ಸಾಧನೆ ಮೆರೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ. ಎಕ್ಸೆಲ್ ಸಾಧನೆ:ಎಕ್ಸೆಲ್ ವಿದ್ಯಾಸಂಸ್ಥೆ ಸತತ ಐದು ವರ್ಷಗಳಿಂದ […]" /> ಸಾಧನೆ ಮೆರೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ. ಎಕ್ಸೆಲ್ ಸಾಧನೆ:ಎಕ್ಸೆಲ್ ವಿದ್ಯಾಸಂಸ್ಥೆ ಸತತ ಐದು ವರ್ಷಗಳಿಂದ […]"> ಎಕ್ಸೆಲ್ ಗುರುವಾಯನಕೆರೆಯಲ್ಲಿ 1334 ಡಿಸ್ಟಿಂಕ್ಷನ್..! ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯದ 10 ಅಗ್ರ ಸ್ಥಾನಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು- ಈ ಸಾಧನೆ ಮಾಡಿರುವ ರಾಜ್ಯದ ಏಕೈಕ ವಿದ್ಯಾ ಸಂಸ್ಥೆ - Nikhara News | Kannada News Website
Connect with us

ಬಿಗ್ ನ್ಯೂಸ್

ಎಕ್ಸೆಲ್ ಗುರುವಾಯನಕೆರೆಯಲ್ಲಿ 1334 ಡಿಸ್ಟಿಂಕ್ಷನ್..! ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯದ 10 ಅಗ್ರ ಸ್ಥಾನಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು- ಈ ಸಾಧನೆ ಮಾಡಿರುವ ರಾಜ್ಯದ ಏಕೈಕ ವಿದ್ಯಾ ಸಂಸ್ಥೆ –

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ಧು, ರಾಜ್ಯದ ಅಗ್ರ 10 ಸ್ಥಾನಗಳಲ್ಲಿ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾಸಂಸ್ಥೆಯ 34 ವಿದ್ಯಾರ್ಥಿಗಳು ಈ ಸಾಧನೆ ಮೆರೆದ ಮೂಲಕ ರಾಜ್ಯದ ಏಕಮೇವ ವಿದ್ಯಾ ಸಂಸ್ಥೆ ಎಕ್ಸೆಲ್ ಗುರುವಾಯನಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

Ad Widget

Ad Widget

ರಾಜ್ಯ ಮಟ್ಟದ ತೃತೀಯ ಮತ್ತು ಬೆಳ್ತಂಗಡಿ ತಾಲೂಕಿನ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಎಕ್ಸೆಲ್ ಗುರುವಾಯನಕೆರೆ ಪಾಲಿಗೆ ಸಂದಿವೆ

Ad Widget

Ad Widget alt="Ad Widget"/>

Ad Widget

ಸಾಧನೆ ಮೆರೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ.

Ad Widget

Ad Widget <> Ad Widget

  1. ಯಾನ ಪೊನ್ನಮ್ಮ- 597
  2. ಶ್ರೀವತ್ಸ ಯು – 597
  3. ಅಕ್ಷಯ್ ಎ – 595
  4. ಸುಷ್ಮಿತ- 594
  5. ಅನಿಶಾ – 594
  6. ರೋಹಿತ್ ಮಹಾಂತೇಶ್- 594
  7. ಶಿಲ್ಪಿತಾ ಹೆಚ್ ಎಸ್- 594
  8. ಮೋನಿಕಾ ಹೆಚ್ – 593
  9. ಅನ್ವೇಷಾ ಜಿ ಭಟ್ – 592
  10. ಕಾಶ್ಮೀ ವಿ ಯು – 592
  11. ನಿಶ್ಚಿತಾ ಸಿ- 592
  12. ಪರೇಶ್ ಪಿ ಗೋವಂಕರ್- 592
  13. ಪ್ರಗತಿ ಎಂ ಆರ್- 592
  14. ರಿಹಾ ಪರ್ವಿನ್ – 592
  15. ಅಭೀಷ್ಟ – 592
  16. ಆಶಿತಾ – 592
  17. ಕೃಪಾಶ್ರೀ- 592
  18. ಯುಕ್ತಿ- 592
  19. ಅಖಿಲ್ ಅನಿಲ್- 591
  20. ಭೂಮಿಕಾ- 591
  21. ಮನ್ವಿತ್ ಕೃಷ್ಣ ಎಸ್ ವಿ- 591
  22. ಮಿಶ್ಬಾ- 591
  23. ಅಭಿನವ್ – 590
  24. ಅದವಿಯ ಯು- 590
  25. ಅಶ್ರೀಫಾ ಫಾತಿಮಾ – 590
  26. ಅಕ್ಷರಾ -590
  27. ಧನ್ಯಶ್ರೀ – 590
  28. ದರ್ಶನ್ ರಾವ್ – 590
  29. ಕೌಶಲ್ ಎಲ್ ಕುಲಾಲ್ – 590
  30. ನಿತ್ಯಾ ಶಿವಪ್ರಸಾದ್ ದಿಂಡೆ- 590
  31. ಪಿ ಪೂರ್ವಿ ಶಾನ್ ಭಾಗ್ -590
  32. ಸೌಧಾ ಅಂಬರ್ – 590
  33. ತಜ್ಞಾ ಟಿ ಎಸ್ – 590
  34. ವಿವೇಕ್ ಎಸ್ ಭಟ್ – 590

ಎಕ್ಸೆಲ್ ಸಾಧನೆ:
ಎಕ್ಸೆಲ್ ವಿದ್ಯಾಸಂಸ್ಥೆ ಸತತ ಐದು ವರ್ಷಗಳಿಂದ 100% ಫಲಿತಾಂಶ ದಾಖಲಿಸಿದೆ. 90% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದ ರಾಜ್ಯದ ಏಕಮೇವ ವಿದ್ಯಾಸಂಸ್ಥೆ ಇದಾಗಿದ್ದು, ಒಟ್ಟು 1334 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದೆ ⁠

ಎಕ್ಸೆಲ್ ನಲ್ಲಿ 58 % ವಿದ್ಯಾರ್ಥಿಗಳ ಅಂಕ ಹತ್ತನೇ ತರಗತಿಗಿಂತ 40% ಹೆಚ್ಚಳವಾಗಿರುವುದು ಈ ಶಿಕ್ಷಣ ಸಂಸ್ಥೆಯ ಮತ್ತೊಂದು ಹೆಗ್ಗಳಿಕೆಯಾಗಿದೆ.

Ad Widget

Ad Widget

ಇದರೊಂದಿಗೆ ಇತ್ತೀಚಿಗೆ ನಡೆದ JEE ಮೇನ್ಸ್ ಪರೀಕ್ಷೆಯಲ್ಲಿ ದ.ಕ ಜಿಲ್ಲೆಗೆ ಎಕ್ಸೆಲ್ ಪ್ರಥಮ ಸ್ಥಾನ ಗಳಿಸಿದೆ. ಇದುವರೆಗೂ 17 ವಿದ್ಯಾರ್ಥಿಗಳನ್ನು ಐಐಟಿ ಗೆ ಕಳಿಸಿರುವ ಗ್ರಾಮೀಣ ಪ್ರದೇಶದ ಮಕ್ಕಳ ನೆಚ್ಚಿನ ವಿದ್ಯಾಸಂಸ್ಥೆಯಾಗಿದೆ.

ಮೆಡಿಕಲ್ ಕ್ಷೇತ್ರದಲ್ಲಿ ಇದುವರೆಗೂ 6 ಮಕ್ಕಳನ್ನು ಏಮ್ಸ್ ಮತ್ತು ಜಿಪ್ ಮೆರ್ ಕಳುಹಿಸಿದ ಹೆಮ್ಮೆ ಎಕ್ಸೆಲ್ ನದ್ದು.

ಕಳೆದ ವರ್ಷ 248 ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾಡಿಸಿರುವ ಕರ್ನಾಟಕದ ಅದ್ವಿತೀಯ ಪಿಯು ಕಾಲೇಜು.

ಕಳೆದ ವರ್ಷ ವಿದ್ಯಾರ್ಥಿಗಳ NDA ಪರೀಕ್ಷೇಯ ಕನಸನ್ನು ನನಸು ಮಾಡಿದ ಸಾರ್ಥಕತೆ ಎಕ್ಸೆಲ್ ನದ್ದು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!