜಿ. (546 ), ಹರ್ಷಿತಾ ( 542), ರೇಖಾ ಎಲ್.(542), ಭವಿತ್ ಎಮ್. (536 ), ಗಾಯನ ಎ. (534 ), ಅಖಿಲೇಶ್(534), ಪೂರ್ವಿ ಬಿ. ಎಚ್.( 533), ಅನುಶ್ರೀ ವಿ. ( 531), ಶೃತಿ ಎನ್.ಕೆ.(527), ಸಹನಾ ಎಮ್. (522 ), ಇಂಚರ (521 ), ಪಲ್ಲವಿ(518), ಕೆ. ಭವಿಷ್ಯಾ ( 516), ಆಕಾಶ್ ( 516), ಶ್ರಾವ್ಯಶ್ರೀ ಕೆ.(510), ಪ್ರಜ್ವಲ್ ಎ.(510) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶೇ.98 ಫಲಿತಾಂಶ ಲಭಿಸಿದೆ.
ದ್ವಿತೀಯ ಪಿಯುಸಿಯ ಒಟ್ಟು 39 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡು ಕಾಲೇಜಿಗೆ ಶೇ.97 ಫಲಿತಾಂಶ ಲಭಿಸಿರುತ್ತದೆ.ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.
ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.
ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ್ಯಕ್ರಮವನ್ನು ನಿರೂಪಿಸಿದರು.
-
ಶಿಕ್ಷಣ24 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು24 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಅಪರಾಧ7 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಅಪರಾಧ24 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















