Connect with us

ಸ್ಥಳೀಯ

Bellary-ದ್ವಿತೀಯ ಪಿಯುಸಿ ಫಲಿತಾಂಶ: ಬಳ್ಳಾರಿ ಜೈಲಿನಲ್ಲಿ ಜೀವಾವಧಿ ಶಿಕ್ಷಿತ ಕೈದಿಯಿಂದ ‘ಫಸ್ಟ್‌ ಕ್ಲಾಸ್‌’ ಸಾಧನೆ..!

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಲವು ಅಪರೂಪದ ಸಾಧನೆಗಳು ಹೊರಬಂದಿವೆ. ಬಳ್ಳಾರಿಯ ಕೇಂದ್ರ ಕಾರಗೃಹದ ಜೀವಾವಧಿ ಶಿಕ್ಷಿತ ಕೈದಿಯೊಬ್ಬರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವ ಮೂಲಕ ಗಮನ ಸೆಳೆದರೆ, ಶಿರಸಿಯಲ್ಲಿ ವ್ಯಾಪಾರಿಯೊಬ್ಬರ ಮಗ ಸಾಧನೆಯ ಶಿಖರಕ್ಕೇರಿದ್ದಾನೆ. ಮತ್ತೊಂದೆಡೆ, ಅಖಂಡ ಬಳ್ಳಾರಿ ಜಿಲ್ಲೆಯ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ.

Ad Widget

Ad Widget

Ad Widget

Ad Widget

ಬಳ್ಳಾರಿ/ಶಿರಸಿ: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಲವು ಅಪರೂಪದ ಸಾಧನೆಗಳು ಹೊರಬಂದಿವೆ. ಬಳ್ಳಾರಿಯ ಕೇಂದ್ರ ಕಾರಗೃಹದ ಜೀವಾವಧಿ ಶಿಕ್ಷಿತ ಕೈದಿಯೊಬ್ಬರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವ ಮೂಲಕ ಗಮನ ಸೆಳೆದರೆ, ಶಿರಸಿಯಲ್ಲಿ ವ್ಯಾಪಾರಿಯೊಬ್ಬರ ಮಗ ಸಾಧನೆಯ ಶಿಖರಕ್ಕೇರಿದ್ದಾನೆ. ಮತ್ತೊಂದೆಡೆ, ಅಖಂಡ ಬಳ್ಳಾರಿ ಜಿಲ್ಲೆಯ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಜೈಲಿನ ಕತ್ತಲಲ್ಲೂ ಮೂಡಿದ ಸಾಧನೆಯ ಬೆಳಕು
ಬಳ್ಳಾರಿ ಕೇಂದ್ರ ಕಾರಗೃಹದಲ್ಲಿ ಕಳೆದ 9 ವರ್ಷಗಳಿಂದ ಕೊಲೆ ಪ್ರಕರಣದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬೆಂಗಳೂರು ಮೂಲದ ಎಸ್‌. ಅಶೋಕ್‌ ಕುಮಾರ್‌ ಕಲಾ ವಿಭಾಗದಲ್ಲಿ ಶೇಕಡಾ 80.16ರಷ್ಟು (ಪ್ರಥಮ ದರ್ಜೆ) ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

Ad Widget

Ad Widget <> Ad Widget

ಜೈಲು ಅಧಿಕಾರಿಗಳ ಸಹಕಾರ: ಶಿಕ್ಷಣದ ಮೇಲೆ ಆಸಕ್ತಿ ಹೊಂದಿದ್ದ ಅಶೋಕ್‌ಗೆ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆ ಬರೆಯಲು ಪ್ರೋತ್ಸಾಹ ನೀಡಿದ್ದರು. ಅಭ್ಯಾಸಕ್ಕಾಗಿ ಪ್ರತ್ಯೇಕ ಕೊಠಡಿ ಮತ್ತು ಪಠ್ಯಪುಸ್ತಕಗಳ ಸೌಲಭ್ಯ ಕಲ್ಪಿಸಲಾಗಿತ್ತು.



Ad Widget

ಈತನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅಧಿಕಾರಿಗಳು, ಮುಂದಿನ ಪದವಿ ಶಿಕ್ಷಣಕ್ಕೂ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.

Ad Widget

Ad Widget

ಬಳ್ಳಾರಿ ಜಿಲ್ಲೆಯ ಫಲಿತಾಂಶದಲ್ಲಿ ಭರ್ಜರಿ ಜಿಗಿತ
ಕಳೆದ ಕೆಲವು ವರ್ಷಗಳಿಂದ ಫಲಿತಾಂಶದಲ್ಲಿ ಹಿಂದೆ ಬಿದ್ದಿದ್ದ ಬಳ್ಳಾರಿ ಜಿಲ್ಲೆ ಈ ಬಾರಿ ಅಭೂತಪೂರ್ವ ಚೇತರಿಕೆ ಕಂಡಿದೆ.
ಅಂಕಿ-ಅಂಶ: ಕಳೆದ ಬಾರಿ ಶೇ. 64.41ರಷ್ಟಿದ್ದ ಫಲಿತಾಂಶವು ಈ ಬಾರಿ ಶೇ. 78.92ಕ್ಕೆ ಏರಿಕೆಯಾಗಿದೆ. ಅಂದರೆ ಶೇ. 14ರಷ್ಟು ಹೆಚ್ಚಿನ ಸಾಧನೆ ದಾಖಲಾಗಿದೆ.

ಜಿಲ್ಲೆಯ ಒಟ್ಟು 13,112 ವಿದ್ಯಾರ್ಥಿಗಳಲ್ಲಿ 10,399 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಿಸಿರುವುದನ್ನು ಇದು ತೋರಿಸುತ್ತಿದೆ. ಈ ಹಿಂದೆ 2021-22ರಲ್ಲಿ ರಾಜ್ಯಕ್ಕೆ 31ನೇ ಸ್ಥಾನಕ್ಕೆ ಕುಸಿದಿದ್ದ ಜಿಲ್ಲೆ, ಈಗ ಹಂತ ಹಂತವಾಗಿ ಮುನ್ನಡೆಯುತ್ತಿದೆ.

ಶಿರಸಿ: ಉಳ್ಳಾಗಡ್ಡಿ ವ್ಯಾಪಾರಿ ಮಗನಿಗೆ ಶೇ. 94 ಅಂಕ
ಸಾಧನೆ ಬಡತನದ ಹಂಗಿಲ್ಲ ಎಂಬುದನ್ನು ಶಿರಸಿಯ ರಾಘವೇಂದ್ರ ಘನಶ್ಯಾಮ್‌ ಪ್ರಭು ಸಾಬೀತುಪಡಿಸಿದ್ದಾನೆ. ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜಿನ ಈ ವಿದ್ಯಾರ್ಥಿ ವಾಣಿಜ್ಯ ವಿಭಾಗದಲ್ಲಿ ಶೇ. 94ರಷ್ಟು (563/600) ಅಂಕ ಗಳಿಸಿದ್ದಾನೆ.

ಹಿನ್ನೆಲೆ: ರಾಘವೇಂದ್ರನ ತಂದೆ ಕಳೆದ 30 ವರ್ಷಗಳಿಂದ ಉಳ್ಳಾಗಡ್ಡಿ (ಈರುಳ್ಳಿ) ವ್ಯಾಪಾರ ಮಾಡುತ್ತಿದ್ದಾರೆ. ಮಗ ಓದಿನ ನಡುವೆಯೇ ತಂದೆಯ ವ್ಯಾಪಾರದಲ್ಲೂ ನೆರವಾಗುತ್ತಿದ್ದು, ಈ ಸಾಧನೆ ಮಾಡಿರುವುದು ಕುಟುಂಬಕ್ಕೆ ಹೆಮ್ಮೆ ತಂದಿದೆ.

ಅಂಕಗಳ ವಿವರ: ಸಂಸ್ಕೃತ 97, ಅರ್ಥಶಾಸ್ತ್ರ 95, ಬ್ಯುಸಿನೆಸ್‌ ಸ್ಟಡಿ 97, ಅಕೌಂಟೆನ್ಸಿ 94 ಅಂಕಗಳನ್ನು ಗಳಿಸಿರುವ ಈತ ಮುಂದೆ ಬಿಕಾಂ ಮಾಡುವ ಹಂಬಲ ಹೊಂದಿದ್ದಾನೆ.

ಈ ಬಾರಿಯ ಫಲಿತಾಂಶವು ಕೇವಲ ಅಂಕಗಳಿಕೆಯಾಗಿರದೆ, ಛಲ ಮತ್ತು ಶ್ರಮವಿದ್ದರೆ ಯಾವುದೇ ಸಂದರ್ಭದಲ್ಲೂ ಯಶಸ್ಸು ಗಳಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದೆ.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading